ಕಾರವಾರ ಶಾಸಕಿ ರೂಪಾಲಿಗೆ ಪಂಗನಾಮ ಹಾಕಿದವನ ಬಂಧನ

ಶಾಸಕ ಮಹೇಶ್‌ ಪಿಎ ಹೆಸರಲ್ಲಿ ಎಂಎಲ್ ಎ ರೂಪಾಲಿ ನಾಯ್ಕಗೆ ಪಂಗನಾಮ: ಆರೋಪಿ ಬಂಧನ

ಶಾಸಕ ಎನ್.ಮಹೇಶ್ ಅವರ ಆಪ್ತ ಸಹಾಯಕ (ಪಿ.ಎ) ಎಂದು ಸುಳ್ಳು ಹೇಳಿ ಕಾರವಾರ-ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ಅವರ ಬಳಿ 50 ಸಾವಿರ ರು. ಹಣ ಪಡೆದ ವ್ಯಕ್ತಿಯೊಬ್ಬರನ್ನು ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. 

Roopali naik

ಉತ್ತರಕನ್ನಡ: ನಾನು ಶಾಸಕ ಎನ್.ಮಹೇಶ್ ಅವರ ಆಪ್ತ ಸಹಾಯಕ (ಪಿ.ಎ) ಎಂದು ಸುಳ್ಳು ಹೇಳಿ ಕಾರವಾರ-ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ಅವರ ಬಳಿ 50 ಸಾವಿರ ರು. ಹಣ ಪಡೆದ ವ್ಯಕ್ತಿಯೊಬ್ಬನನ್ನು ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. 

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ದೊಡ್ಡಮಳಲವಾಡಿ ಗ್ರಾಮದ ಸಚಿನ್ ಗೌಡ (23) ಪೊಲೀಸರ ವಶದಲ್ಲಿದ್ದಾನೆ.  ಶಾಸಕ ಎನ್‌.ಮಹೇಶ್‌ ಅವರ ಆಪ್ತ ಸಹಾಯಕ ಮಹದೇವಸ್ವಾಮಿ ಅವರು ನೀಡಿರುವ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.

https://imasdk.googleapis.com/js/core/bridge3.472.0_en.html#goog_1878368372

ಈತ ಮೊದಲು ಶಾಸಕಿ ರೂಪಾಲಿ ನಾಯಕ್‌ ಅವರಿಗೆ ಕರೆ ಮಾಡಿ, ನಾನು ಶಾಸಕ ಎನ್‌.ಮಹೇಶ್‌ ಎಂದು ಹೇಳಿ ಹಣ ಕೇಳಿದ್ದಾನೆ. ನಂತರ ಮಹೇಶ್‌ ಅವರ ಪಿಎ ಎಂಬುದಾಗಿ ಹೇಳಿ, ಅರ್ಜೆಂಟಾಗಿ 50 ಸಾವಿರ ರೂ. ಹಣ ಕೊಡುವಂತೆ ಹೇಳಿದ್ದಾನೆ. ಸ್ವಲ್ಪ ಸಮಯ ಬಿಟ್ಟು ತನ್ನ ಸ್ನೇಹಿತ ಮಹೇಶ್‌ ಎಂಬಾತನ ಬ್ಯಾಂಕ್‌ ಖಾತೆ ನಂಬರ್‌ ಮೆಸೇಜ್‌ ಮಾಡಿದ್ದಾನೆ.

ರೂಪಾಲಿ ನಾಯಕ್‌ ಆ ಅಕೌಂಟ್‌ಗೆ 50 ಸಾವಿರ ರೂ. ಕಳುಹಿಸಿದ್ದಾರೆ. ಬಳಿಕ ಸ್ನೇಹಿತ ಮಹೇಶ್‌ಗೆ ಒಂದು ಸಾವಿರ ರೂ. ಕೊಟ್ಟು 49 ಸಾವಿರ ತೆಗೆದುಕೊಂಡಿದ್ದಾನೆ. 

ಇದಾದ ಕೆಲ ದಿನಗಳ ನಂತರ ಬೆಂಗಳೂರಿನಲ್ಲಿ ಶಾಸಕ ಎನ್.ಮಹೇಶ್ ಮತ್ತು ಶಾಸಕಿ ರೂಪಾಲಿ ನಾಯ್ಕ ಮುಖಾಮುಖಿ ಭೇಟಿಯಾಗಿದ್ದ ವೇಳೆ ಹಣದ ವಿಚಾರ ತಿಳಿದು ವಂಚನ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಸಚಿನ್‌ಗೌಡನ ಫೋನ್ ನಂಬರ್​ ಕೊಟ್ಟು ಕೊಳ್ಳೇಗಾಲ ಠಾಣೆಗೆ ಶಾಸಕ ಮಹೇಶ್ ಪಿಎ ಮಹಾದೇವಸ್ವಾಮಿ ದೂರು ಕೊಟ್ಟಿದ್ದಾರೆ‌. ದೂರು ಪಡೆದಿದ್ದ ಪೊಲೀಸರು, ಇಂದು ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *