ಜನತಾ ಕರ್ಫ್ಯೂ ಮುಂದುವರಿಕೆ, ಪತ್ರಕರ್ತರನ್ನು ‘ಕೋವಿಡ್ ವಾರಿಯರ್ಸ್’ ಆಗಿ ಘೋಷಣೆ: ಸಿಎಂ ಬಿಎಸ್ ವೈ

ಆಯ್.ಸಿ. ನಾಯ್ಕ ಅವರಗುಪ್ಪಾ ಕೋವಿಡ್ ಗೆ ಬಲಿ….. ಸಿದ್ಧಾಪುರದಲ್ಲಿ ಈ ವರ್ಷ ಒಟ್ಟೂ 295 ಜನರು ಕೋವಿಡ್ ಪೀಡಿತರಾಗಿದ್ದಾರೆ. ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 12 ಇದರಲ್ಲಿ ಹೊರ ಜಿಲ್ಲೆಗಳಲ್ಲಿ ಮೃತರಾದವರ ಸಂಖ್ಯೆ ಸೇರಿಲ್ಲ. ಇಂದು 27 ಜನ ಹೊಸಬರಲ್ಲಿ ಕೋವಿಡ್ ದೃಢಪಟ್ಟಿದೆ. ಕಳೆದ ಕೆಲವು ದಿವಸಗಳಿಂದ ಕೋವಿಡ್ ಜೊತೆಗೆ ಇತರ ಕಾಯಿಲೆಗಳಿಂದ ಬಳಲಿದ್ದ ಕೋಲಶಿರ್ಸಿ ಗ್ರಾಮ ಪಂಚಾಯತ್ ನ ಅವರಗುಪ್ಪಾದ ಈಶ್ವರ ಚೌಡಾ ನಾಯ್ಕ ನಿಧನರಾದರು. 56 ವರ್ಷದ ಇವರು ಕೆಲವು ವರ್ಷ ಸಿದ್ಧಾಪುರದಲ್ಲಿ ಇಲೆಕ್ಟ್ರಿಕಲ್ ಅಂಗಡಿ ನಡೆಸಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು, ಸಹೋದರರು ಸೇರಿದಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಳೆದ ಒಂದು ವಾರದ ಹಿಂದಿನಿಂದ ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆದಿದ್ದ ಆಯ್.ಸಿ.ನಾಯ್ಕ ಇಂದು ನಿಧನರಾಗಿದ್ದಾರೆ. ಅವರ ಅಂತಿಮ ಸಂಸ್ಕಾರ ಸರ್ಕಾರಿ ನಿಯಮದಂತೆ ಅವರಗುಪ್ಪಾದಲ್ಲೇ ನಡೆದಿದೆ.

ಪತ್ರಕರ್ತರನ್ನು ಮುಂಚೂಣಿ ಕಾರ್ಯಕರ್ತರಾಗಿ ಘೋಷಿಸಲಾಗುತ್ತದೆ ಎಂದು ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

BS Yediyurappa

ಬೆಂಗಳೂರು: ಪತ್ರಕರ್ತರನ್ನು ಮುಂಚೂಣಿ ಕಾರ್ಯಕರ್ತರಾಗಿ ಘೋಷಿಸಲಾಗುತ್ತದೆ ಎಂದು ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿ ಮತ್ತು ಆಕ್ಸಿಜನ್ ಸರಬರಾಜು ಕುರಿತಂತೆ ಸಚಿವ ಸಂಪುಟ ಸಭೆ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಮೇ 22ರವರೆಗೂ ರಾಜ್ಯದಲ್ಲಿ ಜನತಾ ಕರ್ಫ್ಯೂ ಮುಂದುವರೆಯಲಿದ್ದು, ಪತ್ರಕರ್ತರನ್ನು ಮುಂಚೂಣಿ ಕಾರ್ಯಕರ್ತರಾಗಿ ಘೋಷಿಸಲಾಗುತ್ತದೆ ಎಂದು ಹೇಳಿದರು.

ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ‘ಜಿಲ್ಲೆಗಳಲ್ಲಿ ಕೊವಿಡ್ ಸಂಬಂಧಿತ ಸಮಸ್ಯೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರೇ ಸರಿಪಡಿಸಬೇಕು. ಮೆಡಿಕಲ್ ಆಕ್ಸಿಜನ್ ಸಬರಾಜು ವ್ಯವಸ್ಥೆಯ ಜವಾಬ್ಧಾರಿಯನ್ನು ಸಚಿವ ಜಗದೀಶ್ ಶೆಟ್ಟರ್ ಅವರಿಗೆ ವಹಿಸಲಾಗಿದೆ. ರೆಮ್​ಡೆಸಿವರ್​ ಪೂರೈಕೆ ನಿರ್ವಹಣೆ ಜವಾಬ್ದಾರಿಯನ್ನು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಆಶ್ವತ್ಥನಾರಾಯಣ ಅವರು ವಹಿಸಿಕೊಳ್ಳಲಿದ್ದಾರೆ. ಆಸ್ಪತ್ರೆಗಳಲ್ಲಿನ ಬೆಡ್​ಗಳ ಹೊಣೆಗಾರಿಕೆಯನ್ನು ಸಚಿವ ಆರ್. ಅಶೋಕ್​ ನೋಡಿಕೊಳ್ಳಲಿದ್ದಾರೆ. ಹಾಗೆಯೇ, ಅರಣ್ಯ ಸಚಿವ ಅರವಿಂದ್ ಲಿಂಬಾವಳಿ, ಗೃಹ ಸಚಿವ ಬಸವರಾಜ  ಬೊಮ್ಮಾಯಿ ಅವರಿಗೂ ಕೆಲ ಜವಾಬ್ದಾರಿ ಹೊರಿಸಲಾಗಿದೆ ಎಂದು ಹೇಳಿದರು.

ಮಾಧ್ಯಮದವರನ್ನು ಮುಂಚೂಣಿ ಕಾರ್ಯಕರ್ತರಾಗಿ ಘೋಷಣೆ
ಇದೇ ವೇಳೆ ಮಾಧ್ಯಮದವರನ್ನು ಮುಂಚೂಣಿ ಕಾರ್ಯಕರ್ತರಾಗಿ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ ಸಿಎಂ,  ರಾಜ್ಯದಲ್ಲಿ ಮಾಧ್ಯಮದವರನ್ನು ಕೊವಿಡ್​ ವಾರಿಯರ್ಸ್​ ಎಂದು ಪರಿಗಣಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಆಕ್ಸಿಜನ್ ದುರಂತದ ಕುರಿತು ಸಿಎಂ ವಿಷಾದ
ಚಾಮರಾಜನಗರದ ಘಟನೆ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ ಸಿಎಂ ಬಿಎಸ್ ಯಡಿಯೂರಪ್ಪ, ದುರಂತದ ಬಗ್ಗೆ 3 ದಿನದಲ್ಲಿ ವರದಿ ನೀಡಲು ಸೂಚಿಸಿದ್ದೇನೆ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿದೆ. ಹಾಗಾಗಿ ಜಿಂದಾಲ್​ ಕಂಪನಿ ಉತ್ಪಾದಿಸುವ ಮೆಡಿಕಲ್ ಆಕ್ಸಿಜನ್​ನ್ನು ನಾವೇ ಬಳಸಿಕೊಳ್ಳುತ್ತೇವೆ. ಈ ಕುರಿತು  ಕೇಂದ್ರಕ್ಕೆ ಮನವಿ ಮಾಡುತ್ತೇವೆ.

ಬೆಡ್ ಬ್ಲಾಕಿಂಗ್ ಹಗರಣದ ಕುರಿತು ಮಾಹಿತಿ ಲಭ್ಯ
ಸಂಸದ ತೇಜಸ್ವಿ ಸೂರ್ಯ ಹಾಸಿಗೆ ಬ್ಲಾಕಿಂಗ್​ ಮಾಡುವ ದಂದೆ ಬಯಲಿಗೆಳೆದಿದ್ದಾರೆ. ಇನ್ನು ಅರ್ಧ ಗಂಟೆಯಲ್ಲಿ ಈ ಅವ್ಯವಹಾರದ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಬೆಡ್​ ಬ್ಲಾಕಿಂಗ್​ನಲ್ಲಿ ಯಾರೇ ಭಾಗಿಯಾಗಿದ್ರೂ ಕ್ರಮ ಕೈಗೊಳ್ಳುತ್ತೇವೆ. ಈ ಕುರಿತು ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ವಿವರಿಸಿದರು.

ಜನತಾ ಕರ್ಫ್ಯೂ 
ಮೇ 12ರವರೆಗೂ ಈಗ ಜಾರಿಯಲ್ಲಿರುವ ಕಠಿಣ ನಿಯಮಗಳೇ​ ಜಾರಿಯಲ್ಲಿರುತ್ತವೆ. ಅದಾದ ಬಳಿಕ ಮುಂದಿನದ್ದು ಚರ್ಚಿಸಿ ನಿರ್ಧರಿಸುತ್ತೇವೆ. ಮಾನವ ಸಂಪನ್ಮೂಲವಾಗಿ ಅಂತಿಮ ವರ್ಷದ ಮೆಡಿಕಲ್ ವಿದ್ಯಾರ್ಥಿಗಳನ್ನು ಬಳಸುತ್ತೇವೆ. ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳುತ್ತೇನೆ ಎಂದು  ಅವರು ತಿಳಿಸಿದರು. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಪ್ರಸ್ತಾಪಿಸಿದ ಸಿಎಂ ಯಡಿಯೂರಪ್ಪ, ಸರ್ಕಾರಕ್ಕೆ  ಸಲಹೆಗಳನ್ನು ಕೊಟ್ಟರೆ ಮುಕ್ತವಾಗಿ ಸ್ವೀಕರಿಸುತ್ತೇವೆ ಎಂದರು.

ಉಸ್ತುವಾರಿ ಸಚಿವರು ಜಿಲ್ಲೆಗಳಲ್ಲಿರಬೇಕು
ಹಾಗೆಯೇ, ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಣಗೊಳಿಸುವ ಸಲುವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರ ಹೆಗಲಿಗೇ ಈ ಹೊಣೆ ನೀಡಲಾಗಿದೆ. ನಾಳೆಯಿಂದಲೇ ಜಿಲ್ಲಾ ಉಸ್ತುವರಿ ಸಚಿವರು ಅವರ ಜಿಲ್ಲೆಗಳಿಗೆ ಹೋಗಬೇಕು. ಅಲ್ಲಿಯೇ ಇದ್ದು ಪರಿಸ್ಥಿತಿ ನಿಭಾಯಿಸಬೇಕು. ಈ ಬಗ್ಗೆ ಸಭೆಯಲ್ಲಿ ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *