

ಬಿಜೆಪಿ ಸಾಧನಾ ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ ಭಾವುಕ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ
ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಘೋಷಣೆ ಮಾಡಿದ್ದಾರೆ.
ಕಾಗೇರಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ಸಿದ್ಧಾಪುರ ತಾಲೂಕಿನಲ್ಲಿ ಅಪಾರ ಬೆಳೆ ಹಾನಿ, ಸಾವು-ನೋವುಗಳು ಸಂಭವಿಸಿದ್ದು ಈ ಬಗ್ಗೆ ಕಾಳಜಿ ವಹಿಸದ, ಸಂತೃಸ್ತರಿಗೆ ಪರಿಹಾರ ನೀಡಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಅರಾಜಕ ವ್ಯವಸ್ಥೆಯನ್ನು ಪೋಶಿಸುತ್ತಿರುವ ಸ್ಥಳಿಯ ಶಾಸಕ, ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಕ್ಷಣ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಇಂದು ಸಿದ್ಧಾಪುರದಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷ ವಿ.ಎನ್. ನಾಯ್ಕ ಮತ್ತು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಜಿ.ನಾಗರಾಜ್ ಕರೋನಾ ಅವಧಿ, ಮಳೆ-ಪ್ರವಾಹದ ಸಂದರ್ಭಗಳಲ್ಲಿ ಜನರಿಗೆ ಸ್ಫಂದಿಸದ ಶಾಸಕ, ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಸಿದ್ಧಾಪುರ ತಾಲೂಕಿನಾದ್ಯಂತ ಲೋಕೋಪಯೋಗಿ ಇಲಾಖೆ ಚರಂಡಿಗಳ ನಿರ್ವಹಣೆ ಮಾಡದೆ ರಸ್ತೆಗಳೆಲ್ಲಾ ಹೊಳೆಗಳಂತಾಗಿವೆ. ಜವಾಬ್ಧಾರಿ ವಹಿಸದ ಸ್ಫೀಕರ್ ನಿರ್ಲಕ್ಷದಿಂದಾಗಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ. ಮಳೆ, ಪ್ರವಾಹದ ಸಂದರ್ಭ ಕರೋನಾ ತೊಂದರೆ ಯಾವುದೇ ತೊಂದರೆ ಸಮಯದಲ್ಲಿ ಸಿಗದ ಸ್ಫೀಕರ್ ಪರಿಹಾರ ನೀಡಿಕೆಯಲ್ಲಿ ಕೂಡಾ ಪಕ್ಷಪಾತ ಅನುಸರಿಸುತಿದ್ದಾರೆ.- ವಸಂತ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು
ರೈತರ ಕೃಷಿ ಭೂಮಿಗೆ ಹಾನಿಯಾಗಿ ಜನರ ಬವಣೆ ಹೆಚ್ಚಿದೆ. ಅಧಿಕಾರಿಗಳು ಮಾನವೀಯತೆಯಿಂದ ಸಮೀಕ್ಷೆ ನಡೆಸಿ ರೈತರಿಗೆ ಸಹಕರಿಸಬೇಕು.- ವಿ.ಎನ್. ನಾಯ್ಕ
ಕೋವಿಡ್ ಲಸಿಕೆ ನೀಡಿಕೆ, ನಿರ್ವಹಣೆ ಪಾರದರ್ಶಕವಾಗಿಲ್ಲ, ಲಸಿಕೆ ನೀಡಿಕೆ ಮಾಹಿತಿ ನೀಡಬೇಕು, ಜನಸಾಮಾನ್ಯರಿಗೆ ತೊಂದರೆ ಆಗದಂತೆ ನಿಯಮಾನುಸಾರ ಎಲ್ಲರಿಗೂ ಲಸಿಕೆ ದೊರೆಯುವ ಬಗ್ಗೆ ಖಾತರಿಪಡಿಸಬೇಕು.- ಕೆ.ಜಿ.ನಾಗರಾಜ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ.
ಅಧಿಕಾರಿಗಳನ್ನು ನಿಯಂತ್ರಿಸಲಾಗದ ವ್ಯವಸ್ಥೆಯಿಂದ ತಾಲೂಕಿನ ಜನರಿಗೆ ಅನ್ಯಾಯವಾಗುತ್ತಿದೆ, ಅಧಿಕಾರಿಗಳ ದರ್ಬಾರ್ ನಡೆಯುವುದಾದರೆ ಜನಪ್ರತಿನಿಧಿಗಳ್ಯಾಕೆ ಬೇಕು.- ಶಿವಾನಂದ ಎಚ್.ಕೆ.
ಗಾಳಿ-ಮಳೆಯಿಂದ ಅಡಿಕೆ ಬೆಳೆಗೆ ಹಾನಿಯಾಗಿದೆ. ಸರ್ಕಾರ ರೈತರ ಬೆಳೆಹಾನಿಗೆ ಸೂಕ್ತ-ಶೀಘ್ರ ಪರಿಹಾರ ನೀಡಬೇಕು.- ಸಿ.ಆರ್. ನಾಯ್ಕ

ಬೆಂಗಳೂರು; ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡು ವರ್ಷಗಳಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್’ನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮೊದಲಿಗೆ ಯಡಿಯೂರಪ್ಪ ಅವರು ಬಿಜೆಪಿ ಸಾಧನೆ ಕುರಿತು ಮಾತನಾಡಿದರು. ಶಿಕಾರಿಪುರಿಂದ ಬಿಜೆಪಿಯೊಂದಿಗೆ ನಾನು ಬಂದಿದ್ದೇನೆ. ಶಿಕಾರಿಪುರದಲ್ಲಿ ಸಂಘದ ಪ್ರಚಾರಕನಾಗಿ ಕಾರ್ಯ ನಿರ್ವಹಿಸಿ, ಚುನಾವಣೆಯಲ್ಲಿ ಗೆದ್ದು, ಘಟಕದ ಅಧ್ಯಕ್ಷನಾಗಿ, ವಿಧಾನ ಸಭಾ ವಿಪಕ್ಷ ನಾಯಕನಾಗಿ, ಮುಖ್ಯಮಂತ್ರಿಯಾಗಿ ಪಕ್ಷದ ಬೇರೆ ಬೇರೆ ಹುದ್ದೆಗಳಲ್ಲಿ ಕೆಲಸ ಮಾಡಿ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ ಎಂಬ ತೃಪ್ತಿ ನನಗಿದೆ ಎಂದು ಹೇಳಿದರು.
ಶಿಕಾರಿಪುರದ ಜನ ನನ್ನನ್ನು ಏಳು ಬಾರಿ ಆಯ್ಕೆ ಮಾಡಿದ್ದಾರೆ. ರಾಷ್ಟ್ರೀಯ ನಾಯಕರು ನನ್ನನ್ನು ಬೆಂಬಲಿಸಿದ್ದಾರೆ. ಬಿಜೆಪಿ ನೀಡಿದ ಸ್ಥಾನಕ್ಕೆ, ಅವಕಾಶಕ್ಕೆ ನಾನು ಎಂದಿಗೂ ಋಣಿಯಾಗಿರುತ್ತೇನೆ ಎಂದು ತಿಳಿಸಿದರು.
ಬಳಿಕ ಭಾಷಣದ ವೇಳೆ ಭಾವುಕರಾದ ಯಡಿಯೂರಪ್ಪ ಅವರು, ತಾವು ಯಾರೂ ಅನ್ಯತಾ ಭಾವಿಸಬಾರದು, ನಾನು ನಿಮ್ಮೆಲ್ಲರ ಅಪ್ಪಣೆ ಪಡೆದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದೇನೆ. ಊಟದ ಬಳಿಕ ರಾಜಭಾವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುತ್ತೇನೆಂದು ಹೇಳಿದರು.
75 ವರ್ಷ ದಾಟಿದ ಬಳಿವೂ ನನಗೆ ಎರಡು ವರ್ಷ ಸಿಎಂ ಆಗಿ ಮುಂದುವರೆಯಲು ಅವಕಾಶ ನೀಡಿದ ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷರಾದ ಜೆ.ಪಿ ನಡ್ಡಾ ಅವರಿಗೆ ಶಬ್ದಗಳಲ್ಲಿ ಧನ್ಯವಾದ ಹೇಳಲು ಆಗುವುದಿಲ್ಲ. ರಾಜ್ಯದಲ್ಲಿ ಬಿಜೆಪಿಗೆ ಅಸ್ತಿತ್ವ ಇಲ್ಲದ ಸಮಯದಲ್ಲಿ ನಾನು ಏಕಾಂಗಿ ಹೋರಾಟ ಮಾಡಿ ಪಕ್ಷ ಸಂಘಟನೆ ಮಾಡಿದೆ.
ನಾನು ಮತ್ತು ಬೆಳ್ತಂಗಡಿಯ ವಸಂತ ಬಂಗೇರ ಅವರು ವಿಧಾನಸಭೆಗೆ ಆಯ್ಕೆಯಾದಾಗ, ವಸಂತ ಬಂಗೇರ ಅವರು ಹಠಾತ್ ಪಕ್ಷಕ್ಕೆ ಕೈಕೊಟ್ಟು ಹೊರ ಹೋದರು. ಆ ವೇಳೆ ನಾನು ಎದೆಗುಂದಲಿಲ್ಲ. ಹಿಂದಿರುಗಿ ನೋಡದೆ, ಒಬ್ಬನೇ ಎಂಬುವುದರ ಬಗ್ಗೆ ತಲೆ ಕೆಡಿಸಿಕೊಳ್ಳದೇ ಏಕಾಂಗಿ ಹೋರಾಟ ಮಾಡಿದೆ. ಆ ಮೂಲಕ ಇಂದು ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಸಫಲನಾದೆ.
ನನ್ನ ಪಕ್ಷದ ಸೇವೆ ಗಮನಿಸಿದ ಅಟಲ್ ಬಿಹಾರಿ ವಾಜಪೇಯಿ ಅವರು ಕೇಂದ್ರದಲ್ಲಿ ಸಚಿವನಾಗು ಅಂದಿದ್ದರು. ಆದರೆ, ನಾನು ರಾಜ್ಯದಲ್ಲಿ ಪಕ್ಷ ಕಟ್ಟಬೇಕು ಎಂದು ಅದನ್ನು ನಿರಾಕರಿಸಿದೆ ಎಂದು ಹೇಳಿ ಭಾವುಕರಾದರು. (kpc)




