
ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು ಮನೆಯಂಗಳ ಮತ್ತು ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು.


ಬೆಂಗಳೂರು: ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು ಮನೆಯಂಗಳ ಮತ್ತು ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು.
ಸಹಭಾಗಿ ಸಸ್ಯ ಅಭಿವೃದ್ದಿ ಕಾರ್ಯಕ್ರಮದ ಅಡಿ ಸಿದ್ದು ಹಲಸು ತಳಿಯ ಸಸ್ಯಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿಯ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಹಲಸಿನ ತಳಿಗಳ ಬಗ್ಗೆ ಸಂಶೋಧನೆ ನಡೆಸುತ್ತಿದ್ದು, ತುಮಕೂರು ಜಿಲ್ಲೆಯ ಚೇಳೂರು ಗ್ರಾಮ ಎಸ್.ಎಸ್.ಪರಮೇಶ್ ಎಂಬುವರ ತೋಟದಲ್ಲಿ ಈ ತಳಿಯನ್ನು ಗುರುತಿಸಲಾಗಿರುವುದು ಶ್ಲಾಘನೀಯ ಎಂದರು.
ಉಳಿದ ಹಲಸಿನ ತಳಿಗಳಿಗೆ ಹೋಲಿಸಿದರೆ ತಾಮ್ರ ಕೆಂಪು ಬಣ್ಣದ ಸಿದ್ದು ಹಲಸು ಅಧಿಕ ಪೌಷ್ಠಿಕಾಂಶಗಳ ಜೊತೆಗೆ ಔಷಧೀಯ ಗುಣಗಳನ್ನು ಹೊಂದಿದೆ. ದೇಶದಲ್ಲಿ ಲಭ್ಯವಿರುವ ಎಲ್ಲಾ ಹಲಸು ತಳಿಗಳ ಪೈಕಿ ಸಿದ್ದು ಹಲಸು ಶ್ರೇಷ್ಠ ಮತ್ತು ವಿಶಿಷ್ಟ ಎಂಬ ಮಾನ್ಯತೆ ಪಡೆದಿದೆ ಎಂದರು.
ಎಸ್.ಎಸ್ ಪರಮೇಶ್ ಅವರು ಕಳೆದ 2 ವರ್ಷಗಳಲ್ಲಿ 22 ಲಕ್ಷ ಆದಾಯವನ್ನು ಗಳಿಸಿದ್ದು, ಜೀವ ವೈವಿಧ್ಯತೆಯನ್ನು ಕಾಪಾಡುವುದರೊಂದಿಗೆ ರೈತರು ತಮ್ಮ ಆದಾಯವನ್ನೂ ದ್ವಿಗುಣಗೊಳಿಸಿಕೊಳ್ಳಬಹುದಾಗಿದೆ ಎಂದು ನಿರೂಪಿಸಿದ್ದಾರೆ.
ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಸಹಯೋಗದೊಂದಿಗೆ ಈವರೆಗೆ ಒಂದು ಲಕ್ಷ ಸಸಿಗಳನ್ನು ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ 31 ಸಾವಿರ ಕೃಷಿಕರಿಗೆ ವಿತರಿಸಲಾಗಿದೆ. ರಾಜ್ಯ ರೈತರು ಈ ವಿಶಿಷ್ಟ ಪ್ರಬೇಧದ ಹಲಸನ್ನು ಬೆಳೆಸುವ ಮೂಲಕ ಈ ತಳಿಯನ್ನು ಸಂರಕ್ಷಿಸುವುದಲ್ಲದೆ ಆರ್ಥಿಕ ಭದ್ರತೆಯನ್ನು ಕಂಡುಕೊಳ್ಳಬಹುದು.
ಶಿಕಾರಿಪುರದ ತಮ್ಮ ತೋಟದಲ್ಲಿ ಸಿದ್ದು ಹಲಸು ಸಸಿಗಳನ್ನು ಬೆಳೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳೆಸಲು ಆಸಕ್ತಿ ತೋರಿದರು.
ಈ ಸಂದರ್ಭದಲ್ಲಿ ಸಂಸದ ಜಿ.ಎಸ್.ಬಸವರಾಜು, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಬಿ.ಎನ್.ಎಸ್ ಮೂರ್ತಿ, ತುಮಕೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಸಿ.ಹೆಚ್ .ಇ ಎಸ್ . ಮುಖ್ಯಸ್ಥ . ಜಿ.ಕರುಣಾಕರನ್, ಹಾಗೂ ಸಿದ್ದು ಹಲಸು ಬೆಳೆದ ರೈತ ಎಸ್.ಎಸ್.ಪರಮೇಶ್ ಮತ್ತಿತರರು ಉಪಸ್ಥಿತರಿದ್ದರು.(kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
