



ಅನ್ಲಾಕ್- ರಾತ್ರಿ ಮತ್ತು ವಾರಾಂತ್ಯದ ನಿಷೇಧಾಜ್ಞೆ ಯೊಂದಿಗೆ ಜುಲೈ 5 ರ ವರೆಗೆ ಸೋಮುವಾರದಿಂದ ಶುಕ್ರವಾರದ ವರೆಗೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅನ್ಲಾಕ್ ಮಾಡಲಾಗಿದೆ . ಈ ಅವಧಿಯಲ್ಲಿ ಶುಕ್ರವಾರ ರಾತ್ರಿಯಿಂದ ಸೋಮುವಾರದ ಮುಂಜಾನೆ 5 ರ ವರೆಗೆ ಲಾಕ್ ಡೌನ್ ಚಾಲ್ತಿಯಲ್ಲಿರುತ್ತದೆ. ಉಳಿದ ದಿನಗಳಲ್ಲಿ ಮುಂಜಾನೆ 5 ರಿಂದ ಸಾಯಂಕಾಲ ಏಳರ ವರೆಗೆ ಸಾರ್ವಜನಿಕರಿಗೆ ಸಂಚಾರ,ವ್ಯವಹಾರಗಳಿಗೆ ಅವಕಾಶ ನೀಡಲಾಗಿದೆ.
ಕಾಂಗ್ರೆಸ್ ಬಗ್ಗೆ ಅಪಪ್ರಚಾರ: ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು
ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾಂಗ್ರೆಸ್ ಪಕ್ಷದ ವಿರುದ್ಧ ಸೂಲಿಬೆಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜೇಶ್ ಕುಮಾರ್ ದೂರು ನೀಡಿದ್ದಾರೆ.
ಜೂ. 7 ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದ ಚಕ್ರವರ್ತಿ ಸೂಲಿಬೆಲೆ, “ಕಾಂಗ್ರೆಸ್ ಆಕ್ಸಿಜನ್ ಅಕ್ರಮ ದಾಸ್ತಾನು ಮಾಡಿ ಜನರಿಗೆ ಸಿಗದ ಹಾಗೆ ಮಾಡಿತು. ಅಮಾಯಕರ ಸಾವನ್ನು ಸಂಭ್ರಮಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕಿತು” ಎಂದಿದ್ದಾರೆ. ಇದು ಸುಳ್ಳಾರೋಪವಾಗಿದ್ದು, ಈ ಮೂಲಕ ಪಕ್ಷಕ್ಕೆ ಕೆಟ್ಟ ಹೆಸರು ತರಿಸಲಾಗುತ್ತಿದೆ ಎಂದು ತೇಜೇಶ್ ಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸದಾ ಸುಳ್ಳು ಹೇಳಿ,ಬರೆದು ದೇಶದ್ರೋಹದ ಕೆಲಸಮಾಡುವ ಬಿ,ಜೆ,ಪಿ.ಬಾಡಿಗೆ ಬಂಟ ಸೂಲಿಬೆಲೆ ವಿರುದ್ಧ ಎಲ್ಲಾ ಜಿಲ್ಲೆಗಳಲ್ಲಿ ದೂರು ದಾಖಲಿಸಬೇಕೆಂದು ಟ್ವೀಟಿಗರು ಒತ್ತಾಯಿಸಿದ್ದಾರೆ.(kpc)
