ಜೂನ್.14ರ ನಂತರ 5 ಹಂತಗಳಲ್ಲಿ ಅನ್ ಲಾಕ್ ಮಾಡಲು ಸರ್ಕಾರ ನಿರ್ಧಾರ: ಕಂದಾಯ ಸಚಿವ ಆರ್ ಅಶೋಕ್

ಲಾಕ್ ಡೌನ್ ಏಕಾಏಕಿ ತೆರೆಯುತ್ತಿಲ್ಲ, 5 ಹಂತಗಳಲ್ಲಿ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ ನಡೆಯಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

R Ashok

ಬೆಂಗಳೂರು: ಲಾಕ್ ಡೌನ್ ಏಕಾಏಕಿ ತೆರೆಯುತ್ತಿಲ್ಲ, 5 ಹಂತಗಳಲ್ಲಿ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ ನಡೆಯಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜೂನ್ 14ಕ್ಕೆ ಲಾಕ್ ಡೌನ್ ಮುಕ್ತಾಯವಾಗಿ ಅನ್ ಲಾಕ್ ಏಕಾಏಕಿ ಒಂದೇ ಸಲಕ್ಕೆ ಅನ್ ಲಾಕ್ ಆಗುವುದಿಲ್ಲ, ಆ ರೀತಿ ಜನರು ಭಾವಿಸಬೇಡಿ, ಒಂದೇ ಸಲಕ್ಕೆ ತೆರೆದರೆ ಮತ್ತೆ ಕೊರೋನಾ ಸೋಂಕು ಹೆಚ್ಚಾಗುವ ಸಾಧ್ಯತೆಯಿದೆ ಎಂದರು.

ಯಾವ ರೀತಿ ತೆರೆಯುವುದು, ಮೊದಲ ಹಂತದಿಂದ ಯಾವುದಕ್ಕೆಲ್ಲಾ ವಿನಾಯ್ತಿ ನೀಡುತ್ತಾ ಹೋಗುವುದು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ, ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮೊದಲ ಹಂತದಲ್ಲಿ ಖರೀದಿಗೆ ವಿಸ್ತರಿಸಲು ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ, ಪಾರ್ಕ್ ಗಳಲ್ಲಿ ವಾಕಿಂಗ್ ಗೆ ಅವಕಾಶ ನೀಡುವುದು ಹೀಗೆ ಹಂತ ಹಂತವಾಗಿ ಅನ್ ಲಾಕ್ ಮಾಡುವ ಯೋಜನೆ ಸರ್ಕಾರದ ಮಟ್ಟದಲ್ಲಿ ನಡೆಯುತ್ತಿದೆ ಎಂದರು.

ಬೆಂಗಳೂರು ನಗರದಲ್ಲಿ ಪ್ರಸ್ತುತ 2 ಸಾವಿರದಷ್ಟು ಸಕ್ರಿಯ ಕೊರೋನಾ ಕೇಸುಗಳಿವೆ, ಅದು 500ರೊಳಗೆ ಬರಬೇಕು, ಅಂತಿಮವಾಗಿ ಮುಖ್ಯಮಂತ್ರಿಗಳೇ ಅನ್ ಲಾಕ್ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಅಂತರ್ ಜಿಲ್ಲೆ ಓಡಾಟ ಬಗ್ಗೆ ನಿರ್ಧಾರವಾಗಿಲ್ಲ: ಯಾವ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಕಡಿಮೆಯಿರುತ್ತದೆಯೋ ಅಲ್ಲಿ ಹಂತಹಂತವಾಗಿ ಅನ್ ಲಾಕ್ ನಡೆಸಲಾಗುವುದು. ಅಂತರ ಜಿಲ್ಲೆ, ಸಾರಿಗೆ ವ್ಯವಸ್ಥೆ ಓಡಾಟ ಆರಂಭ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ, ಅನ್ ಲಾಕ್ ಏಕಾಏಕಿ ತೆಗೆಯಲು ಸಾಧ್ಯವಿಲ್ಲ, ನಿರ್ಬಂಧ ಸಡಿಲಿಸುತ್ತಾ ಹೋದಂತೆ ಸೋಂಕು ಹರಡುವ ಪ್ರಮಾಣ ಕೂಡ ನೋಡಬೇಕಾಗುತ್ತದೆ ಎಂದು ಸಚಿವ ಆರ್ ಅಶೋಕ್ ಹೇಳಿದರು.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *