

ಬಿಬಿಎಂಪಿ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’:
ಕೊರೋನಾ ಎರಡನೇ ಅಲೆ ಸೃಷ್ಟಿಯಾದ ಮೇಲೆ ಸಾಕಷ್ಟು ಮಂದಿಗೆ ಪಾಸಿಟಿವ್ ಬಂದಿದೆ, ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು, ಶ್ರೀಮಂತರು ಕೂಡ ಸೋಂಕಿಗೆ ತುತ್ತಾಗುತ್ತಿದ್ದಾರೆ.


ಬೆಂಗಳೂರು: ಕೊರೋನಾ ಎರಡನೇ ಅಲೆ ಸೃಷ್ಟಿಯಾದ ಮೇಲೆ ಸಾಕಷ್ಟು ಮಂದಿಗೆ ಪಾಸಿಟಿವ್ ಬಂದಿದೆ, ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು, ಶ್ರೀಮಂತರು ಕೂಡ ಸೋಂಕಿಗೆ ತುತ್ತಾಗುತ್ತಿದ್ದಾರೆ.
ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಆರೋಪ ಸಾಕಷ್ಟು ಕೇಳಿಬರುತ್ತಿದೆ. ಕೊರೋನಾ ಪಾಸಿಟಿವ್ ಗೆ ಒಳಗಾಗಿರುವ ನಟಿ ಅನು ಪ್ರಭಾಕರ್ ಕೂಡ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ.



https://imasdk.googleapis.com/js/core/bridge3.453.0_en.html#goog_991378963
ಮೊನ್ನೆ ಏಪ್ರಿಲ್ 17ರಂದು ನಟಿ ಅನು ಪ್ರಭಾಕರ್ ಗೆ ಕೊರೋನಾ ಸೋಂಕು ಇರುವುದು ಗೊತ್ತಾಯಿತು. ಅದಾಗಿ ಐದು ದಿನ ಕಳೆದರೂ ಇನ್ನೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಡೆಯಿಂದ ಪ್ರತಿಕ್ರಿಯೆಯೇ ಬಂದಿಲ್ಲವಂತೆ. ಕೊರೋನಾ ದೃಢಪಟ್ಟು 5 ದಿನವಾಗಿದೆ, ಹೋಂ ಐಸೊಲೇಷನ್ ನಲ್ಲಿದ್ದೇನೆ. ಆದರೆ ಬಿಬಿಎಂಪಿ ಕಡೆಯಿಂದ ಯಾವ ಫೋನ್ ಬಂದಿಲ್ಲ, ಕೋವಿಡ್ ವಾರ್ ವೆಬ್ ಸೈಟ್ ನಲ್ಲಿ ತಮ್ಮ ಹೆಸರು ಅಪ್ಡೇಟ್ ಕೂಡ ಆಗಿಲ್ಲ, ಇನ್ನೂ ನನಗೆ ಬಿಯು ಸಂಖ್ಯೆ ಬಂದಿಲ್ಲ, ಈ ವಿಷಯವನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇನೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರ ಟ್ವಿಟ್ಟರ್ ಖಾತೆಯನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






