ನಾಳೆಯಿಂದಲೇ 18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ, ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ: ಸಚಿವ ಸುಧಾಕರ್

ನಾಳೆ (ಮೇ 10)ರಿಂದಲೇ ರಾಜ್ಯದಲ್ಲಿ  18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ ಸಿಕ್ಕಲಿದೆ. ಆದರೆ ಯುವಕರು  ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನವಿ ಮಾಡಿದ್ದಾರೆ.

ಬೆಂಗಳೂರು: ನಾಳೆ (ಮೇ 10)ರಿಂದಲೇ ರಾಜ್ಯದಲ್ಲಿ  18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ ಸಿಕ್ಕಲಿದೆ. ಆದರೆ ಯುವಕರು  ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನವಿ ಮಾಡಿದ್ದಾರೆ.

“ಸೋಮವಾರ, ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು. 

https://imasdk.googleapis.com/js/core/bridge3.455.0_en.html#goog_1374786901

https://imasdk.googleapis.com/js/core/bridge3.455.0_en.html#goog_1374786904

https://imasdk.googleapis.com/js/core/bridge3.455.0_en.html#goog_1374786907

“ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಣೆ ಮಾಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕಾ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು.

“18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿವುದು. ಕೋವಿನ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿರುವುದಿಲ್ಲ.

“ಪ್ರತಿಯೊಬ್ಬ ವ್ಯಕ್ತಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಸರ್ಕಾರ ಬದ್ದವಾಗಿದ್ದು, ಆಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದೆ. ಆದ್ದರಿಂದ ಎಲ್ಲ ನಾಗರೀಕರಲ್ಲಿ, ಅದರಲ್ಲೂ ವಿಶೇಷವಾಗಿ ನನ್ನ ಯುವ ಮಿತ್ರರಲ್ಲಿ ನನ್ನ ಮನವಿ, ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ. ಖಂಡಿತವಾಗಿ ತಮಗೆ ಲಸಿಕೆ ಸಿಗುತ್ತದೆ.” ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *