ಪ್ರವಾಹ ಪೀಡಿತ ಮಲ್ಲಾಪುರಕ್ಕೆ ಭೇಟಿ ನೀಡದ ಸಿಎಂ ಬೊಮ್ಮಾಯಿ: ಗ್ರಾಮಸ್ಥರ ಬೇಸರ

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ರೂ.200 ಪರಿಹಾರ ಘೋಷಿಸಿದ ಬಸವರಾಜ ಬೊಮ್ಮಾಯಿಯವರು, ಕಾರವಾರದ ಮಲ್ಲಾಪುರಕ್ಕೆ ಭೇಟಿ ನೀಡದ್ದಕ್ಕೆ ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. 

As many as 200 houses have been completely destroyed in Mallapura panchayat

ಕಾರವಾರ: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ರೂ.200 ಪರಿಹಾರ ಘೋಷಿಸಿದ ಬಸವರಾಜ ಬೊಮ್ಮಾಯಿಯವರು, ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸುತ್ತಿರುವ ಕಾರವಾರದ ಮಲ್ಲಾಪುರಕ್ಕೆ ಭೇಟಿ ನೀಡದ್ದಕ್ಕೆ ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. 

ಕಾರವಾರದ ಮಲ್ಲಾಪುರ ಗ್ರಾಮ ಪಂಚಾಯಿತಿ ಅಡಿಯಲ್ಲಿ ಒಟ್ಟು 8 ಗ್ರಾಮಗಳ ಬರಲಿದ್ದು, ಈ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಪ್ರವಾಹ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಒಟ್ಟು 200 ಮನೆಗಳು ನಾಶವಾಗಿದ್ದು, 2000ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. 

ತಮ್ಮ ಗ್ರಾಮಗಳಿಗೆ ಮುಖ್ಯಮಂತ್ರಿಗಳು ಭೇಟಿ ನೀಡದಿರುವುದಕ್ಕೆ ಇದೀಗ ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸುತ್ತಿದ್ದು, ಸ್ಥಳೀಯ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. 

ಕಳೆದ ಗುರುವಾರ ಮುಖ್ಯಮಂತ್ರಿ ಬೊಮ್ಮಾಯಿಯವರು ಪ್ರವಾಹ ಪೀಡಿತ ಅಂಕೋಲಾ, ಯೆಲ್ಲಾಪುರ ಹಾಗೂ ಅರೆಬೈಲ್ ಘಾಟ್ ರಸ್ತೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು, ಕಾರವಾರಕ್ಕೂ ಮುಖ್ಯಮಂತ್ರಿಗಳು ಭೇಟಿ ನೀಡಬೇಕಿತ್ತು. ಆದರೆ, ಅಂತಿಮ ಕ್ಷಣದಲ್ಲಿ ಪ್ರವಾಸ ರದ್ದುಗೊಳಿಸಿ ದೆಹಲಿಗೆ ಭೇಟಿ ನೀಡಿದ್ದರು. 

ಈ ನಡುವೆ ಮಲ್ಲಾಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಉದಯ್ ಬಾಂದೇ ಕರ್ ರು ಮಾತನಾಡಿ, 2019ರ ಪ್ರವಾಹದ ಬಳಿಕ ಅಧಿಕಾರದಲ್ಲಿರುವ ಯಾವುದೇ ನಾಯಕರೂ ಗ್ರಾಮಕ್ಕೆ ಭೇಟಿ ನೀಡಿಲ್ಲ. ನೂತನ ಮುಖ್ಯಮಂತ್ರಿಗಳು ಗುರುವಾರ ಗ್ರಾಮಕ್ಕೆ ಭೇಟಿ ನೀಡುವ ವಿಶ್ವಾಸವಿತ್ತು. ಅದರೆ, ನಿರಾಸೆಯುಂಟಾಗಿದೆ. ಶೀಘ್ರದಲ್ಲೇ ಮುಖ್ಯಮಂತ್ರಿಗಳು ನಮ್ಮ ಸಮಸ್ಯೆಗಳಿಗೆ ಸ್ಪಂದನೆ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. 

ಇತ್ತೀಚೆಗೆ ಸುರಿದ ಭಾರೀ ಮಳೆ ಹಾಗೂ ಕದ್ರಾ ಅಣೆಕಟ್ಟಿನಿಂದ 2.7 ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಗ್ರಾಮದಲ್ಲಿ 200ಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ನಾಶಗೊಂಡಿವೆ. ಒಳಹರಿವು ಹೆಚ್ಚಾಗಿದ್ದರಿಂದ ಅಣೆಕಟ್ಟು ಕ್ರೆಸ್ಟ್ ಗೇಟ್‌ಗಳನ್ನು ತೆರೆಯಬೇಕಾಗಿ ಬಂದಿತ್ತು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ತನುಜಾ ರಂಗಸ್ವಾಮಿಯವರು ತಿಳಿಸಿದ್ದಾರೆ.

ಉಪ ಆಯುಕ್ತರು ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ನಡೆಸಬೇಕೆಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ಪ್ರತೀವರ್ಷ ಇಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುತ್ತಲೇ ಇರುತ್ತದೆ. ಸರ್ಕಾರ ಇಡೀ ಗ್ರಾಮ ಪಂಚಾಯತಿಯನ್ನೇ ಸ್ಥಳಾಂತರ ಮಾಡಲಿ ಎಂದು ತನುಜಾ ಅವರು ಹೇಳಿದ್ದಾರೆ.

ಹೈಡಲ್ ಪವರ್ ಉತ್ಪಾದಿಸುವ ಸಲುವಾಗಿ ಕಾಳಿ ನದಿಗೆ ಅಡ್ಡಲಾಗಿ ಅಣೆಕಟ್ಟನ್ನು ನಿರ್ಮಿಸಲಾಗಿತ್ತು. ಆದರೆ ಹತ್ತಿರದಲ್ಲಿ ಕೈಗಾ ಅಣುಸ್ಥಾವರ ಕಾರ್ಯನಿರ್ವಹಿಸುತ್ತಿರುವುದರಿಂದ ಕದ್ರಾ ಅಣೆಕಟ್ಟೆಯಲ್ಲಿರುವ ಜಲವಿದ್ಯುತ್ ಘಟಕವನ್ನು ಮುಚ್ಚಲಾಗಿದೆ ಎಂದು ತಿಳಿದುಬಂದಿದೆ.

ಕಾರವಾರದ ಮಾಜಿ ಶಾಸಕ ಸತೀಶ್ ಸೈಲ್ ಮಾತನಾಡಿ,  ಕೆಪಿಸಿಎಲ್ ಅಧಿಕಾರಿಗಳು ಯಾವುದೇ ಮುನ್ಸೂಚನೆಗಳನ್ನು ನೀಡದೆ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.

ಮಲ್ಲಾಪುರ ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಅಂಕೋಲಾದಲ್ಲಿಯೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ನಾನು ಯತ್ನಿಸಿದ್ದೆ, ಆದರೆ, ಹೆಚ್ಚಿನ ಭದ್ರತೆಯಿದ್ದರಿಂದ ಹತ್ತಿರ ಕೂಡ ಹೋಗಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *