
ಗೋಲಿಬಾರ್, ಎಕೆ 47, ಸಿಂಹದ ಮರಿಯಂತ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ಮಿಸಿ ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಕೊರೋನಾಗೆ ಬಲಿಯಾಗಿದ್ದಾರೆ.


ಬೆಂಗಳೂರು: ಗೋಲಿಬಾರ್, ಎಕೆ 47, ಸಿಂಹದ ಮರಿಯಂತ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ಮಿಸಿ ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಕೊರೋನಾಗೆ ಬಲಿಯಾಗಿದ್ದಾರೆ.
ನಟಿ ಮಾಲಾಶ್ರೀ ಅವರ ಪತಿ ರಾಮು ಅವರ ಆರೋಗ್ಯದಲ್ಲಿ ಏರು ಪೇರು ಉಂಟಾದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ನಗರದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

52 ವರ್ಷದ ರಾಮು ಅವರಿಗೆ ಒಂದು ವಾರದ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು. ರಾಮು ಅವರು ಪತ್ನಿ, ಮಗ ಮತ್ತು ಮಗಳನ್ನು ಅಗಲಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ 39 ಚಿತ್ರಗಳನ್ನು ನಿರ್ಮಿಸಿದ್ದಾರೆ. ಗೋಲಿಬಾರ್ ಚಿತ್ರದ ನಿರ್ಮಾಣದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಮೊದಲಿಗೆ ಕನ್ನಡದಲ್ಲಿ ಕೋಟಿ ಬಜೆಟ್ ನಲ್ಲಿ ಚಿತ್ರ ನಿರ್ಮಿಸಿದ್ದರಿಂದ ಅವರಿಗೆ ಕೋಟಿ ರಾಮು ಎಂದು ಹೆಸರು ಬಂದಿತ್ತು. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
