Siddhalingayya memory -ಸಿದ್ದಲಿಂಗಯ್ಯ ನಿಧನಕ್ಕೆ ರೈತ ಸಂಘದ ಭಾವಪೂರ್ಣ ನಮನ

ಕವಿ ಸಿದ್ದಲಿಂಗಯ್ಯ ನಿಧನಕ್ಕೆ ರೈತ ಸಂಘದ ಭಾವಪೂರ್ಣ ನಮನ

ನಾಡಿದ ಶೋಷಿತರ ಜನಸಮುದಾಯದ ಭರವಸೆಯ ಬೆಳಕಾಗಿದ್ದ ಮತ್ತು ತನ್ನ ಕವಿತನದಿಂದ ಕಳೆದ ನಾಲ್ಕು ದಶಕಗಳಿಂದ ಶೋಷಿತರನ್ನು ಸದಾ ಎಚ್ಚರದಿಂದ ಇರುವಂತೆ ಮಾಡಿದ್ದ ಕವಿ,ಅಧ್ಯಾಪಕ ಸಿದ್ದಲಿಂಗಯ್ಯ ಕರೋನಾದಿಂದ ನಿಧನರಾಗಿರುವುದು ತೀರ ದುಃಖ ಉಂಟು ಮಾಡುವ ಸಂಗತಿಯಾಗಿದೆ ಆಗಲಿದ ಕವಿಗೆ ಕರ್ನಾಟಕ ಪ್ರಾಂತ ರೈತ ಸಂಘ ಉ.ಕ. ಜಿಲ್ಲಾ ಸಮಿತಿ ತೀವ್ರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆಯಂದು ಜಿಲ್ಲಾಧ್ಯಕ್ಷರಾದ ಶಾಂತಾರಾಮ ನಾಯಕ ತಿಳಿಸಿದ್ದಾರೆ.

ಎಪ್ಪತ್ತರ‌ ದಶಕದಿಂದಲೂ ರಾಜ್ಯದಲ್ಲಿ ಬೆಳೆದು ಬಂದ ದಲಿತ,ಬಂಡಾಯ, ಸಾಂಸ್ಕೃತಿಕ ಹಾಗೂ ಮಹಿಳಾ‌ ಮೊದಲಾದ ಚಳವಳಿಯ ಭಾಗವಾಗಿಯೇ ತನ್ನ ವ್ಯಕ್ತಿತ್ವವನ್ನು ರೂಪಿಸಿಕೊಂಡಿದ್ದ ಸಿದ್ದಲಿಂಗಯ್ಯ ಆ ಎಲ್ಲ ಚಳವಳಿಗಳನ್ನು ರಾಜ್ಯಾದ್ಯಂತ ಬೆಳೆಸಲು ಅಮೂಲ್ಯ ಕೊಡುಗೆಯನ್ನು ನೀಡಿದ್ದರು.

ಬಾಲ್ಯದಲ್ಲಿ ಅನುಭವಿಸಿದ ನೋವುಗಳನ್ನೇ ಹಾಡಾಗಿಸುವ ಕವಿತೆಯಾಗಿಸುವ ಮತ್ತು ಹಾಡಾಗಿಸುವ ಮೂಲಕ ಇಡೀ ಶೋಷಿತರ ನಡುವೆ ಅದರಲ್ಲೂ ಅಸ್ಪೃಶ್ಯತೆ ಯಲ್ಲಿ ನೊಂದ ಲಕ್ಷಾಂತರ ದಲಿತರಲ್ಲಿ ಜಾಗೃತಿ ಮೂಡಿಸಲು ಕಾರಣವಾದರು ಸಿದ್ದಲಿಂಗಯ್ಯ ನವರು.ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು ಎನ್ನುವ ಅವರ ಕವನ ಈಗಲೂ ಶೋಷಿತರ ಮನದಲ್ಲಿ ರೋಮಾಂಚಕ ಉಂಟು ಮಾಡುವಂತ ಹದ್ದು.ಊರು ಕೇರಿ ಎನ್ನುವ ಆತ್ಮ ಕಥನವು ಸಿದ್ದಲಿಂಗಯ್ಯ ಅವರ ಬೆಳೆದು ಬಂದ ಮತ್ತು ಅವರು ಅನುಭವಿಸಿದ ಸಂಕಟಗಳಿಗೆ ಪ್ರತ್ಯಕ್ಷ ಸಾಕ್ಷಿಯಾಗಿದೆ.
ಇಂತಹ ಬಹುಮುಖ ವ್ಯಕ್ತಿತ್ವದ ಕವಿ,ಬರಹಗಾರ, ಅಧ್ಯಾಪಕ ಡಾ ಸಿದ್ದಲಿಂಗಯ್ಯ ಕಳೆದ‌ ಒಂದೂವರೆ ತಿಂಗಳಿಂದ ಕರೋನಾ ವಿರುದ್ಧ ನಿರಂತರವಾಗಿ ಹೋರಾಡುತ್ತಲೇ ಬಂದರೂ ಅಂತಿಮವಾಗಿ ಅದಕ್ಕೆ ಶರಣಾಗಬೇಕಾದುದ್ದು ದುಃಖದ ಸಂಗತಿ. ಅವರು ಬದುಕಿ ಬರುವವರೆಂದು ಕಾಯುತ್ತಿದ್ದ ಲಕ್ಷಾಂತರ ಶೋಷಿತರಿಗೆ ಇದು ಅತ್ಯಂತ ನಿರಾಶೆಯ‌ ದಿನವಾಗಿದೆ.

ಸಿದ್ದಲಿಂಗಯ್ಯ ಅವರು ಇಡೀ ಕುಟುಂಬದ ನೋವಿನ ಜೊತೆ ರೈತ ಸಂಘ ನಿಂತಿದೆ.ಅಗಲಿದ. ಡಾ. ಸಿದ್ದಲಿಂಗಯ್ಯ ಅವರಿಗೆ ಭಾವಪೂರ್ಣ ಅಂತಿಮ ನಮನಗಳನ್ನು ಸಲ್ಲಿಸುತ್ತದೆ.

(ಶಾಂತಾರಾಮ ನಾಯಕ)
ಜಿಲ್ಲಾ ಅಧ್ಯಕ್ಷರು, ಕರ್ನಾಟಕ ಪ್ರಾಂತ ರೈತ ಸಂಘ.)

1979 ರಷ್ಟು ಹಿಂದೆ ಸಿದ್ಧಾಪುರದಲ್ಲಿ ನಡೆದ ರಾಜ್ಯ ಬಂಡಾಯ ಸಾಹಿತ್ಯ ಸಮ್ಮೇಳನದಲ್ಲಿ ಆರ್.ವಿ.ಭಂಡಾರಿ, ಸಿದ್ಧಲಿಂಗಯ್ಯ, ಚಂಪಾ,ದೇವನೂರು ಮಹಾದೇವರೆಲ್ಲಾ ಸೇರಿದ ಹಳೆಯ ನೆನಪು. ಚಿತ್ರಕೃಪೆ-ಯಮುನಾ ಗಾಂವ್ಕರ್

ಸಿದ್ದಲಿಂಗಯ್ಯ ನಿಧನ: ಸಿಎಂ ಯಡಿಯೂರಪ್ಪ ಸೇರಿ ಗಣ್ಯರ ಕಂಬನಿ

ದಲಿತ ಕವಿ, ಡಾ. ಸಿದ್ದಲಿಂಗಯ್ಯ (66) ಕೊರೋನಾದಿಂದ ನಿಧನರಾಗಿದ್ದಾರೆ. ಹಿರಿಯ ಕವಿ, ಬಂಡಾಯ, ದಲಿತ ಸಾಹಿತ್ಯದ ಮೇರು ಧ್ವನಿಯಾಗಿದ್ದ ಸಿದ್ದಲಿಂಗಯ್ಯನವರ ನಿಧನಕ್ಕೆ ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿ ಅನೇಕರು ಕಂಬನಿ ಮಿಡಿದಿದ್ದಾರೆ.

ಬೆಂಗಳೂರು: ದಲಿತ ಕವಿ, ಡಾ. ಸಿದ್ದಲಿಂಗಯ್ಯ (66) ಕೊರೋನಾದಿಂದ ನಿಧನರಾಗಿದ್ದಾರೆ. ಹಿರಿಯ ಕವಿ, ಬಂಡಾಯ, ದಲಿತ ಸಾಹಿತ್ಯದ ಮೇರು ಧ್ವನಿಯಾಗಿದ್ದ ಸಿದ್ದಲಿಂಗಯ್ಯನವರ ನಿಧನಕ್ಕೆ ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿ ಅನೇಕರು ಕಂಬನಿ ಮಿಡಿದಿದ್ದಾರೆ.

ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

“ದಲಿತರ ನೋವನ್ನು ಸಮರ್ಥವಾಗಿ ಅಕ್ಷರ ರೂಪಕ್ಕಿಳಿಸಿ, ಅವರನ್ನು ಜಾಗೃತಗೊಳಿಸಿದವರು ಡಾ. ಸಿದ್ದಲಿಂಗಯ್ಯ. ನೋವಿನ ಕೆಂಡವನ್ನೇ ಒಡಲೊಳಗಿರಿಸಿಕೊಂಡ ಅವರ ಕವನಗಳು ದಲಿತ ಚಳವಳಿಗೆ ಕಾವು ನೀಡಿತ್ತು. ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅನನ್ಯ ಸೇವೆ ಸಲ್ಲಿಸಿದ್ದ ಅವರ ನಿಧನದಿಂದ, ಸಾಮಾಜಿಕ ಕಳಕಳಿಯ ಅಪೂರ್ವ ಸಾಹಿತಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು, ಅವರ ಕುಟುಂಬ, ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ” ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ

“ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ‌‌ ಸಮಾನತೆಯ ಹೋರಾಟವನ್ನು‌ ಮುನ್ನಡೆಸಿದ್ದ ದಲಿತ ಕವಿ, ವಿಧಾನಪರಿಷತ್‌ನ ಮಾಜಿ ಸದಸ್ಯ ಮತ್ತು ನನ್ನ ಆತ್ಮೀಯ ಮಿತ್ರ ಸಿದ್ದಲಿಂಗಯ್ಯನವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.ಸಾವನ್ನು ಮೀರಿದ ಸಾಹಿತ್ಯದ ಮೂಲಕ ಅವರು ಅಜರಾಮರ. ಅವರ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ.” ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. 

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ “ಹಿರಿಯ ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ ನವರು ವಿಧಿವಶರಾಗಿರುವ ವಿಷಯ ತಿಳಿದು ಮನಸ್ಸಿಗೆ ತುಂಬಾ ಆಘಾತವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ  ದುಃಖವನ್ನು ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.” ಎಂದು ಹೇಳಿದ್ದಾರೆ.

“ಖ್ಯಾತ ಕವಿ, ದಲಿತ ಸಾಹಿತಿ ಡಾ. ಸಿದ್ದಲಿಂಗಯ್ಯ ನವರು ವಿಧಿವಶರಾಗಿರುವ ವಿಷಯ ತಿಳಿದು ಮನಸ್ಸಿಗೆ ಆಘಾತವಾಗಿದೆ. ಡಾ.ಸಿದ್ದಲಿಂಗಯ್ಯ ಅವರ ಅಗಲಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾಗದ ನಷ್ಟ.ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗಕ್ಕೆ  ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.” ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *