ಸಿಎಂ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ, ನಾಯತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿಲ್ಲ: ಜೆಪಿ ನಡ್ಡಾ ಅಚ್ಚರಿಯ ಹೇಳಿಕೆ

ಎಲ್ಲಾ ಊಹಾಪೋಹಗಳ ನಡುವೆಯೇ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷರು ಜು.25 ರಂದು ಸಂಜೆ ನೀಡಿರುವ ಹೇಳಿಕೆಗಳು ಯಾವುದೇ ಸ್ಪಷ್ಟತೆಯನ್ನೂ ನೀಡದೇ ಗೊಂದಲವನ್ನು ಇನ್ನೂ ಹೆಚ್ಚುಮಾಡಿದೆ. 

JP Nadda

ಬೆಳಗಾವಿ/ ಗೋವಾ: ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ಚರ್ಚೆಗಳಿಗೆ ಜು.25 ರಂದು ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆಯನ್ನು ನಿರೀಕ್ಷಿಸಲಾಗುತ್ತಿತ್ತು. ಆದರೆ ಎಲ್ಲಾ ಊಹಾಪೋಹಗಳ ನಡುವೆಯೇ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷರು ಜು.25 ರಂದು ಸಂಜೆ ನೀಡಿರುವ ಹೇಳಿಕೆಗಳು ಯಾವುದೇ ಸ್ಪಷ್ಟತೆಯನ್ನೂ ನೀಡದೇ ಗೊಂದಲವನ್ನು ಇನ್ನೂ ಹೆಚ್ಚುಮಾಡಿದೆ. 

ಬೆಳಗಾವಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಾಗ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ “ಸಿಎಂ ಬದಲಾವಣೆ ಕುರಿತು ಹೈಕಮಾಂಡ್ ನಿಂದ ಈವರೆಗೂ ಯಾವುದೇ ಸಂದೇಶ ಬಂದಿಲ್ಲ. ಹೈಕಮಾಂಡ್ ಆದೇಶಕ್ಕಾಗಿ ಕಾಯುತ್ತಿದ್ದೇನೆ. ನಾಳೆ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ” ಎಂದು ಹೇಳಿರಿವುದು ಕುತೂಹಲ ಮೂಡಿಸಿದೆ. 

ಇತ್ತ ಗೋವಾಗೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಕರ್ನಾಟಕ ಮುಖ್ಯಮಂತ್ರಿಗಳ ಬದಲಾವಣೆ ವಿಷಯದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ರಾಜಕೀಯ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿಕೆಯನ್ನು ಅಚ್ಚರಿಯ ಹೇಳಿಕೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಎಲ್ಲವನ್ನೂ ನಾವು ಗಮನಿಸುತ್ತಿದ್ದೇವೆ. ನಾಯತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.

ಇತ್ತ ಹೊಸ ಸಿಎಂ ರೇಸ್ ನಲ್ಲಿ ಮುಂಚೂಣಿಯಲ್ಲಿರುವ  ಪ್ರಹ್ಲಾದ್ ಜೋಷಿ ಅವರ ಬೆಂಗಳೂರು ಭೇಟಿಯನ್ನೂ ಸಿಎಂ ಬದಲಾವಣೆ ಸಾಧ್ಯತೆಗೆ ಪುಷ್ಟಿ ನೀಡುವಂತಿದೆ. ಇನ್ನು ಸಚಿವ  ಮುರುಗೇಶ್ ನಿರಾಣಿಯವರು ದೆಹಲಿಗೆ ತೆರಳಿದ್ದಾರೆ. 

ಇವೆಲ್ಲದರ ನಡುವೆ ಜು.25 ರಂದು ರಾತ್ರಿ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ, ಸಂಘಟನಾ ಕಾರ್ಯದರ್ಶಿ ಬಿಎ ಲ್ ಸಂತೋಷ್, ಜೆಪಿ ನಡ್ಡಾ ಅವರು ಸಭೆ ನಡೆಸಲಿದ್ದು, ಅಂತಿಮ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *