ದೇಶದ ಮೊದಲ ಕ್ಯಾನೊಪಿ ವಾಕ್ ರಾಜ್ಯದ ಪುಟ್ಟ ತಾಲೂಕು ಜೊಯಡಾದಲ್ಲಿ ಸದ್ದಿಲ್ಲದೆ ಆರಂಭ

ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ದೇಶದ ಮೊದಲ ‘ಕ್ಯಾನೊಪಿ ವಾಕ್’ ಆರಂಭ

ಉತ್ತರ ಕನ್ನಡ ಜಿಲ್ಲೆಯ ಕುವೇಶಿ ಬಳಿಯ ಅರಣ್ಯವಲಯದಲ್ಲಿ ನಿರ್ಮಿಸಲಾಗಿದ್ದ ದೇಶದ ಮೊದಲ ಮರಗಳ ಮೇಲೆ ನಡಿಗೆಯ ‘ಕ್ಯಾನೊಪಿ ವಾಕ್’ ಇದೀಗ ಪ್ರವಾಸಿಗರ ಭೇಟಿಗೆ ಮುಕ್ತವಾಗಿದೆ.

File photo

ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಕುವೇಶಿ ಬಳಿಯ ಅರಣ್ಯವಲಯದಲ್ಲಿ ನಿರ್ಮಿಸಲಾಗಿದ್ದ ದೇಶದ ಮೊದಲ ಮರಗಳ ಮೇಲೆ ನಡಿಗೆಯ ಕ್ಯಾನೊಪಿ ವಾಕ್ ಇದೀಗ ಪ್ರವಾಸಿಗರ ಭೇಟಿಗೆ ಮುಕ್ತವಾಗಿದೆ.

ಕ್ಯಾಸಲ್ ರಾಕ್ ವನ್ಯಜೀವಿ ವಿಭಾಗವು ಕುವೇಶಿ ಪ್ರದೇಶದ ದುಧ್‌ಸಾಗರ್ ಜಲಪಾತಗಳ ಬಳಿ ಚಾರಣವನ್ನು ಪುನರಾರಂಭಿಸಿದೆ.

ಕಾಳಿ ಹುಲಿ ಅರಣ್ಯಧಾಮದ ವ್ಯಾಪ್ತಿಯಲ್ಲಿ ಬರುವ ಕ್ಯಾನೊಪಿ ವಾಕ್ ಇದಾಗಿದ್ದು, ಇದು ಕರ್ನಾಟಕದ ಹಾಗೂ ದೇಶದ ಮೊಟ್ಟ ಮೊದಲ ಕ್ಯಾನೊಪಿ ವಾಕ್ ಪ್ರವಾಸಿ ತಾಣವಾಗಿದೆ. 

ದಾಂಡೇಲಿ ವೈಲ್ಡ್ ಲೈಫ್ ಮತ್ತು ಕ್ಯಾಸರಲ್ ರಾಕ್ ವೈಲ್ಡ್ ಲೈಫ್ ವ್ಯಾಪ್ತಿಯಲ್ಲಿ ಜಂಗಲ್ ಲಾಡ್ಸ್ಜ್ ಅಂಡ್ ರೆಸಾರ್ಟನವರು ನಡೆಸುತ್ತಿರುವ ಅರಣ್ಯಧಾಮದ ಸನಿಹ ಕುವೇಶಿ ಗ್ರಾಮವಿದೆ. ಈ ಗ್ರಾಮದ ಬಳಿಯ ದಟ್ಟ ಅರಣ್ಯ ಹಾಗೂ ಎತ್ತರದ ಮರಗಳ ಮೇಲೆ 30 ಅಡಿ ಎತ್ತರದ ಮರಗಳಿರುವ ಪ್ರದೇಶದಲ್ಲಿ ಕ್ಯಾನೊಪಿ ವಾಕ್‍ ನಿರ್ಮಾಣ ಮಾಡಲಾಗಿದೆ. ಒಂದೇ ಎತ್ತರದ ಮರಗಳನ್ನು ಆಯ್ಕೆ ಮಾಡಿಕೊಂಡು ಅವುಗಳ ಮೇಲೆಯೇ 240 ಮೀಟರ್ ಉದ್ದದ ಕ್ಯಾನೊಪಿ ರೂಪಿಸಲಾಗಿದೆ. 

4 ವರ್ಷಗಳ ಹಿಂದೆಯೇ ಈ ಕ್ಯಾನೊಪಿ ವಾಕ್’ನ್ನು ಉದ್ಘಾಟನೆ ಮಾಡಲಾಗಿತ್ತು. ಆದರೆ, ಪರಿಸರವಾದಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅದಲ್ಲದೆ, ಕ್ಯಾನೊಪಿ ವಾಕ್‌’ಗೆ ತೆರಳಲು ರಸ್ತೆಗಳು ಇಲ್ಲದಿರುವುದೂ ಇದಕ್ಕೆ ಕಾರಣವಾಗಿತ್ತು. ಇಲ್ಲಿನ ಗ್ರಾಮಸ್ಥರು ರಸ್ತೆ ನಿರ್ಮಾಣ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು.

ಹಲವು ವರ್ಷಗಳ ಹಿಂದೆಯೇ ಕ್ಯಾನೊಪಿ ವಾಕ್ ನಿರ್ಮಾಣ ಮಾಡಿದ್ದರೂ, ಪ್ರವಾಸಿಗರ ಭೇಟಿಗೆ ಅವಕಾಶ ನೀಡಲಾಗಿರಲಿಲ್ಲ. ಈ ಬಾರಿ ಪ್ರವಾಸಿಗರ ಭೇಟಿಗೆ ಅವಕಾಶ ನೀಡಲಾಗಿದೆ. ಸ್ಥಳದಲ್ಲಿ ವಾಹನ ವ್ಯವಸ್ತೆಗಳನ್ನು ಮಾಡಲಾಗಿದ್ದು, ಈ ವಾಹನಗಳು ಕುವೇಶಿ ಅರಣ್ಯ ಪ್ರದೇಶದವರೆಗೆ ಪ್ರವಾಸಿಗರನ್ನು ಕರೆದೊಯ್ಯುತ್ತವೆ. ನಂತರ ಅಲ್ಲಿಂದ ಕಾಲ್ನಡಿಗೆ ಆರಂಭವಾಗುತ್ತದೆ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. 

ಕ್ಯಾನೊಪಿ ವಾಕ್ ಜೊತೆಗೆ ಗಣೇಶಗುಡಿಯಲ್ಲಿ ವಾಟರ್ ಸ್ಪೋರ್ಟ್ಸ್ ಕೂಡ ಪುನರಾರಂಭಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *