for covid19- ನೆರವು & ಸಹಾಯವಾಣಿ

ಕೋವಿಡ್ ಸಾಂಕ್ರಾಮಿಕ ಮಹಾಮಾರಿಯ ತುರ್ತು ಪರಿಸ್ಥಿಯ ಈ ಸಂದರ್ಭದಲ್ಲಿ ಸಿದ್ದಾಪುರ ಶಿಕ್ಷಣ ಪ್ರಸಾರಕ ಸಮಿತಿಯು ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರ ಗಳ 140 ಬೆಡ್‍ಗಳುಳ್ಳ ಸುಸಜ್ಜಿತ ಆಸ್ಪತ್ರೆಯನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಸಾರ್ವಜನಿಕವಾಗಿ ಉಪಯೋಗವಾಗುವಂತೆ ಜಿಲ್ಲಾಡಳಿತಕ್ಕೆ ನೀಡಲು ತೀರ್ಮಾನಿಸಿದೆ.


ಈ ಸಂದರ್ಭದಲ್ಲಿ ಆಸ್ಪತ್ರೆಯು ಯಾವುದೇ ಶುಲ್ಕವನ್ನು ಆಕರಣೆಮಾಡದೇ ಕೋವಿಡ್ ರೋಗಿಗಳ ಆರೈಕೆಗೆ ಆಸ್ಪತ್ರೆಯನ್ನು ನೀಡುತ್ತಿದ್ದು, ಜಿಲ್ಲಾಡಳಿತ ಈ ಕುರಿತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬಹುದಾಗಿದೆ ಎಂದು ಆಯುರ್ವೇದ ಮಹಾವಿದ್ಯಾಲಯದ ಚೇರಮನ್ ವಿನಾಯಕರಾವ್ ಜಿ ಹೆಗಡೆಯವರು ತಿಳಿಸಿದ್ದಾರೆ.
ಸೋಂಕಿತ ಪ್ರಕರಣಗಳು ಅತ್ಯಂತ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಕೋವಿಡ್ ಹೊರತಾದ ಅಗತ್ಯ ವೈದ್ಯಕೀಯ ಚಿಕಿತ್ಸೆಗಳು ಲಭ್ಯವಾಗದ ಪರಿಸ್ಥಿತಿ ನಿರ್ಮಾಣಗೊಂಡಿರುವುದರಿಂದ ಕೋವಿಡ್ ಸಂಬಂಧಿ ಚಿಕಿತ್ಸೆ ಮತ್ತು ಆರೈಕೆ ಹಾಗೂ ಉಳಿದ ರೋಗಗಳಿಗೆ ಸಂಬಂಧಿಸಿದಂತೆ ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯದ ನುರಿತ ತಜ್ಞ ವೈದ್ಯರುಗಳಿಂದ ಟೆಲಿ ಕನ್ಸಲ್ಟೇಶನ್ ಮೆಡಿಕಲ್ ಸರ್ವಿಸ್ ಸೇವೆಯನ್ನು ಉಚಿತವಾಗಿ ಸಾರ್ವಜನಿಕರಿಗೆ ತುಲುಪುವಂತೆ ಮಾಡಿ ಆರೋಗ್ಯ ಸೇವೆಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಮಹಾವಿದ್ಯಾಲಯದ ಉಪಾಧ್ಯಕ್ಷ ಡಾ.ಶಶಿಭೂಷಣ ಹೆಗಡೆಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಈ ಕೆಳಗಿನ ಸಹಾಯವಾಣಿಯು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತದೆ ಮತ್ತು ತಜ್ಞ ವೈದ್ಯರುಗಳು ಸೇವೆಗೆ ಲಭ್ಯರಿರುತ್ತಾರೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಲು ವಿನಂತಿಸಲಾಗಿದೆ.
ಲಭ್ಯವಿರುವ ವೈದ್ಯರುಗಳು
ಅ. ನಂ ವೈದ್ಯರ ಹೆಸರು ದೂರವಾಣಿ ಸಂಖ್ಯೆ ಅ. ನಂ ವೈದ್ಯರ ಹೆಸರು ದೂರವಾಣಿ ಸಂಖ್ಯೆ
01 ಡಾ|| ರೂಪಾ ಭಟ್ಟ. B.A.M.S. MD(AYU)9449810476 05 ಡಾ|| ಸ್ನೇಹಾಲಿ ಜಿB.A.M.S. MD(AYU)9481131863
02 ಡಾ|| ಚೈತ್ರಾಲಕ್ಷ್ಮಿ B.A.M.S. MD(AYU) 9742920452 06 ಡಾ|| ನಿಧಿ ಡಿ B.A.M.S. MD(AYU)8618503856
03 ಡಾ|| ಸಮೀರ ಭಾದ್ರಿ B.A.M.S. MD(AYU) 9880281930 07 ಡಾ|| ಕವಿತಾ ಭಾದ್ರಿB.A.M.S. MD(AYU) 9480211065
04 ಡಾ|| ನಂದೀಶB.A.M.S. MD(AYU) 7892816316 08 ಡಾ|| ಮಧುಕೇಶ್ವರ ಹೆಗಡೆB.A.M.S. MD(AYU) 9480027409

   ಕೋವಿಡ್-19 ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವದರಿಂದ ಸಾರ್ವಜನಿಕರ ಸುರಕ್ಷತೆಗಾಗಿ ದಿನಸಿ, ಔಷಧಿಗಳು, ತರಕಾರಿಗಳನ್ನು ಮನೆ ಬಾಗಿಲಿಗೆ ತಲುಪಿಸಲು ಗ್ರಾಮ ಪಂಚಾಯತಗಳಿಂದ ವ್ಯವಸ್ಥೆ ಮಾಡಲಾಗುತ್ತಿದ್ದು , ಈ ಸಂಬಂಧ ಗ್ರಾಮ ಪಂಚಾಯತಗಳಲ್ಲಿ ಸಹಾಯವಾಣಿ ಯನ್ನು ತೆರೆಯಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವುದು. ಹಾಗೂ ಕೋವಿಡ್-19 ರೋಗವನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ಗ್ರಾಮ ಪಂಚಾಯತಗಳೊಂದಿಗೆ ಸಹಕರಿಸಲು ಈ ಮೂಲಕ ಸಾರ್ವಜನಿಕರಲ್ಲಿ ವಿನಂತಿಸಿದೆ.

                                  ಕಾರ್ಯನಿರ್ವಾಹಕ ಅಧಿಕಾರಿಗಳು
                              ತಾಲೂಕ ಪಂಚಾಯತ ಸಿದ್ದಾಪುರ( ಉ.ಕ)    


       https://www.youtube.com/watch?v=5o3h3H7WV9Q&t=213s

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *