local news- ಕೃಷಿ ಮಾಹಿತಿ, ವಿದ್ಯುತ್ ನಿಲುಗಡೆ…..

ಉದ್ಯೋಗ ಖಾತ್ರಿ ಅನುಕೂಲ… 2021-22 ನೇ ಸಾಲಿನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೈತರು ಕಾಳುಮೆಣಸು, ಅಡಿಕೆ, ಮರಸಂಬಾರು ಬೆಳೆ, ತೆಂಗು, ಮಾವು, ಗೇರು, ಅಂಗಾಂಶ ಬಾಳೆ, ಅಂಗಾಂಶ ಪಪ್ಪಾಯ ಪ್ರದೇಶ ವಿಸ್ತರಣೆ, ಅಡಿಕೆ ಮತ್ತು ಕಾಳುಮೆಣಸು ಪುನಃಶ್ಚೇತನ, ಅಡಿಕೆ ತೋಟದಲ್ಲಿ ಅಂತರ್ಗತ ಬಸಿಗಾಲುವೆ ನಿರ್ಮಾಣ ಕಾರ್ಯಕ್ರಮಗಳನ್ನು ಮಾರ್ಗಸೂಚಿ ಅನುಸಾರ ಅನುಷ್ಠಾನಗೊಳಿಸಿ, ಯೋಜನೆಯ ಸದುಪಯೋಗ ಪಡೆಯಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ :

  1. ಶ್ರೀ ಕಾಶಿನಾಥ ಪಾಟಿಲ್ (ಉಂಬಳಮನೆ ಹೋಬಳಿ) ; 9535906269
  2. ಶ್ರೀ ತೇಜಸ್ವಿ ನಾಯ್ಕ (ಕೊಂಡ್ಲಿ ಹೋಬಳಿ) : 9740636382
  3. ಶ್ರೀಮತಿ ದೀಪಾ ಮಡಿವಾಳ (ಕೋಡ್ಕಣಿ ಹೋಬಳಿ) : 9480644550

2021- 22 ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಕುರಿತು.


      2021-22 ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಸಿದ್ದಾಪುರ ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸಲು ಕರ್ನಾಟಕ ಸರ್ಕಾರವು ಅಧಿಸೂಚನೆಯನ್ನು ನೀಡಿ ಆದೇಶಿಸಿದೆ. ಅಡಿಕೆ ಬೆಳೆಯ ವಿಮಾ ಮೊತ್ತ ರೂ. 51200.00 ಪ್ರತಿ ಎಕರೆಗೆ ಆಗಿದ್ದು, ರೈತರು ರೂ. 2560.00 ಪ್ರತಿ ಎಕರೆಗೆ  ಪ್ರೀಮಿಯಂ ಮೊತ್ತ ಪಾವತಿಸಬೇಕಾಗುತ್ತದೆ. ಕಾಳುಮೆಣಸು ಬೆಳೆಯ ವಿಮಾ ಮೊತ್ತ ರೂ. 18800.00 ಪ್ರತಿ ಎಕರೆಗೆ ಆಗಿದ್ದು, ರೈತರು ರೂ. 940.00 ಪ್ರತಿ ಎಕರೆಗೆ  ಪ್ರೀಮಿಯಂ ಮೊತ್ತ ಪಾವತಿಸಬೇಕಾಗುತ್ತದೆ. ವಿಮಾ ಕಂತು ಪಾವತಿಸಲು ಕೊನೆಯ ದಿನಾಂಕ 30/06/2021. ನಿಗದಿತ ನಮೂನೆಯಲ್ಲಿ ಅರ್ಜಿ, ಬ್ಯಾಂಕ್ ಪಾಸ ಬುಕ್ ನಕಲು. ಬೆಳೆ ನಮೂದಾಗಿರುವ ಪಹಣಿ ಪತ್ರಿಕೆ, ಸ್ವಯಂ ದೃಡೀಕರಣ ಹಾಗೂ ಆಧಾರ ಕಾರ್ಡ ನಕಲು ಪ್ರತಿಯನ್ನು ಹತ್ತಿರದ ಬ್ಯಾಂಕ್ / ಸೊಸೈಟಿಯಲ್ಲಿ ನೀಡಿ ನೊಂದಣಿ ಮಾಡಿಸಿಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ : 08389-230713

ಪರಿಹಾರ– ಸಿದ್ದಾಪುರ ತಾಲೂಕಿನ ಕಡಕೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರು ಹಾಗೂ ಧಾರವಾಡ ಹಾಲು ಒಕ್ಕೂಟದ ಕಲ್ಯಾಣ ಸಂಘದ ಸದಸ್ಯತ್ವ ಪಡೆದಿದ್ದ ಕೆರಿಯಾ ತಿಮ್ಮ ನಾಯ್ಕ ಅವರು ಇತ್ತೀಚೆಗೆ ನಿಧನಹೊಂದಿದ್ದು ಅವರ ವಾರಸುದಾರರಾದ ಅವರ ಪತ್ನಿ ಜಾಂಬವತಿ ಕೆರಿಯಾ ನಾಯ್ಕ ಅವರಿಗೆ ಧಾರವಾಡ ಹಾಲು ಒಕ್ಕೂಟದ ಕಲ್ಯಾಣ ಸಂಘದಿಂದ 10ಸಾವಿರ ರೂಗಳ ಪರಿಹಾರದ ಚೆಕ್‍ನ್ನು ಒಕ್ಕೂಟದ ನಿರ್ದೇಶಕ ಪಿ.ವಿ.ನಾಯ್ಕ ಬೇಡ್ಕಣಿ ಗುರುವಾರ ವಿತರಿಸಿದರು.
ಸಂಘದ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಮಗೇಗಾರ, ತಾಲೂಕು ವಿಸ್ತರಣಾಧಿಕಾರಿ ಪ್ರಕಾಶ ಕೆ, ಮುಖ್ಯ ಕಾರ್ಯನಿರ್ವಾಹಕಿ ಹೇಮಾವತಿ ಭಾಸ್ಕರ ನಾಯ್ಕ ಹಾಗೂ ರಮೇಶ ನಾಯ್ಕ ಇದ್ದರು.


ಗುರುವಾರ ಅರ್ಧದಿನ ವಿದ್ಯುತ್ ನಿಲುಗಡೆ- 110/11ಕೆ.ವಿ ಸಿದ್ದಾಪುರ ಉಪಕೇಂದ್ರದಲ್ಲಿ ದುರಸ್ತಿ ಹಾಗೂ ನಿರ್ವಹಣೆ ಮಾಡುವ ಕಾರ್ಯಕ್ಕೆ ದಿನಾಂಕ: : 17-6-2021 (ಗುರುವಾರ) ದಂದು ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 01.00 ಗಂಟೆಯವರೆಗೆ 110/11ಕೆ.ವಿ ಸಿದ್ದಾಪುರ ಉಪ ಕೇಂದ್ರದ ಮಾರ್ಗ ಮುಕ್ತತೆ ಪಡೆಯುವುದರಿಂದ ಸಿದ್ದಾಪುರ ತಾಲೂಕಿನಾದ್ಯಂತ ವಿದ್ಯುತ್ ನಿಲುಗಡೆಗೊಳಿಸಬೇಕಾಗಿರುತ್ತದೆ. ಆದ್ದರಿಂದ ಈ ವಿಷಯದ ಬಗ್ಗೆ ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಹೆಸ್ಕಾಂ ಪ್ರಕಟಣೆ ಮೂಲಕ ಕೋರಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *