Mini vidhaana soudha issue..ಸ್ಫೀಕರ್ ಕಾಗೇರಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಕೋವಿಡ್ ನಿಯಮ ಮತ್ತು ಸರ್ಕಾರದ ರೀತಿ-ರಿವಾಜು ಮರೆತು ಸಿದ್ಧಾಪುರ ತಾಲೂಕಿನ ಮಿನಿ ವಿಧಾನಸೌಧ ದ ಉದ್ಘಾಟನೆ ನೆರವೇರಿಸಿರುವ ರಾಜ್ಯ ವಿಧಾನಸಭಾ ಅಧ್ಯಕ್ಷರ ಕ್ರಮ ಪ್ರಜಾಪ್ರಭುತ್ವ ವಿರೋಧಿಯಾಗಿದ್ದು ಇದರ ನೈತಿಕ ಹೊಣೆ ಹೊತ್ತು ಸ್ಫೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತನಾಯ್ಕ ಮನ್ಮನೆ ರಾಜ್ಯ ವಿಧಾನಸಭಾ ಅಧ್ಯಕ್ಷರು ಕೋವಿಡ್ ತೊಂದರೆ ಸಮಯದಲ್ಲಿ ಜನರ ನೆರವಿಗೆ ಬರಲಿಲ್ಲ, ರಾಜ್ಯ ವಿಧಾನಸಭಾ ಅಧ್ಯಕ್ಷರಾಗಿ ಮೇಲಿಂದ ಮೇಲೆ ಕರೋನಾ ನಿಯಮ ಉಲ್ಲಂಘಿಸುವುದು, ಸರ್ಕಾರದ ಶಿಷ್ಟಾಚಾರ ಕ್ಕೆ ಅಪಚಾರ ಮಾಡುವ ಕೆಲಸ ಮಾಡುತಿದ್ದಾರೆ. ಸರ್ಕಾರದ ಮುಖ್ಯಸ್ಥರಾಗಿ ವಿಧಾನಸಭಾ ಅಧ್ಯಕ್ಷರೇ ಇಂಥ ತಪ್ಪು ಮಾಡಿದರೆ ಕೆಳ ಹಂತದವರಿಗೆ ತಪ್ಪು ಮಾಡಲು ಅವಕಾಶ ಮಾಡಿದಂತೆ ಇಂಥ ಅನುಚಿತಕೆಲಸ ಮಾಡುವ ವಿಧಾನಸಭಾ ಅಧ್ಯಕ್ಷರು ರಾಜೀನಾಮೆ ನೀಡಿ ಆ ಸ್ಥಾನದ ಘನತೆ, ಗಂಭೀರತೆ ಕಾಪಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.


ವಸಂತ ನಾಯ್ಕರ ಮಾಧ್ಯಮ ಹೇಳಿಕೆ-
ಕಾಂಗ್ರೆಸ್ ಸರ್ಕಾರದ ಆಡಳಿತದ ಅವಧಿಯಲ್ಲಿ ಆರ್ ವಿ ದೇಶಪಾಂಡೆ ಅವರು ಉಸ್ತುವಾರಿ ಸಚಿವರಾಗಿದ್ದಾಗ ಸಿದ್ದಾಪುರ ತಾಲೂಕಿನ ಮಿನಿ ವಿಧಾನಸೌಧ ಹಾಗೂ ಬಸ್ಟಾಂಡ್ ಗಳಿಗೆ ಮುತುವರ್ಜಿವಹಿಸಿ ಅನುದಾನ ಮಂಜೂರು ಮಾಡಿಸಿದ್ದರು. ಅವರ ಶ್ರಮದ ಫಲವಾಗಿ ಇಂದು ಶಹರದಲ್ಲಿ ಭವ್ಯವಾದ ಮಿನಿವಿಧಾನಸೌಧ ಹಾಗೂ ಸುಸಜ್ಜಿತವಾದ ಬಸ್ ನಿಲ್ದಾಣ ನಿರ್ಮಾಣಗೊಂಡಿದೆ. ಸ್ಥಳೀಯ ಶಾಸಕ ಕಾಗೇರಿ ಅವರು ಕರೋನಾ ವೇಳೆಯಲ್ಲಿ ಆಸ್ಪತ್ರೆಯ ವ್ಯವಸ್ಥೆ ಬಗ್ಗೆ ಮಾತನಾಡಿಲ್ಲ ತಮ್ಮ ಸ್ವಂತ ಹಣದಿಂದ ಬಡವರಿಗೆ ಕಿಟ್ ನೀಡಿಲ್ಲ. . ಇಂದಿರಾ ಕ್ಯಾಂಟೀನ್ ಮಂಜೂರಿ ಆಗಿ ಒಂದು ವರ್ಷ ಕಳೆದರೂ ಓಪನಿಂಗ್ ಮಾಡಿಲ್ಲ, ಪ್ರೋಟೋಕಾಲ್ ಪ್ರಕಾರ ಕಾರ್ಯಕ್ರಮ ಇಲ್ಲ. ಸಾರ್ವಜನಿಕರಿಗೆ ಕರೋನಾ ಮಾರ್ಗಸೂಚಿಗಳನ್ನು ತಿಳಿಸಿ ಹೇಳಿ ಕಟ್ಟುನಿಟ್ಟಾಗಿ ಮಾರ್ಗಸೂಚಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕಾದ ಇವರೇ ಎಲ್ಲಾ ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಜನಜಾತ್ರೆ ಸೇರಿಸಿ ಇಂದು ಮಿನಿವಿಧಾನಸೌಧದ ಪೂಜಾ ಕಾರ್ಯಕ್ರಮ ನೆರವೇರಿಸಿದ್ದಾರೆ. ಮುಂದಿನ ದಿನಗಳಲ್ಲಿ ಕೋವಿಡ್ ಹೆಚ್ಚಳವಾದರೆ ಅದಕ್ಕೆ ಇವರೇ ನೇರ ಕಾರಣರಾಗುತ್ತಾರೆ. ಬಡಜನರಿಗೆ ಜನಸಾಮಾನ್ಯರಿಗೆ ಇರುವಂತಹ ಕೋವಿಡ್ ಕಾನೂನುಗಳು ಸಭಾಪತಿಗಳಿಗೆ ಅನ್ವಯವಾಗುವುದಿಲ್ಲ ವೇ. ಎಸಿ, ತಸಿಲ್ದಾರ್, ತಾಲೂಕ ಪಂಚಾಯತ್ ಎಕ್ಸಿಕ್ಯೂಟಿವ್ ಅಧಿಕಾರಿ, ಡಿವೈಎಸ್ಪಿ, ಸಿಪಿಐ ಅವರುಗಳ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆದರೂ ಯಾಕೆ ಯಾರೊಬ್ಬರೂ ಧ್ವನಿಯೆತ್ತುತ್ತಿಲ್ಲ. ಇಂದಿನ ಘಟನೆಯ ಬಗ್ಗೆ ಜಿಲ್ಲಾಡಳಿತದಿಂದ ಸೂಕ್ತ ಕ್ರಮವಾಗಬೇಕು

ವಸಂತ ಎಲ್. ನಾಯ್ಕ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸಿದ್ದಾಪುರ

ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸಲು ಕೋರಿ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಇಂದು ಮನವಿ ನೀಡಿದ ಸಂದರ್ಭ
ಸಿದ್ಧಾಪುರ ಕೋಡಿಗದ್ದೆ ಗ್ರಾಮದ ಗಾಯತ್ರಿ ಚಂದ್ರು ನಾಯ್ಕರ ಮನೆಯ ಮೇಲೆ ಮರ ಬಿದ್ದು ಆದ ಹಾನಿ
ಮರಲಿಗೆ ಶಶಿಕಲಾ ಮಂಜುನಾಥ ಮಡಿವಾಳರ ವಾಸದ ಮನೆಯ ಮೇಲೆ ಮರ ಬಿದ್ದು ಆದ ಹಾನಿ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *