ಸೋಮುವಾರ ಬೆಲೆ ಏರಿಕೆ ವಿರೋಧಿಸಿ ರೈತಸಂಘ & ಜೆ.ಡಿ.ಎಸ್.ನಿಂದ ಪ್ರತಿಭಟನೆ

7 ತಿಂಗಳ ಪ್ರತಿಭಟನೆ ಅಂತ್ಯಗೊಳಿಸಿ, ಮಾತುಕತೆಗೆ ಸಿದ್ಧ: ರೈತರಿಗೆ ಕೇಂದ್ರ ಕೃಷಿ ಸಚಿವ

ಕೇಂದ್ರ ಸರ್ಕಾರದ 3 ಹೊಸ ಕೃಷಿ ಕಾಯ್ದೆಗಳು 8 ನೇ ತಿಂಗಳಿಗೆ ಕಾಲಿಟ್ಟಿತ್ತು,  ರೈತರಿಗೆ ತಮ್ಮ 7 ತಿಂಗಳ ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. 

ಕರೋನಾದಿಂದ ಮೃತರಾದವರಿಗೆ ಪರಿಹಾರ ಹೆಚ್ಚಿಸುವುದು ಸೇರಿದಂತೆ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸೋಮುವಾರ ಸಿದ್ಧಾಪುರ ಮಿನಿ ವಿಧಾನ ಸೌಧದ ಎದುರು ಡಾ.ಶಶಿಭೂಷಣ ಹೆಗಡೆ ನೇತೃತ್ವದಲ್ಲಿ ಬೆಳಿಗ್ಗೆ 10-30 ಕ್ಕೆ ಮತ್ತು 11ಕ್ಕೆ ವೀರಭದ್ರನಾಯ್ಕ ನೇತೃತ್ವದಲ್ಲಿ ಸಾಂಕೇತಿಕ ಪ್ರತಿಭಟನೆಗಳು ನಡೆಯಲಿವೆ.

Union minister Narendra Singh Tomar

ನವದೆಹಲಿ: ಕೇಂದ್ರ ಸರ್ಕಾರದ 3 ಹೊಸ ಕೃಷಿ ಕಾಯ್ದೆಗಳು 8 ನೇ ತಿಂಗಳಿಗೆ ಕಾಲಿಟ್ಟಿತ್ತು,  ರೈತರಿಗೆ ತಮ್ಮ 7 ತಿಂಗಳ ಪ್ರತಿಭನೆಯನ್ನು ಅಂತ್ಯಗೊಳಿಸುವಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. 

ರೈತರ ಪ್ರತಿಭಟನೆ ಪ್ರಾರಂಭವಾದ ನಂತರ ಈ ವರೆಗೂ ಕೇಂದ್ರ ಹಾಗೂ ರೈತ ಸಂಘಟನೆಗಳೊಂದಿಗೆ 11 ಸುತ್ತಿನ ಮಾತುಕತೆ ನಡೆದಿದ್ದು,  2021 ರ ಜ.26 ರಂದು ರೈತರು ದೆಹಲಿಯ ಕೆಂಪು ಕೋಟೆಯಲ್ಲಿ ನಡೆದಿದ್ದ ಘರ್ಷಣೆಯ ನಂತರ ಮಾತುಕತೆ ನಡೆದಿಲ್ಲ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬ್, ಹರ್ಯಾಣ ಹಾಗೂ ಉತ್ತರ ಪ್ರದೇಶದಿಂದ ಸಾವಿರಾರು ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ರೈತರ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕಾಯ್ದೆಗಳ ಜಾರಿಯನ್ನು ತಡೆದು ಕಾನೂನು ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸಮಿತಿ ರಚಿಸಿತ್ತು. ಸಮಿತಿ ವರದಿಯನ್ನು ಸಲ್ಲಿಸಿದೆ. 

“ದೇಶಾದ್ಯಂತ ಹಲವರು ಕೃಷಿ ಕಾನೂನುಗಳ ಪರವಾಗಿದ್ದಾರೆ, ಆದರೂ ಕೆಲವು ರೈತರಿಗೆ ಈ ಕಾನೂನಿಗೆ ಸಂಬಂಧಿಸಿದ ಸಮಸ್ಯೆ ಇದ್ದಲ್ಲಿ ಆ ರೈತರನ್ನು ಆಲಿಸುವುದಕ್ಕೆ ಚರ್ಚೆ ಮಾಡುವುದಕ್ಕೆ ಸರ್ಕಾರ ಸಿದ್ಧವಿದೆ ಎಂಬುದನ್ನು ಮಾಧ್ಯಮಗಳ ಮೂಲಕ ತಿಳಿಸುತ್ತಿದ್ದೇನೆ ಎಂದು ತೋಮರ್ ಟ್ವೀಟ್ ಮಾಡಿದ್ದಾರೆ. ಸರ್ಕಾರ ಕನಿಷ್ಟ ಬೆಂಬಲ ಬೆಲೆ (ಎಂಎಸ್ ಪಿ) ಯನ್ನು ಹೆಚ್ಚಿಸಿದ್ದು, ಎಂಎಸ್ ಪಿ ಆಧಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಧಾನ್ಯಗಳನ್ನು ಸಂಗ್ರಹಿಸುತ್ತಿದೆ. 

ಕೇಂದ್ರ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಎಂಎಸ್ ಪಿ ಗೆ ಲಿಖಿತ ಭರವಸೆ ನೀಡಲು ಆಗ್ರಹಿಸಿ ರೈತರು 2020 ರ ನವೆಂಬರ್ 26 ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *