ಕಾರವಾರದಲ್ಲಿ ಮದುವೆಗೆ ಹೋದ ಅತಿಥಿಗಳು ಊಟ ಮಾಡದೆ ವಾಪಸ್!

ಸರ್ಕಾರದ ಕೊರೋನಾ ಮಾರ್ಗಸೂಚಿ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶೇಜವಾಡದ ಸದಾನಂದ ಪ್ಯಾಲೇಜ್ ಕಲ್ಯಾಣ ಮಂಟಪಕ್ಕೆ ಮದುವೆಗೆ ಆಗಮಿಸಿದ್ದ ಅತಿಥಿಗಳನ್ನು ಪೊಲೀಸರು ವಾಪಸ್ ಮನೆಗೆ ಕಳುಹಿಸಿದ ಘಟನೆ ನಡೆದಿದೆ.

Vacant marriage hall

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶೇಜವಾಡದ ಸದಾನಂದ ಪ್ಯಾಲೇಜ್ ಕಲ್ಯಾಣ ಮಂಟಪಕ್ಕೆ ಮದುವೆಗೆ ಆಗಮಿಸಿದ್ದ ಅತಿಥಿಗಳನ್ನು ಪೊಲೀಸರು ವಾಪಸ್ ಮನೆಗೆ ಕಳುಹಿಸಿದ ಘಟನೆ ನಡೆದಿದೆ.

ಕೋವಿಡ್ ಮಾರ್ಗಸೂಚಿಯಂತೆ ಕಲ್ಯಾಣ ಮಂಟಪದಲ್ಲಿ ಮದುವೆ ದಿನ ಮಾಸ್ಕ್ ಧರಿಸಿ ಬಹುತೇಕರು ಸ್ಯಾನಿಟೈಸರ್ ಬಳಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮನೆಯವರು ಮದುವೆ ಕಾರ್ಯಕ್ರಮ ನಡೆಸುತ್ತಿದ್ದರು. ಮಾಂಗಲ್ಯ ಧಾರಣೆ ಆಗಿ ಆರತಕ್ಷತೆ ನಡೆಯುತ್ತಿತ್ತು, ಆರತಕ್ಷತೆಗೆ ಸಾಕಷ್ಟು ಅತಿಥಿಗಳು ಬಂದಿದ್ದರು.

ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ 50 ಮಂದಿ ಮಾತ್ರ ಮದುವೆ ಕಾರ್ಯಕ್ರಮದಲ್ಲಿ ಸೇರಬೇಕು. ಅದಕ್ಕಿಂತ ಹೆಚ್ಚು ಜನರು ಇದ್ದ ಕಾರಣ ಕಲ್ಯಾಣ ಮಂಟಪದೊಳಗೆ ಪ್ರವೇಶಿಸಿದ ಪೊಲೀಸರು ಮತ್ತು ಅಧಿಕಾರಿಗಳು ಅತಿಥಿಗಳನ್ನು ಹೊರಗೆ ಕಳುಹಿಸಿದರು. ಕಕ್ಕಾಬಿಕ್ಕಿಯಾದ ಅತಿಥಿಗಳಲ್ಲಿ ಕೆಲವರು ಉಡುಗೊರೆ ನೀಡದೆ, ಊಟವನ್ನೂ ಮಾಡದೆ ಭಯದಿಂದ ಸಭಾಂಗಣದ ಹೊರಗೆ ಹೋದ ಪ್ರಸಂಗ ನಡೆಯಿತು.

ಸರ್ಕಾರದ ಮಾರ್ಗಸೂಚಿಗೂ ಮೊದಲೇ ಮದುವೆ ಆಮಂತ್ರಣ ಪತ್ರಿಕೆ ಹಂಚಿದ ಕಾರಣ ಅತಿಥಿಗಳು ಬಂದಿದ್ದಾರೆ. ಉಳಿದ ಕೋವಿಡ್ ಶಿಷ್ಟಾಚಾರಗಳನ್ನು ಪಾಲಿಸುತ್ತಿದ್ದೇವೆ ಎಂದು ಮದುವೆ ಮನೆಯವರು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದರಿಂದ ಸ್ವಲ್ಪ ಹೊತ್ತಿನ ನಂತರ ಸಾಮಾಜಿಕ ಅಂತರ ಕಾಯ್ದುಕೊಂಡು ಉಡುಗೊರೆ ನೀಡಿ ಊಟ ಮಾಡಿ ಹೋಗಲು ಅವಕಾಶ ನೀಡಿದರು. ಆದರೆ ಕೆಲವರಿಗೆ ಮದುವೆ ಊಟ ಮಿಸ್ಸಾಗಿದ್ದಂತೂ ಹೌದು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *