: ರಾಜ್ಯ ಸರ್ಕಾರ ನಿರ್ಧಾರ -ಮುಂದಿನ ಸೂಚನೆ ಬರುವವರೆಗೆ ನಾಳೆ ಅಂದರೆ ಮೇ 14ರಿಂದ ತಾತ್ಕಾಲಿಕವಾಗಿ 18ರಿಂದ 44 ವರ್ಷದೊಳಗಿನವರಿಗೆ ಕೊರೋನಾ ಲಸಿಕೆ ನೀಡುವುದನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬೆಂಗಳೂರು:ಮುಂದಿನ ಸೂಚನೆ ಬರುವವರೆಗೆ ನಾಳೆ ಅಂದರೆ ಮೇ 14ರಿಂದ ತಾತ್ಕಾಲಿಕವಾಗಿ 18ರಿಂದ 44 ವರ್ಷದೊಳಗಿನವರಿಗೆ ಕೊರೋನಾ ಲಸಿಕೆ ನೀಡುವುದನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈಗಾಗಲೇ ಬುಕ್ಕಿಂಗ್ ಮಾಡಿಕೊಂಡ 18ರಿಂದ 44 ವರ್ಷದೊಳಗಿನವರಿಗೆ ಸಹ ಸದ್ಯಕ್ಕೆ ಲಸಿಕೆ ನೀಡುವುದಿಲ್ಲ ಎಂದು ಸರ್ಕಾರ ಹೇಳಿದೆ. ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಕೇಂದ್ರಗಳಲ್ಲಿ ನೀಡುವ ಲಸಿಕೆ ವಿತರಣೆ ವ್ಯವಸ್ಥೆಗೆ ಸರ್ಕಾರದ ಈ ಹೊಸ ಆದೇಶ ಅನ್ವಯವಾಗಲಿದೆ.
ರಾಜ್ಯ ಸರ್ಕಾರ ಕೊರೋನಾ ಲಸಿಕೆಯ ತೀವ್ರ ಕೊರತೆಯನ್ನು ಎದುರಿಸುತ್ತಿದ್ದು, ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಎರಡು ಕೋಟಿ ಲಸಿಕೆ ತರಿಸಿಕೊಳ್ಳಲು ಜಾಗತಿಕ ಟೆಂಡರ್ ಕರೆಯಲು ನಿರ್ಧರಿಸಿದೆ. ಈ ಮೂಲಕ 18ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡಲು ನಿಶ್ಚಯಿಸಿದೆ.
45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸಂಪೂರ್ಣವಾಗಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಎರಡನೇ ಡೋಸ್ ಪಡೆಯುವವರಿಗೆ ಕೊರತೆಯಾಗುತ್ತಿರುವುದರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸ್ಥಗಿತಗೊಳಿಸಲು ಸದ್ಯಕ್ಕೆ ನಿರ್ಧರಿಸಿದೆ. ಸದ್ಯ 18ರಿಂದ 44 ವರ್ಷದವರೆಗಿನವರಿಗೆ ತೆಗೆದುಕೊಂಡಿರುವ ಲಸಿಕೆಗಳನ್ನು 45 ವರ್ಷಕ್ಕೆ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡಲು ಬಳಸಿಕೊಳ್ಳಲಾಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರದಿಂದ ಬಂದಿರುವ ಮತ್ತು ರಾಜ್ಯ ಸರ್ಕಾರ ನೇರವಾಗಿ ಖರೀದಿಸಿರುವ ಕೊರೋನಾ ಲಸಿಕೆಗಳನ್ನು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ನೀಡಲು ನಿರ್ಧರಿಸಲಾಗಿದೆ. (kpc)