ರಾಜ್ಯದ ಆದಾಯದ 70% ಕ್ಕಿಂತ ಹೆಚ್ಚು ವ್ಯಯವಾಗುವುದ್ಯಾಕೆ…?

ಸಾರ್ವಜನಿಕರ ಸಹಕಾರ, ಸಹಭಾಗಿತ್ವ ಇಲ್ಲದೆ ಸರ್ಕಾರದ ಯೋಜನೆಗಳ ಯಶಸ್ಸು ಸಾಧ್ಯವಿಲ್ಲ  ಎಂದು ಅಭಿಪ್ರಾಯ ಪಟ್ಟಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜನರ ತೆರಿಗೆ ಹಣದ ಮುಕ್ಕಾಲು ಭಾಗ ನೌಕರರ ವೇತನ, ಪಿಂಚಣಿ, ಸಾಲದಮೊತ್ತಕ್ಕೆ ಕಟ್ಟಬೇಕಾಗಿರುವ ಬಡ್ಡಿಗೆ ಹೋಗುತ್ತದೆ ಎಂದಿದ್ದಾರೆ.


ಸಿದ್ಧಾಪುರದಲ್ಲಿ ಜಲಜೀವನ್ ಮಿಷನ್ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಜಲಜೀವನ್ ಮಿಶನ್ ಸೇರಿದಂತೆ ಕೆಲವು ಸರ್ಕಾರಿ ಯೋಜನೆಗಳಿಗೆ ಸಾರ್ವಜನಿಕರ ವಂತಿಕೆ ಅನಿವಾರ್ಯ ಜನತು ಕೂಡಾ ತಮ್ಮ ವಂತಿಗೆ, ಸಹಕಾರ ಸಹಭಾಗಿತ್ವ ವಿಲ್ಲದೆ ಎಲ್ಲದನ್ನೂ ಸರ್ಕಾರವೇ ಮಾಡಬೇಕು ಎಂದು ಕಾಯಬಾರದು. ಸರ್ಕಾರ ನಡೆಸುವವರಿಗೆ ಸರ್ಕಾರ, ವ್ಯವಸ್ಥೆಯ ವಾಸ್ತವ ಅರಿವಿರುತ್ತದೆ. ಕರ್ನಾಟಕದಲ್ಲಿ ಪ್ರತಿಶತ 70 ಕ್ಕಿಂತ ಹೆಚ್ಚು ಆದಾಯ ನಿರಂತರ ಕರ್ಚಿಗೇ ವೆಚ್ಚವಾದರೆ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ಹೊಂದಿಸುವುದು ಹ್ಯಾಗೆ? ಎಂದು ಪ್ರಶ್ನಿಸಿದ ವಿಧಾನಸಭಾ ಅಧ್ಯಕ್ಷರು ಸಾರ್ವಜನಿಕರು ತಮ್ಮ ಕರ್ತವ್ಯ ಪಾಲಿಸಿದಾಗ ಸರ್ಕಾರ ತನ್ನ ಜವಾಬ್ಧಾರಿ ನಿರ್ವಹಿಸಲು ಸಾಧ್ಯ ಸರ್ಕಾರ, ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸಲು ಸಾರ್ವಜನಿಕರ ಸಹಕಾರ ಬೇಕು. ಎಂದರು.

ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿಯೇ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸಲಾಗಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಚುನಾಯಿತ ಪ್ರತಿನಿಧಿಗಳ ಬೇಕು- ಬೇಡಿಕೆಗಳನ್ನು ಕೇಳಿ ಸಹಕಾರದಿಂದ ಕೆಲಸ ಮಾಡದಿದ್ದರೆ ಗ್ರಾಮೀಣಾಭಿವೃದ್ಧಿ ವ್ಯವಸ್ಥೆಗೆ ಪೂರಕವಾಗುವುದಿಲ್ಲ. ಅಧಿಕಾರಿಗಳು ಜನಪ್ರತಿನಿಧಿಗಳ ಹೊಂದಾಣಿಕೆಯಿಂದ ಅಭಿವೃದ್ಧಿ ಸಾಧ್ಯವಾಗದಿದ್ದರೆ ಆ ವ್ಯವಸ್ಥೆ ಮುಂದುವರಿಯುವುದೇ ಕಷ್ಟ   ಎಂದು ತಿಳಿಹೇಳಿದ ವಿಶ್ವೇಶ್ವರ ಹೆಗಡೆ ಉದ್ಯೋಗಖಾತ್ರಿ ಯೋಜನೆಯಲ್ಲಿ ಸಾಧನೆ ಮಾಡಿದರೆ ಗ್ರಾಮೀಣ ಜನರ ಬದುಕು ಸುಧಾರಿಸಬಲ್ಲದು ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *