ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ

ಜಮ್ಮು-ಕಾಶ್ಮೀರದಲ್ಲಿ ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ

ಕಳೆದ ವಾರ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದ್ದ ನಕಲಿ ಉಗ್ರರ ದಾಳಿ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಇಬ್ಬರು ವೈಯಕ್ತಿಕ ಭದ್ರತಾ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

casual_Images1

ಶ್ರೀನಗರ: ಕಳೆದ ವಾರ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದ್ದ ನಕಲಿ ಉಗ್ರರ ದಾಳಿ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಇಬ್ಬರು ವೈಯಕ್ತಿಕ ಭದ್ರತಾ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತ ಇಷ್ಫಾಕ್ ಮಿರ್ ಮತ್ತು ಬಶರತ್ ಅಹ್ಮದ್ ಮತ್ತು ಇಬ್ಬರು ಸೆಕ್ಯೂರಿಟಿ ಗಾರ್ಡ್ ಗಳನ್ನು ಸೋಮವಾರ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿದ ಭದ್ರತೆ ಪಡೆಯಲು ಬಿಜೆಪಿ ಕಾರ್ಯಕರ್ತರು ಕಾವಲುಗಾರರ ಅನುಸಾರವಾಗಿ ಕುಪ್ವಾರಾದ ಗುಲ್ಗಾಂನಲ್ಲಿ ಶುಕ್ರವಾರ ರಾತ್ರಿ ನಕಲಿ ದಾಳಿಯನ್ನುಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿಯನ್ನು ಹೆಚ್ಚಿಸಲು ಕುಪ್ವಾರ ಜಿಲ್ಲೆಯ ಗುಲ್ಗಾಂನಲ್ಲಿ ಶುಕ್ರವಾರ ರಾತ್ರಿ ಬಿಜೆಪಿ ಕಾರ್ಯಕರ್ತರು, ತಮ್ಮ ಸೆಕ್ಯೂರಿಟಿ ಗಾರ್ಡ್ ಗಳೊಂದಿಗೆ ನಕಲಿ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಮೊಹಮ್ಮದ್ ಶಫಿ ಮಿರ್ ಅವರ ಪುತ್ರ ಮಿರ್, ತೀವ್ರವಾಗಿ ಗಾಯಗೊಂಡಿದ್ದರು. ಪ್ರಾಥಮಿಕ ವಿಚಾರಣೆ ನಂತರ, ಸೆಕ್ಯೂರಿಟಿ ಗಾರ್ಡ್ ಹಾರಿಸಿದ ಆಕಸ್ಮಿಕ ಗುಂಡಿನಿಂದ ಮಿರ್ ಗಾಯಗೊಂಡಿರುವುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 ಆದಾಗ್ಯೂ, ಅನುಮಾನಗಳು ಎದ್ದಾ ಗ ಹೆಚ್ಚಿನ ಭದ್ರತೆ ಪಡೆಯಲು ನಕಲಿ ದಾಳಿ ನಡೆಸಿದ್ದಾಗಿ ಆರೋಪಿಗಳು ತಪೊಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಎಲ್ಲರನ್ನು ಕುಪ್ವಾರದ ಸ್ಥಳೀಯ ನ್ಯಾಯಾಲಯವೊಂದರ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಅವರಿಗೆ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *