

ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ವಿದೇಶಗಳಲ್ಲಿ ಇರುವಂತೆ ‘ಅಪರಾಧ ಸ್ಥಳ ಪರಿಶೀಲನಾಧಿಕಾರಿ’ ಎಂಬ ಹೊಸ ಹುದ್ದೆಗಳನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೃಷ್ಟಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಬೆಂಗಳೂರು: ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ವಿದೇಶಗಳಲ್ಲಿ ಇರುವಂತೆ ‘ಅಪರಾಧ ಸ್ಥಳ ಪರಿಶೀಲನಾಧಿಕಾರಿ’ ಎಂಬ ಹೊಸ ಹುದ್ದೆಗಳನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೃಷ್ಟಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅಪರಾಧ ನಡೆದ ಸ್ಥಳವನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಅಲ್ಲಿ ಎಲ್ಲ ರೀತಿಯ ಸಾಕ್ಷ್ಯವನ್ನು ಸಂಗ್ರಹಿಸಿ ಅಪರಾಧಿಯನ್ನು ಪತ್ತೆ ಮಾಡುವಲ್ಲಿ ‘ಅಪರಾಧ ಸ್ಥಳ ಪರಿಶೀಲನಾಧಿಕಾರಿ’ (scene of crime officer) ಪರಿಣಿತಿ ಹೊಂದಿರುತ್ತಾರೆ. ಮೊದಲ ಹಂತದಲ್ಲಿ 206 ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ ಎಂದರು.
ಈವರೆಗೆ ಸಾಕ್ಷ್ಯ ಸಂಗ್ರಹಿಸುವ ಕೆಲಸವನ್ನು ಸ್ಥಳೀಯ ಅಧಿಕಾರಿಗಳೇ ಮಾಡುತ್ತಿದ್ದರು. ಗಂಭೀರ ಸ್ವರೂಪದ ಅಪರಾಧಗಳಲ್ಲಿ ಇನ್ನು ಮುಂದೆ ಈ ತಂಡವೇ ಅಪರಾಧ ಕೃತ್ಯ ನಡೆದ ಸ್ಥಳಗಳಿಗೆ ಮೊದಲು ಭೇಟಿ ನೀಡಲಿದೆ. ಅಲ್ಲಿನ ಎಲ್ಲ ಸಾಕ್ಷಾಧಾರಗಳ ಸಂರಕ್ಷಣೆ, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಸುರಕ್ಷಿತವಾಗಿ ಕಳುಹಿಸಿಕೊಡುವುದು, ತನಿಖಾಧಿಕಾರಿಗೆ ಆ ಸಾಕ್ಷಾಧಾರಗಳನ್ನು ಒದಗಿಸುವುದು ಸೇರಿದಂತೆ ಇತರ ಅವಶ್ಯ ಕರ್ತವ್ಯಗಳನ್ನು ಮಾಡುತ್ತಾ ಅಪರಾಧಿಗಳನ್ನು ಅತ್ಯಂತ ಶ್ರೀಘ್ರದಲ್ಲಿ ಪತ್ತೆ ಮಾಡಲು ಮೂಲಭೂತವಾಗಿ ಬೇಕಾಗುವ ಎಲ್ಲ ಕೆಲಸ ಕಾರ್ಯಗಳನ್ನು ಈ ಅಧಿಕಾರಿಗಳು ಮಾಡುತ್ತಾರೆ’ ಎಂದು ವಿವರಿಸಿದರು.
ಅಪರಾಧ ಪ್ರಕರಣಗಳ ತ್ವರಿತ ಪತ್ತೆ ಹಾಗೂ ಅಪರಾಧಿಗಳ ಪತ್ತೆಗಾಗಿಯೇ ಈ ರೀತಿಯ ಹುದ್ದೆಯನ್ನು ಸೃಷ್ಟಿಸಿರುವುದು ದೇಶದಲ್ಲೇ ಮೊದಲು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ‘ಅಪರಾಧ ಸ್ಥಳ ಪರಿಶೀಲನಾಧಿಕಾರಿ’ ಹುದ್ದೆಗಳ ಆದೇಶ ಪ್ರತಿಯನ್ನು ನೀಡಲಿದ್ದಾರೆ ಎಂದು ಅವರು ತಿಳಿಸಿದರು. (kpc)


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
