

ಕರ್ನಾಟಕದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇದು ಸಾವೋ ಇಲ್ಲ ಕೊಲೆಯೋ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.



ಕಡಲೆ ಹನುಮಂತದೇವರ ಪ್ರತಿಷ್ಠಾಪನೆ ಮುಂದಕ್ಕೆ.
ಸಿದ್ದಾಪುರ. ತಾಲೂಕಿನ ಭುವನಗಿರಿ ಸಮೀಪದ ಡೊಂಬೆಕೈ ಕ್ರಾಸ್ ಬಳಿ ಇರುವ ಕಡಲೆ ಹನುಮಂತ ದೇವರ ನೂತನ ಮೂರ್ತಿಯನ್ನು ಹೊಸಕಟ್ಟಡದಲ್ಲಿ ಪ್ರತಿಷ್ಠಾಪಿಸಿ, ಅಷ್ಠಬಂಧ ಮಹೋತ್ಸವವನ್ನು ವಿದ್ಯುಕ್ತವಾಗಿ ಸಂಭ್ರಮದಿಂದ ನಡೆಸಲು ತಯಾರಿ ನಡೆಸಲಾಗಿತ್ತು. ಆದರೆ ಕೋವಿಡ್ 19 ರ ಎರಡನೆ ಅಲೆ ಜೋರಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಮತ್ತು ಭಕ್ತರ ಆರೋಗ್ಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದಿನಾಂಕ: 19-5-2021 ರಿಂದ 22-5-2021 ರವರೆಗೆ ನಡೆಯಬೇಕಿದ್ದ ಧಾರ್ಮಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಮುಂದಿನ ದಿನಗಳಲ್ಲಿ ಮುಹೂರ್ತ ನಿಗಧಿಪಡಿಸಿ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಭಕ್ತರು ಮತ್ತು ಸೇವಾಕರ್ತರು ಸಹಕರಿಸಬೇಕು ಎಂದು ದೇವಸ್ಥಾನ ಆಡಳಿತ ಮಂಡಳಿಯ ಪರವಾಗಿ ಅಧ್ಯಕ್ಷ ವಿ.ಎಂ.ಭಟ್ಟ ಡೊಂಬೆಕೈ, ಉಪಾಧ್ಯಕ್ಷ ಪ್ರಶಾಂತ ನಾಯ್ಕ ಕುಂಬ್ರಿಗದ್ದೆ ಕೋರಿದ್ದಾರೆ.
ನವದೆಹಲಿ: ಕರ್ನಾಟಕದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇದು ಸಾವೋ ಇಲ್ಲ ಕೊಲೆಯೋ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಇಂದು ನಡೆದ ದುರ್ಘಟನೆ ಬಗ್ಗೆಯೇ ಎಲ್ಲರ ಚರ್ಚೆ ನಡೆಯುತ್ತಿದೆ. ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಇದು ಸಾವೋ ಅಥವಾ ಕೊಲೆಯೋ ಎಂದು ಪ್ರಶ್ನೆ ಮಾಡಿದ್ದಾರೆ. ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಳ್ಳುವ ಮೊದಲು ಇಂತಹ ಎಷ್ಟು ಸಾವು ನೋವುಗಳನ್ನು ಕಾಣಬೇಕಿದೆ, ಮೃತಪಟ್ಟವರ ಕುಟುಂಬಗಳಿಗೆ ಸಂತಾಪಗಳು ಎಂದು ಹೇಳಿದ್ದಾರೆ.
ಇದು ಪ್ರಚಾರ ಪ್ರಿಯ ಸರ್ಕಾರ, ಜನರ ಜೀವದ ಮೇಲೆ ಕಾಳಜಿಯಿಲ್ಲ, ಮಂತ್ರಿಗಳು, ಅಧಿಕಾರಿಗಳು ಜಿಲ್ಲೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿಲ್ಲ, ಇದರಿಂದಾಗಿ ಆಸ್ಪತ್ರೆಗಳಿಗೆ ಸರಾಗವಾಗಿ ಆಕ್ಸಿಜನ್ ಪೂರೈಕೆಯಾಗುತ್ತಿಲ್ಲ, ರಾಜ್ಯದಲ್ಲಿ ಸರ್ಕಾರ ಆಡಳಿತ ನಡೆಸುತ್ತಿದೆಯೇ, ಇಲ್ಲವೇ ಎಂದು ನನಗೆ ಸಂಶಯ ಬರುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕೇಳಿದ್ದಾರೆ. (kpc)
