

ಯುಪಿ ಆಸೆಂಬ್ಲಿ ಚುನಾವಣೆ ಪರಿಗಣಿಸಿ ನೂತನ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು- ಬಿಜೆಪಿ ಮುಖಂಡ
ನೂತನ ಮೂರು ಕೃಷಿ ಕಾನೂನುಗಳ ವಿರುದ್ಧದ ರೈತರ ಹೋರಾಟಕ್ಕೆ ಬಿಜೆಪಿ ಮುಖಂಡರೊಬ್ಬರು ಬೆಂಬಲ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಅವುಗಳನ್ನು ಹಿಂದಕ್ಕೆ ಪಡೆಯಬೇಕೆಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.


ಬಲ್ಲಿಯಾ: ನೂತನ ಮೂರು ಕೃಷಿ ಕಾನೂನುಗಳ ವಿರುದ್ಧದ ರೈತರ ಹೋರಾಟಕ್ಕೆ ಬಿಜೆಪಿ ಮುಖಂಡರೊಬ್ಬರು ಬೆಂಬಲ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಅವುಗಳನ್ನು ಹಿಂದಕ್ಕೆ ಪಡೆಯಬೇಕೆಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರೈತರ ಬೇಡಿಕೆ ಸರಿಯಾಗಿಯೇ ಇದೆ. ರೈತರ ಆಕ್ರೋಶ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಮೋದಿ ಸರ್ಕಾರ ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಉತ್ತರ ಪ್ರದೇಶ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ರಾಮ್ ಇಕ್ಬಾಲ್ ಸಿಂಗ್ ಭಾನುವಾರ ರಾತ್ರಿ ಸುದ್ದಿಗಾರರಿಗೆ ತಿಳಿಸಿದರು.


ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯಿಂದಾಗಿ ಪಶ್ಚಿಮ ಉತ್ತರ ಪ್ರದೇಶದಲ್ಲಿ ಬಿಜೆಪಿ ಮುಖಂಡರು ಹಳ್ಳಿಗಳಿಗೆ ಪ್ರವೇಶ ನೀಡದಂತಾಗಿದೆ. ಭವಿಷ್ಯದಲ್ಲಿ ರೈತರು ಬಿಜೆಪಿ ಮುಖಂಡರಿಗೆ ಮುತ್ತಿಗೆ ಹಾಕಬಹುದು ಎಂದು ಅವರು ಹೇಳಿದರು.
ಪೆಗಾಸಸ್ ಹಗರಣದಲ್ಲಿ ಸಂಸತ್ ಕಲಾಪಕ್ಕೆ ಅಡ್ಡಿ ಕುರಿತಂತೆ ಮಾತನಾಡಿದ ಸಿಂಗ್, ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಪಕ್ಷಗಳ ಬೇಡಿಕೆಯನ್ನು ಪರಿಗಣಿಸಬೇಕು, ಒಂದು ವೇಳೆ ವಿಪಕ್ಷಗಳು ತನಿಖೆಗೆ ಬಯಸಿದರೆ, ಸರ್ಕಾರದ ಅದನ್ನು ಮಾಡಲು ಮುಂದಾಗಬೇಕು, ಸಂಸತ್ ಕಲಾಪ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದರು.
ಸಂವಿಧಾನದ ತಿದ್ದುಪಡಿ ಮಸೂದೆ: ಮೋದಿ ಸರ್ಕಾರಕ್ಕೆ ವಿಪಕ್ಷಗಳಿಂದ ಬೆಂಬಲ!
ಸಂವಿಧಾನಕ್ಕೆ 127 ನೇ ತಿದ್ದುಪಡಿ ಮಸೂದೆ- ಹಿಂದುಳಿದ ವರ್ಗಗಳನ್ನು ನೋಟಿಫೈ ಮಾಡುವುದಕ್ಕೆ ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ಅಧಿಕಾರ ನೀಡುವ ಮಸೂದೆ ಅಂಗೀಕಾರವನ್ನು ಬೆಂಬಲಿಸುವುದಾಗಿ ವಿಪಕ್ಷಗಳು ಘೋಷಿಸಿವೆ.

ನವದೆಹಲಿ: ಸಂವಿಧಾನಕ್ಕೆ 127 ನೇ ತಿದ್ದುಪಡಿ ಮಸೂದೆ- ಹಿಂದುಳಿದ ವರ್ಗಗಳನ್ನು ನೋಟಿಫೈ ಮಾಡುವುದಕ್ಕೆ ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ಅಧಿಕಾರ ನೀಡುವ ಮಸೂದೆ ಅಂಗೀಕಾರವನ್ನು ಬೆಂಬಲಿಸುವುದಾಗಿ ವಿಪಕ್ಷಗಳು ಘೋಷಿಸಿವೆ.
ರಾಜ್ಯಸಭೆ-ಲೋಕಸಭೆಗಳಲ್ಲಿನ ವಿಪಕ್ಷ ನಾಯಕರ ಸಭೆಯ ನಂತರ ಮಾತನಾಡಿರುವ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂವಿಧಾನಕ್ಕೆ 127 ನೇ ತಿದ್ದುಪಡಿ ತರುವ ಮಸೂದೆಯನ್ನು ಎಲ್ಲಾ ವಿಪಕ್ಷಗಳೂ ಬೆಂಬಲಿಸಲಿವೆ ಎಂದು ತಿಳಿಸಿದ್ದಾರೆ. ಸಾಮಾಜಿಕ- ಆರ್ಥಿಕವಾಗಿ ಹಿಂದುಳಿದ ವರ್ಗಗಳನ್ನು ನೋಟಿಫೈ ಮಾಡುವುದಕ್ಕೆ ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ಅಧಿಕಾರ ನೀಡುವ ಮಸೂದೆ ಇದಾಗಿದೆ.
ವಿಪಕ್ಷಗಳ ಕಾರ್ಯತಂತ್ರದ ಸಭೆಯಲ್ಲಿ ಈ ಮಸೂದೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ಬೆಂಬಲಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ತಿದ್ದುಪಡಿಯಿಂದ ರಾಜ್ಯಳಿಗೆ ಸಾಮಾಜಿಕ- ಆರ್ಥಿಕವಾಗಿ ಹಿಂದುಳಿದ ವರ್ಗಗಳನ್ನು ನೋಟಿಫೈ ಮಾಡುವುದಕ್ಕೆ ಅಧಿಕಾರ ಮರಳಿ ಸಿಗಲಿದೆ. ಈ ಅಧಿಕಾರವನ್ನು ಕೇಂದ್ರಕ್ಕೆ ಮಾತ್ರ ಸೀಮಿತಗೊಳಿಸಿ 2021 ರ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.
“ದೇಶದಲ್ಲಿ ಅರ್ಧದಷ್ಟು ಜನಸಂಖ್ಯೆ ಹಿಂದುಳಿದ ವರ್ಗಕ್ಕೆ ಸೇರಿದ್ದಾಗಿದೆ. ಮಸೂದೆ ಮಂಡನೆ ಮಾಡಿದ ದಿನವೇ ಅಂಗೀಕರಿಸಲಾಗುತ್ತದೆ” ಎಂದು ಖರ್ಗೆ ಹೇಳಿದ್ದಾರೆ. ಸಂಸತ್ ನ ಮುಂಗಾರು ಅಧಿವೇಶನ ಕೊನೆಯ ವಾರಕ್ಕೆ ಬಂದಿದ್ದು, ಪೆಗಾಸಸ್ ಕುರಿತ ಚರ್ಚೆ ಹಾಗೂ ರೈತರ ಪ್ರತಿಭಟನೆಗಳ ವಿಷಯವಾಗಿ ಕೇಂದ್ರ ಸರ್ಕಾರವನ್ನು ಹಣಿಯುವುದಕ್ಕೆ ಕಾರ್ಯತಂತ್ರ ರೂಪಿಸಲು ವಿಪಕ್ಷಗಳು ಆ.09 ರಂದು ಸಭೆ ನಡೆಸಿದ್ದವು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಈ ಸಭೆಯಲ್ಲಿ ಭಾಗಿಯಾಗಿದ್ದರು. ಡಿಎಂಕೆ, ಟಿಎಂಸಿ, ಎನ್ ಸಿಪಿ, ಎಸ್ ಪಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್) ಆರ್ ಜೆಡಿ, ಆಮ್ ಆದ್ಮಿ ಪಕ್ಷದ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






