ಮುಖ್ಯಮಂತ್ರಿ ಬದಲಾವಣೆಗೆ ಕೌಂಟ್ ಡೌನ್

: ದೆಹಲಿಗೆ ಯೋಗೇಶ್ವರ್, ಬೆಲ್ಲದ್ ದೌಡು; ರಾಜ್ಯ ಬಿಜೆಪಿ ನಾಯಕರ ರಹಸ್ಯ ಸಭೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಶುರುವಾದ ಬೆನ್ನಲ್ಲೇ, ರಾಷ್ಟ್ರ ರಾಜಧಾನಿಯಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಶನಿವಾರ ಸಂಜೆಯಿಂದಲೇ ಹಲವು ಪ್ರಮುಖ ಬಿಜೆಪಿ ನಾಯಕರು ದೆಹಲಿಗೆ ದೌಡಾಯಿಸಿದ್ದಾರೆ.

Yogeshwar and yediyurappa

ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಶುರುವಾದ ಬೆನ್ನಲ್ಲೇ, ರಾಷ್ಟ್ರ ರಾಜಧಾನಿಯಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಶನಿವಾರ ಸಂಜೆಯಿಂದಲೇ ಹಲವು ಪ್ರಮುಖ ಬಿಜೆಪಿ ನಾಯಕರು ದೆಹಲಿಗೆ ದೌಡಾಯಿಸಿದ್ದಾರೆ.

ಸೋಮವಾರ ಸಂಜೆ ದೆಹಲಿಗೆ ಬಂದಿರುವ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್, ಶಾಸಕ ಅರವಿಂದ ಬೆಲ್ಲದ ಮತ್ತಿತರರು ಕರ್ನಾಟಕ ಭವನಕ್ಕೆ ಬಾರದೇ ಹೋಟೆಲ್‌ನಲ್ಲಿ ತಂಗಿದ್ದಾರೆ.  ಪಕ್ಷದ ವರಿಷ್ಠರನ್ನು ಭೇಟಿ ಮಾಡಿರುವ ಅವರು, ರಾಜ್ಯದ ರಾಜಕೀಯ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹುಬ್ಬಳ್ಳಿ-ಧಾರವಾಡ ದಕ್ಷಿಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅರವಿಂದ್ ಬೆಲ್ಲದ್ ಅವರನ್ನು ಮುಂದಿನ ಬಿಜೆಪಿ ನಾಯಕ ಎಂಬಂತೆ ಬಿಂಬಿಸಲಾಗುತ್ತಿದೆ, ಸಚಿವ ಯೋಗೇಶ್ವರ್ ಜೊತೆ ದೆಹಲಿಗೆ ತೆರಳಿರುವ ಬೆಲ್ಲದ್ ಅಲ್ಲಿ ಯಾವುದೇ ಕೇಂದ್ರ ನಾಯಕರನ್ನು ಭೇಟಿ ಮಾಡಲಿಲ್ಲ, ಆದರೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಜೊತೆ ದೂರವಾಣಿಯಲ್ಲಿ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ. ಲಿಂಗಾಯತ ಸಮುದಾಯದ ಪ್ರಮುಖ ನಾಯಕರಾಗಿರುವ ಬೆಲ್ಲದ್ ಒಂದು ವೇಳೆ ಸಿಎಂ ಹುದ್ದೆ ಖಾಲಿಯಾದರೆ ಅವರೇ ಮುಂದಿನ ಆಯ್ಕೆ ಎಂದು ಹೇಳಲಾಗುತ್ತಿದೆ.

ಗಣಿ ಸಚಿವ ಮುರುಗೇಶ್ ನಿರಾಣಿ ಅವರು ದೆಹಲಿಗೆ ತೆರಳುತ್ತಾರೆ ಎಂಬ ನಿರೀಕ್ಷೆ ಇತ್ತು, ಆದರೆ ಅಂತಿಮ ಕ್ಷಣದಲ್ಲಿ ಯೋಜನೆ ಬದಲಾಗಿದೆ ಎನ್ನಲಾಗಿದೆ. ಗುರುವಾರ ಸಂಪುಟ ಸಭೆ ನಡೆಯಲಿದ್ದು, ಬಿಜೆಪಿ ಪಾಳೇಯದಲ್ಲಿ ಎಲ್ಲರ ಹುಬ್ಬೇರುವಂತೆ ಮಾಡಿದೆ.

ಈ ನಡುವೆ ಶನಿವಾರ ಸಿಎಂ ಹುದ್ದೆ ಪ್ರಮುಖ ಆಕಾಂಕ್ಷಿಯಾಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅವರನ್ನು ಬಿಜೆಪಿ ಸರ್ಕಾರ ರಚನೆಗೆ ಕಾರಣವಾದ ಶಾಸಕರಾದ ರಮೇಶ್ ಜಾರಕಿಹೊಳಿ, ಸಚಿವರಾದ ಭೈರತಿ ಬಸವರಾಜ್ ಮತ್ತು ಸುಧಾಕರ್ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮೊದಲಿಗೆ ತುಮಕೂರಿಗೆ ಭೇಟಿ ನೀಡಿದ್ದ ಸುಧಾಕರ್ ನಂತರ ಚಿತ್ರದುರ್ಗಕ್ಕೆ ತೆರಳಿದರು, ಅವರ ಜೊತೆ ಭೈರತಿ ಬಸವರಾಜ್ ಜೊತೆಯಾದರು. ಇಬ್ಬರು ಸೇರಿ ಶಿಗ್ಗಾವ್ ನಲ್ಲಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ನಂತರ ಲೋಕೋಪಯೋಗಿ ಸಚಿವ ಸಿಎಂ ಉದಾಸಿ ಅವರನ್ನು ಭೇಟಿಯಾಗಿದ್ದಾರೆ.

ನಂತರ ನಾಲ್ವರು ರಾತ್ರಿ ಒಟ್ಟಿಗೆ ಭೋಜನ ಮಾಡಿದ್ದಾರೆ. ಅದಾದ ಮರುದಿನ ಬೆಳಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹುಬ್ಬಳ್ಳಿ ಮನೆಯಲ್ಲಿ ಬೆಳಗಿನ ಉಪಹಾರ ಸೇವಿಸಿರುವುದು ಹಲವು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *