ಹನಿಮೂನ್ ಮೂಡ್ ನಿಂದ ಹೊರಬಂದು ಜನರಿಗೆ ಸ್ಪಂದಿಸಲು ಸರ್ಕಾರಕ್ಕೆ ಪಾಟೀಲ್ ಆಗ್ರಹ

ಮಳೆಹಾನಿ, ಪ್ರವಾಹ ಪೀಡಿತ ಜನರಿಗೆ ಸರ್ಕಾರ ಕೊಡಬೇಕಾದ ಕನಿಷ್ಟ ಹತ್ತು ಸಾವಿರ ರೂಪಾಯಿಗಳನ್ನೂ ನೀಡಿಲ್ಲ. ಪರಿಹಾರದ ವಿಚಾರದಲ್ಲಿ 2019 ರ ವರ್ತಮಾನ ಮತ್ತೆ ಮರುಕಳಿಸುತ್ತಿ ದೆ. ಕೋವಿಡ್ ಎರಡನೇ ಅವಧಿಯಲ್ಲಿ ಮುಂಜಾಗೃತೆ ವಹಿಸದೆ ಸರ್ಕಾರ ನಿರ್ಲಕ್ಷ ಮಾಡಿದ್ದಕ್ಕೆ ಪರಿಣಾಮ ಎದುರಿಸಿದ್ದೇವೆ ಈಗ ಮೂರನೇ ಅಲೆಯ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ಸರ್ಕಾರ ಸಾರ್ವಜನಿಕರ  ವಿರೋಧಿ ಎಂದು ಹಣೆಪಟ್ಟಿಕಟ್ಟಿಕೊಳ್ಳಬೇಕಾಗುತ್ತದೆ ಎಂದು ರಾಜ್ಯ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್. ಪಾಟೀಲ್ ಎಚ್ಚರಿಸಿದರು.

ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಕಾಳಜಿ ಕೇಂದ್ರಗಳ ವಾಸ್ತವ ಅವಲೋಕನ ಮಾಡಿದ ನಂತರ samajamukhi.net ನೊಂದಿಗೆ ಮಾತನಾಡಿದ ಅವರು ಕಳೆದ ಎಪ್ಪತ್ತು ವರ್ಷಗಳಲ್ಲಿ ಬೀಳದ ಮಹಾಮಳೆಯಿಂದ ಅಪಾರ ಹಾನಿಯಾಗಿದೆ. ಸರ್ಕಾರ ಘೋಷಣೆ ಮಾಡಿದಂತೆ ನಡೆದುಕೊಂಡಿಲ್ಲ ಹತ್ತು ಸಾವಿರ ತುರ್ತು ಪರಿಹಾರ ನೀಡಬೇಕಾದ ಹಣ ನೀಡಿಲ್ಲ. ಮಳೆ-ಪ್ರವಾಹದ ಹಾನಿ ಸಮೀಕ್ಷೆ ನಡೆಸುವಲ್ಲಿ ವಿಫಲವಾಗಿದೆ. ಸರ್ಕಾರದ ಕಾರ್ಯವೈಖರಿ ಟೀಕಿಸಲು ಇದು ಸಮಯವಲ್ಲ ಆದರೆ ಹನಿಮೂನ್ ಮೂಡ್ ನಲ್ಲಿರುವ ಸರ್ಕಾರದಿಂದ ಪ್ರವಾಹ ಪೀಡಿತರು, ಕೋವಿಡ್ ಬಾಧಿತರಿಗೆ ತೊಂದರೆ ಆಗಬಾರದು ಎಂದರು.


ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಲ್ಕು ಸಾವಿರ ಎಕರೆ ಬೆಳೆ ನಾಶವಾಗಿದೆ. ಅರಣ್ಯ ಪ್ರದೇಶದಲ್ಲಿ ಮನೆ ಕಟ್ಟಿಕೊಂಡವರ ಮನೆಗಳೂ ಕುಸಿದು ಬಿದ್ದಿವೆ. ಸಂತೃಸ್ತರಿಗೆ ಶೀಘ್ರ ನಿವೇಶನ ನೀಡಿ ಶಾಶ್ವತ ಮನೆ ನಿರ್ಮಿಸಿಕೊಡಬೇಕು. ಕೋವಿಡ್ ಎರಡನೆ ಅಲೆಯ ನಿರ್ಲಕ್ಷದಿಂದ ಪಾಠ ಕಲಿತಿದ್ದೇವೆ ಇದು ಮೂರನೇ ಅಲೆ ಮುಂಜಾಗ್ರತೆಗೆ ಸೂಚನೆ, ಪ್ರವಾಹದ ವಿಚಾರವಿರಲಿ ಕೋವಿಡ್ ವಿಷಯವಿರಲಿ ಸೂಕ್ತ ಕ್ರಮ ಜರುಗಿಸದಿದ್ದರೆ ನಾಗರಿಕ ಸರ್ಕಾರ ಕರ್ತವ್ಯ ಲೋಪ ಮಾಡಿದಂತಾಗುತ್ತದೆ ಎಂದು ಎಚ್ಚರಿಸಿದ  ಪಾಟೀಲ್ ಅಧಿಕಾರಿಗಳಿಗೂ ಮಾನವೀಯತೆ ಆಧಾರದಲ್ಲಿ ಸ್ಪಂದಿಸಲು ಸೂಚಿಸಿದರು.

ಭೀಕರ ಅಪಘಾತ: ಸಿದ್ದಾಪುರದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮುದುಕಣ್ಣನವರ ನಿಧನ, ಮೂವರಿಗೆ ಗಂಭೀರ ಗಾಯ 

ಕಾರು ಅಫಘಾತವಾಗಿ ಸಿದ್ದಾಪುರದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮುದುಕಣ್ಣನವರ ಮೃತಪಟ್ಟು ಇತರ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನಲ್ಲಿ ಸಂಭವಿಸಿದೆ.

Accident car

ಅಂಕೋಲ(ಉತ್ತರ ಕನ್ನಡ ಜಿಲ್ಲೆ):ಕಾರು ಅಫಘಾತವಾಗಿ ಸಿದ್ದಾಪುರದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮುದುಕಣ್ಣನವರ ಮೃತಪಟ್ಟು ಇತರ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನಲ್ಲಿ ಸಂಭವಿಸಿದೆ.

ನೆರೆ ಪರಿಸ್ಥಿತಿ ಹಾಗೂ ಕೋವಿಡ್ ಗೆ ಸಂಬಂಧಿಸಿದಂತೆ  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಸಭೆ ಕರೆಯಲಾಗಿತ್ತು, ಸಭೆಗೆ ಆಗಮಿಸುವ ಸಂದರ್ಭದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ಅಂಕೋಲ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *