

ಹುಬ್ಬಳ್ಳಿ: ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಪ್ರಯಾಣಿಸುತ್ತಿದ್ದ ಕಾರು ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿ, ಸಣ್ಣಪುಟ್ಟ ಗಾಯಗಳಿಂದ ಪಾರು
ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ಬಸವರಾಜ ಬೊಮ್ಮಾಯಿಯವರು ಗುರುವಾರ ಉತ್ತರ ಕನ್ನಡ ಪ್ರವಾಸ ಕೈಗೊಂಡಿದ್ದಾರೆ, ಅಲ್ಲಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯಾಗಿರುವ ಮನೆ, ಆಸ್ತಿಪಾಸ್ತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ.

ಹುಬ್ಬಳ್ಳಿ: ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ಬಸವರಾಜ ಬೊಮ್ಮಾಯಿಯವರು ಗುರುವಾರ ಉತ್ತರ ಕನ್ನಡ ಪ್ರವಾಸ ಕೈಗೊಂಡಿದ್ದಾರೆ, ಅಲ್ಲಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯಾಗಿರುವ ಮನೆ, ಆಸ್ತಿಪಾಸ್ತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ.
ಈ ಪ್ರವಾಸ ವೇಳೆ ಉತ್ತರ ಕನ್ನಡ ಜಿಲ್ಲೆಯ ಶಾಸಕ, ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕೂಡ ಜೊತೆಯಾಗಿದ್ದರು. ಆದರೆ ಅವರು ಚಲಿಸುತ್ತಿದ್ದ ಕಾರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಬೆಂಗಾವಲು ವಾಹನಕ್ಕೆ ಹುಬ್ಬಳ್ಳಿಯಲ್ಲಿ ಡಿಕ್ಕಿ ಹೊಡೆದು ಮಾಜಿ ಸಚಿವ ಹೆಬ್ಬಾರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.(kpc)
