ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿದ ಪೊಲೀಸರು

ದೇವಸ್ಥಾನ ಹಾಗೂ ಮನೆ ಕಳ್ಳತನ ಮಾಡಿದ ಅಂತರಜಿಲ್ಲಾ ಆರೋಪಿತರ ಬಂಧನ ನಾಲ್ಕು ಪ್ರಕರಣಗಳ ಪತ್ತೆ : ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರದ ಆಭರಣ ವಶ;

ಉತ್ತರ-ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಗೋಟಗೋಡಿಕೊಪ್ಪ ಕ್ರಾಸ್ ಹತ್ತಿರ ಮುಂಡಗೋಡ-ಶಿರಸಿ ರಾಜ್ಯ ಹೆದ್ದಾರಿಯಲ್ಲಿ ಆದ ಸುಲಿಗೆ ಪ್ರಕರಣ, ಬೆಡಸಗಾಂವ ಹಾಗೂ ಕಲಕೊಪ್ಪ ಗ್ರಾಮದಲ್ಲಾದ ಮನೆಕಳ್ಳತನ ಮತ್ತು ಕೊಪ್ಪ ಗ್ರಾಮದ ಪಾಂಡುರಂಗ ದೇವಸ್ಥಾನವನ್ನು ಕಳ್ಳತನ ಮಾಡಿದ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದು, ಮೇಲಿಂದ ಮೇಲೆ ಆದ ಕಳ್ಳತನ ಹಾಗೂ ಸುಲಿಗೆ ಮಾಡಿದ ಆರೋಪಿತರನ್ನು ಪತ್ತೆ ಹಚ್ಚುವದು ಪೊಲೀಸ್ ಇಲಾಖೆಗೆ ಒಂದು ಸವಾಲಾಗಿತ್ತು. ಈ ಪ್ರಕರಣಗಳನ್ನು ಭೇದಿಸಲು ಶ್ರೀ ಪ್ರಭುಗೌಡ ಡಿ.ಕೆ ಪೊಲೀಸ್ ನಿರೀಕ್ಷಕರವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದು, ಮುಂಡಗೋಡ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಕಳ್ಳತನ ಮಾಡಿರುವ ಆರೋಪಿತರ ಪತ್ತೆ ಕಾರ್ಯ ಕೈಗೊಂಡು ಆರೋಪಿತರಾದ….01].ಅಬ್ದುಲ್ ಸತ್ತಾರ @ ಮಲ್ಲಿಕ ತಂದೆ ಮೆಹಬೂಬ ಷರೀಪ್ ಶೇಖ್ ಪ್ರಾಯ-24 ವರ್ಷ ಸಾ||ಶೃಂಗೇರಿ ತಾ||ಹಾನಗಲ್ ಜಿ||ಹಾವೇರಿ 02].ಶ್ರೀಧರ @ ಸಿರಿ ತಂದೆ ಯಲ್ಲಪ್ಪ ಬಂಡಿವಡ್ಡರ ಪ್ರಾಯ-22 ವರ್ಷ ಸಾ||ಶೃಂಗೇರಿ ತಾ||ಹಾನಗಲ್ ಜಿ||ಹಾವೇರಿ ಇವರನ್ನು ಬಂಧಿಸಿ, ಆರೋಪಿತರರಿಂದ ರೂ. 01 ಲಕ್ಷಕ್ಕೂ ಅಧಿಕ ಮೌಲ್ಯದ 30 ಗ್ರಾಂ ಬಂಗಾರದ ಆಭರಣವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಕಳ್ಳತನದಲ್ಲಿ ಭಾಗಿಯಾಗಿರುವ 3ನೇ ಅರೋಪಿತನು ತಲೆಮರೆಸಿಕೊಂಡಿದ್ದು, ಆತನ ಪತ್ತೆಯ ಕುರಿತು ಪತ್ತೆ ಕಾರ್ಯ ಮುಂದುವರೆದಿರುತ್ತದೆ. ಈ ಪ್ರಕರಣಗಳನ್ನು ಭೇದಿಸಲು ಶಿರಸಿ ಪೊಲಿಸ್ ಉಪಾಧೀಕ್ಷಕರಾದ ಶ್ರೀ ರವಿ ನಾಯ್ಕ ರವರ ಮಾರ್ಗದರ್ಶನದಲ್ಲಿ ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ. ಪ್ರಭುಗೌಡ ಡಿ.ಕೆ., ಪಿಎಸ್ಐ ಶ್ರೀ ಬಸವರಾಜ ಮಬನೂರ, ಪಿ.ಎಸ್.ಐ ಶ್ರೀ ನಿಂಗಪ್ಪ ಜಕ್ಕಣ್ಣವರ ಹಾಗೂ ಪೊಲೀಸ್ ಸಿಬ್ಬಂದಿಯವರಾದ ಧರ್ಮರಾಜ, ಗಣಪತಿ, ವಿನಾಯಕ, ತಿರುಪತಿ, ವಿನೋದಕುಮಾರ, ಅರುಣಕುಮಾರ, ಅಣ್ಣಪ್ಪ ಹಾಗೂ ಶರತಕುಮಾರ ರವರು ಭಾಗವಹಿಸಿ, ಆರೋಪಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಮುಂಡಗೋಡ ಪೊಲೀಸ್ ರವರ ಈ ಪತ್ತೆ ಕಾರ್ಯವನ್ನು ಈ ಮೂಲಕ ಪ್ರಶಂಸಿಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *