ಕರ್ನಾಟಕಕ್ಕೆ ಬೇಕಾಗಿದೆ ಲಾಕ್ಡೌನ್ ,ಲಾಕ್‍ಡೌನ್ ಮಾಡಲು ಮುಖ್ಯಮಂತ್ರಿಗಳಿಗೆ ಅಶೀಸರ & ಇಲಿಯಾಸ್ ಮನವಿ

ಇಡೀ ಭಾರತಕ್ಕೆ ಲಾಕ್ಡೌನ್ ಅಗತ್ಯವಿಲ್ಲ, ಕರ್ನಾಟಕಕ್ಕೆ ಬೇಕಾಗಿದೆ: ತಜ್ಞರು

ದೇಶದಲ್ಲಿ ದಿನ ಕಳೆದಂತೆ ಸೋಂಕಿತರ ಸಂಖ್ಯೆ ವ್ಯಾಪಕಗೊಳ್ಳುತ್ತಿರುವ ಹಿನ್ನೆಲೆಯಲ್ಲೆ ಎಲ್ಲೆಡೆ ಇಡೀ ದೇಶವನ್ನು ಲಾಕ್ಡೌನ್ ಮಾಡುವಂತೆ ಆಗ್ರಹಗಳು ಕೇಳಿ ಬರುತ್ತಿವೆ. ಆದರೆ, ಕೆಲ ತಜ್ಞರು ಇಡೀ ಭಾರತಕ್ಕೆ ಲಾಕ್ಡೌನ್ ಅಗತ್ಯವಿಲ್ಲ. ಆದರೆ, ಹೆಚ್ಚೆಚ್ಚು ಸೋಂಕು ಇರುವ ಪ್ರದೇಶ ಹಾಗೂ ರಾಜ್ಯಗಳಿಗೆ ಲಾಕ್ಡೌನ್ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ವ್ಯಾಪಕವಾಗಿ ವಿಸ್ತರಿಸುತ್ತಿರುವ ಕರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಮಾತ್ರ ದಿವ್ಯ ಔಷಧಎಂದಿರುವ ಜೆ.ಡಿ.ಎಸ್. ಉತ್ತರ ಕನ್ನಡ ಜಿಲ್ಲಾ ಅಲ್ಫಸಂಖ್ಯಾತರ ಘಟಕದ ಅಧ್ಯಕ್ಷ ಇಲಿಯಾಸ್ ಶೇಖ್ ಈ ದುರಿತ ಕಾಲದಲ್ಲಿ ಬಿ.ಪಿ.ಎಲ್. ಕಾರ್ಡ್ ರದ್ದುಮಾಡಿರುವುದು, ಸ್ಥಳೀಯ ಸಂಸ್ಥೆಗಳಲ್ಲಿ ತೆರಿಗೆ ವಸೂಲಾತಿಗೆ ಒತ್ತಾಯಿಸುವುದು, ಸಾಲಮರುಪಾವತಿಗೆ ಸಮಯಾವಕಾಶ ನೀಡದಿರುವುದು ಇವು ನಾಗರಿಕ ಸಮಾಜ ಒಪ್ಪುವ ಅಂಶಗಳಲ್ಲ.ಇಂಥ ಜನವಿರೋಧಿ ಕೆಲಸಗಳಿಂದ ಬಿ.ಜೆ.ಪಿ. ಅದರ ನಾಯಕರ ಜನಪರ ಕಾಳಜಿ ಪರೀಕ್ಷೆಗೊಳಪಡುತ್ತಿದೆ ಎಂದು ಅಸಮಧಾನವ್ಯಕ್ತಪಡಿಸಿದ್ದಾರೆ.

ಲಾಕ್‍ಡೌನ್ ಮಾಡಲು ಮುಖ್ಯಮಂತ್ರಿಗಳಿಗೆ ಅಶೀಸರ ಮನವಿ
ಸಿದ್ದಾಪುರ
ರಾಜ್ಯದಲ್ಲಿ ಕೊರೊನಾ ಕಾಯಿಲೆ ಉಲ್ಪಣಿಸುತ್ತಿದ್ದು, ಗ್ರಾಮೀಣ ಪ್ರದೇಶಕ್ಕೂ ವ್ಯಾಪಕವಾಗಿ ಹಬ್ಬಿದೆ. ಇನ್ನೂ ಹೆಚ್ಚು ಹರಡಿದರೆ ನಿಯಂತ್ರಣ ಕಷ್ಟ. ಕಾಯಿಲೆ ಹರಡದಂತೆ ನಿಯಂತ್ರಿಸುವ ದೃಷ್ಟಿಯಿಂದ ಲಾಕ್‍ಡೌನ್ ವಿಧಿಸುವದು ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವgನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ತಿಳಿಸಿದರು.

File photo

ಬೆಂಗಳೂರು: ದೇಶದಲ್ಲಿ ದಿನ ಕಳೆದಂತೆ ಸೋಂಕಿತರ ಸಂಖ್ಯೆ ವ್ಯಾಪಕಗೊಳ್ಳುತ್ತಿರುವ ಹಿನ್ನೆಲೆಯಲ್ಲೆ ಎಲ್ಲೆಡೆ ಇಡೀ ದೇಶವನ್ನು ಲಾಕ್ಡೌನ್ ಮಾಡುವಂತೆ ಆಗ್ರಹಗಳು ಕೇಳಿ ಬರುತ್ತಿವೆ. ಆದರೆ, ಕೆಲ ತಜ್ಞರು ಇಡೀ ಭಾರತಕ್ಕೆ ಲಾಕ್ಡೌನ್ ಅಗತ್ಯವಿಲ್ಲ. ಆದರೆ, ಹೆಚ್ಚೆಚ್ಚು ಸೋಂಕು ಇರುವ ಪ್ರದೇಶ ಹಾಗೂ ರಾಜ್ಯಗಳಿಗೆ ಲಾಕ್ಡೌನ್ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಕೋವಿಡ್ ತಜ್ಞ ಸಮಿತಿಯ ಸದಸ್ಯ ಹಾಗೂ ವೈರಾಲಜಿಸ್ಟ್ (ಸೂಕ್ಷ್ಮರೋಗಾಣು ಶಾಸ್ತ್ರಜ್ಞ) ಡಾ.ವಿ.ರವಿಯವರು ಮಾತನಾಡಿ, ಪ್ರಸ್ತುತ ಬೆಳವಣಿಗೆ ಗಮನಿಸಿದರೆ, ಇಡೀ ಭಾರತಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಎಂದೆನಿಸುತ್ತದೆ. ಕೆಲವು ತಿಂಗಳ ವೈಜ್ಞಾನಿಕ ವರದಿಯನ್ನು ಆಧರಿಸಿ ಆಯಾ ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಗೊಳಿಸುವ ಕುರಿತು ನಿರ್ಧಾರ ಕೈಗೊಳ್ಳಬೇಕಿದೆ. ಸೋಂಕು ನಿಯಂತ್ರಿಸಲು ಇಡೀ ದೇಶವನ್ನೇ ಲಾಕ್ಡೌನ್ ಮಾಡುವುದು ಪರಿಹಾರವಲ್ಲ ಎಂದು ಹೇಳಿದ್ದಾರೆ. 

https://imasdk.googleapis.com/js/core/bridge3.455.0_en.html#goog_1313849326

ಭಾರತದ ವಾಸ್ತವಿಕ ಸತ್ಯಗಳು ಬೇರೆಯಾಗಿದೆ. ಮಹಾರಾಷ್ಟ್ರದಲ್ಲಿ ಸೋಂಕು ವ್ಯಾಪಕಗೊಂಡಿತ್ತು. ಇದೀಗ ನಿಧಾನಗತಿಯಲ್ಲಿ ಕಡಿಮೆಯಾಗುತ್ತಿದೆ. ಮಹಾರಾಷ್ಟ್ರದಲ್ಲಿ ಅತ್ಯಂತ ಕಠಿಣ ಲಾಕ್ಡೌನ್ ಜಾರಿಗೆ ತರಲಾಗಿತ್ತು. ಇದೀಗ ಸಡಿಲಗೊಳಿಸಲು ಸರ್ಕಾರ ಮುಂದಾಗಿದೆ. ಕರ್ನಾಟಕದಲ್ಲಿಯೂ ಸೋಂಕು ವ್ಯಾಪಕಗೊಂಡಿದ್ದು, ಕೆಲವು ವಾರಗಳ ಬಳಿಕ ಕಡಿಮೆಯಾಗಲಿದೆ. ಹೀಗಾಗಿ ಇಡೀ ಭಾರತವನ್ನೇ ಲಾಕ್ಡೌನ್ ಮಾಡುವ ಬದಲು ಆಯಾ ರಾಜ್ಯಗಳಲ್ಲಿ ಮಾತ್ರ ಲಾಕ್ಡೌನ್ ಜಾರಿ ಮಾಡಬೇಕು ಎಂದು ತಿಳಿಸಿದ್ದಾರೆ. 

ಮಾರ್ಚ್ ಮಧ್ಯಂತರ- ಮೇ ತಿಂಗಳಿನಲ್ಲಿ ದೇಶದಲ್ಲಿ ಕೊರೋನಾ 2ನೇ ಅಲೆ ಏಳಲಿದೆ ಎಂದು ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲೇ ನಾನು ಎಚ್ಚರಿಕೆ ನೀಡಿದ್ದೆ. ನಾನಷ್ಟೇ ಅಲ್ಲ, ಹಲವು ತಜ್ಞರು ಸಲಹೆ ಹಾಗೂ ಎಚ್ಚರಿಕೆಯನ್ನು ನೀಡಿತ್ತರು. ಆದರೆ, ಸಲಹೆಗಳನ್ನು ನಮ್ಮ ರಾಜಕೀಯ ನಾಯಕರು ಹಾಗೂ ಸಾರ್ವಜನಿಕರು ನಿರ್ಲಕ್ಷ್ಯಿಸಿದ್ದರು. ಮಹಾರಾಷ್ಟ್ರದಲ್ಲಿ ಸೋಂಕು ವ್ಯಾಪಕಗೊಂಡಾಗಲೂ ಕೂಡ ಯಾವುದೇ ಕಠಿಣ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿಲ್ಲ. ಜನರು ಎಲ್ಲಾ ಎಚ್ಚರಿಕೆಗಳನ್ನು ಗಾಳಿಗೆ ತೂರಿದ್ದರು. ಸರ್ಕಾರ ಕೂಡ ಚುನಾವಣಾ ರ್ಯಾಲಿಗಳನ್ನು ನಡೆಸಿತು, ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿದರು. 

ಸೋಂಕು ನಿಯಂತ್ರಣಗೊಂಡರೂ ಕೂಡ ಸರ್ಕಾರ ಆರ್ಥಿಕ ಚಟುವಟಿಕೆಗಳ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಜನರು ಕಡ್ಡಾಯವಾಗಿ ಮಾಸ್ಕ್’ಗಳನ್ನು ಧರಿಸಲೇಬೇಕು. ಲಸಿಕೆ ಪಡೆಯಬೇಕು. ಅಕ್ಟೋಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಕೊರೋನಾ 3ನೇ ಅಲೆ ಆರಂಭವಾಗಲಿದೆ. ಇದು ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಏಕೆಂದರೆ ಮಕ್ಕಳಿಗೆ ಯಾವುದೇ ಲಸಿಕೆಗಳೂ ಬಂದಿಲ್ಲ ಎಂದು ಎಚ್ಚರಿಸಿದ್ದಾರೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *