ಭಯಭೀತರು ಪಕ್ಷ ಬಿಡಲು ಸ್ವತಂತ್ರರು; ನಿರ್ಭೀತರಿಗೆ ಪಕ್ಷಕ್ಕೆ ಸ್ವಾಗತ: ರಾಹುಲ್ ಗಾಂಧಿ

ಬಿಜೆಪಿ ಮತ್ತು ವಾಸ್ತವವನ್ನು ಎದುರಿಸಲು ಹೆದರುವವರು ಪಕ್ಷವನ್ನು ಬಿಡಲು ಸ್ವತಂತ್ರರು. ಹಾಗೆ ಹೊರಗಿನ ನಿರ್ಭೀತ ನಾಯಕರು ಪಕ್ಷವನ್ನು ಸೇರಬಹುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

Rahul gandhi

ನವದೆಹಲಿ: ಬಿಜೆಪಿ ಮತ್ತು ವಾಸ್ತವವನ್ನು ಎದುರಿಸಲು ಹೆದರುವವರು ಪಕ್ಷವನ್ನು ಬಿಡಲು ಸ್ವತಂತ್ರರು. ಹಾಗೆ ಹೊರಗಿನ ನಿರ್ಭೀತ ನಾಯಕರು ಪಕ್ಷವನ್ನು ಸೇರಬಹುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. 

ಆನ್‌ಲೈನ್ ಕಾರ್ಯಕ್ರಮವೊಂದರಲ್ಲಿ ಪಕ್ಷದ ಸಾಮಾಜಿಕ ಜಾಲತಾಣದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರಾಹುಲ್, ಜ್ಯೋತಿರಾಧಿತ್ಯ ಸಿಂದಿಯಾರನ್ನು ಉಲ್ಲೇಖಿಸಿ ಮಾತನಾಡಿದ ಅವರು ಭಯಭೀತರಾದವರು ಪಕ್ಷವನ್ನು ತೊರೆದಿದ್ದಾರೆ. ಹಾಗೆ ಹೆದರದ ಅನೇಕ ನಾಯಕರೂ ಇದ್ದಾರೆ. ಅದೇ ರೀತಿ ಕಾಂಗ್ರೆಸ್ ಹೊರಗೆ ಇದ್ದಾರೆ. ಇವರೆಲ್ಲ ನಮ್ಮವರಾಗಿದ್ದಾರೆ. ಅವರನ್ನು ಪಕ್ಷಕ್ಕೆ ಕರೆತನ್ನಿ. ನಮ್ಮ ಪಕ್ಷದೊಳಗಿನ ಭಯಭೀತರನ್ನು ಹೊರ ಹಾಕಬೇಕು ಎಂದು ಸಾಮಾಜಿಕ ಮಾಧ್ಯಮ ಕಾರ್ಯಕರ್ತರಿಗೆ ತಿಳಿಸಿದರು.

https://imasdk.googleapis.com/js/core/bridge3.471.1_en.html#goog_764114153

ಕೆಲ ಆರ್‌ಎಸ್‌ಎಸ್ ನವರಿದ್ದು ಅವರೆಲ್ಲಾ ಪಕ್ಷ ಬಿಟ್ಟು ಹೋಗಬೇಕು. ಅವರು ಸಂತೋಷಪಡಲಿ. ನಮಗೆ ಅವರು ಬೇಡ. ನಮಗೆ ಅವರ ಅಗತ್ಯವಿಲ್ಲ. ನಮಗೆ ನಿರ್ಭೀತ ಜನರು ಬೇಕು. ಇದು ನಮ್ಮ ಸಿದ್ಧಾಂತ. ಇದು ನಿಮಗೆ ನನ್ನ ಮೂಲ ಸಂದೇಶ ಎಂದು ಅವರು ಹೇಳಿದರು.

ಸಿಂಧಿಯಾ ಉದಾಹರಣೆಯನ್ನು ಉಲ್ಲೇಖಿಸಿ ಅವರು ಪಕ್ಷವನ್ನು ಉಳಿಸಬೇಕಿತ್ತು. ಆದರೆ ಹೆದರಿಕೊಂಡು ಪಕ್ಷ ಬಿಟ್ಟು ಆರ್ ಎಸ್ ಎಸ್ ಸೇರಿಕೊಂಡಿದ್ದಾರೆ. ಕಾಂಗ್ರೆಸ್ ನ ಹಲವು ಹಿರಿಯ ನಾಯಕರು ಇತ್ತೀಚಿನ ದಿನಗಳಲ್ಲಿ ಬಿಜೆಪಿಗೆ ಸೇರಲು ಪಕ್ಷವನ್ನು ತೊರೆದಿದ್ದಾರೆ. ಅವರಲ್ಲಿ ಸಿಂಧಿಯಾ ಮತ್ತು ಜಿತಿನ್ ಪ್ರಸಾದ ಸೇರಿದ್ದಾರೆ. ಇನ್ನು ನಟಿ ಖುಷ್ಬೂ ಸುಂದರ್ ಅವರಲ್ಲದೆ ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡರಾದ ನಾರಾಯಣ್ ರಾಣೆ ಮತ್ತು ರಾಧಾಕೃಷ್ಣ ವಿಖ್ ಪಾಟೀಲ್ ಕೂಡ 2019ರಲ್ಲಿ ಪಕ್ಷವನ್ನು ತ್ಯಜಿಸಿದ್ದರು.

ಜೂಮ್ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಹುಲ್ ಗಾಂಧಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ವಿಭಾಗದ ಸುಮಾರು 3,500 ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *