ಆನೆ ಸಾಕಲು ಹೊರಟ ಸಹನಾ ಕಾಂತಬೈಲು..! & ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ…….

ಲೇಖಕಿ ಸಹನಾ ಕಾಂತಬೈಲು ಅವರು ಕೊಡಗು ಮತ್ತು ದಕ್ಷಿಣ ಕನ್ನಡದ ಗಡಿಭಾಗವಾದ ಸಂಪಾಜೆಯ ದಬ್ಬಡ್ಕ ಎನ್ನುವ ಕುಗ್ರಾಮದವರು. ಕೇವಲ ಪಿ.ಯು.ಸಿ ವರೆಗೆ ಓದಿದ ಸಹನಾ ಕಾಂತಬೈಲು ಅವರು ತಮ್ಮ 17 ನೇ ವಯಸ್ಸಿಗೇ ಮದುವೆಯಾದವರು. 20 ನೇ ಹರೆಯದಲ್ಲೇ ಮಂಗಳ, ಸುಧಾ, ತುಷಾರ, ಮಯೂರ, ಕರ್ಮವೀರ ಪತ್ರಿಕೆಗಳಲ್ಲಿ ಅವರ ಹಲವಾರು ಹನಿಗವಿತೆಗಳು ಪ್ರಕಟವಾಗಿವೆ. ಚುಟುಕುಗಳ ರಚನೆಗಾಗಿ ಕೇರಳದಲ್ಲಿ ನಡೆದ ಅಂತರಾಜ್ಯ ಮಟ್ಟದ ಪ್ರತಿಷ್ಟಿತ ಚುಟುಕುಶ್ರೀ ಪ್ರಶಸ್ತಿ ದೊರಕಿತು. ಅಲ್ಲದೇ ಮಡಿಕೇರಿಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಹಿಂದೆಯೇ ಶಿವಮೊಗ್ಗೆಯಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಕೃಷಿಯನ್ನೇ ನೆಚ್ಚಿಕೊಂಡ ಮನೆ ಅವರದ್ದಾಗಿದ್ದರಿಂದ ಸಹಜವಾಗಿಯೇ ಅದರ ಬಗ್ಗೆ ಒಲವಿತ್ತು. ಮುಂದೆ ಕೃಷಿ ಕುರಿತ ಬರಹಗಳನ್ನು ಬರೆಯಲು ಆರಂಭಿಸಿದ ಅವರು ಸುಮಾರು 60 ಕ್ಕೂ ಹೆಚ್ಚು ಕೃಷಿಕ ಮಹಿಳೆಯರ ಯಶೋಗಾಥೆಯನ್ನು ಪ್ರಜಾವಾಣಿಯಲ್ಲಿ ಬರೆದರು. ಇನ್ನೂ ಬರೆಯತ್ತಲೇ ಇರುವ ಇವರು ನಾಡು ಕಂಡತಹ ಕೆಲವೇ ಕೆಲವು ಕೃಷಿ ಬರಹಗಾರ್ತಿಯಲ್ಲಿ ಒಬ್ಬರು. ಪುಟ್ಟ ಹಳ್ಳಿಯಲ್ಲಿರುವ ಸಹನಾ ಕಾಂತಬೈಲು ಅವರು. ಕರ್ನಾಟಕ ರಾಜ್ಯದಾದ್ಯಂತ ಹಲವಾರು ನೈಜ ಸಾಹಿತ್ಯ ಅಭಿಮಾನಿ ಬಳಗ ಹೊಂದಿದ್ದರು. ಕವಿತೆಯ ಮೂಲಕ ಬರಹವನ್ನಾರಂಭಿಸಿದ ಸಹನಾ ಕಾಂತಬೈಲು ಅವರು ತಮ್ಮ, ಸ್ವಾನುಭವ, ಪ್ರಾಮಾಣಿಕ, ದಿಟ್ಟ ಬರೆಹಗಳ ಮೂಲಕ ನಾಡಿನಾದ್ಯಂತ ಚಿರಪರಿಚಿತರಾದವರು. ಇದೀಗ ಅವರ ‘ಆನೆ ಸಾಕಲು ಹೊರಟವಳು’ ಕೃತಿಗೆ ‘ಅಜೂರ ಪ್ರತಿಷ್ಠಾನ’ದ ರಾಜ್ಯ ಪ್ರಶಸ್ತಿ ದೊರಕಿದೆ. ಇವರ ಮತ್ತೊಂದು ಕೃತಿ ‘ಇದು ಬರೀ ಮಣ್ಣಲ್ಲ’ ಕೃತಿ ಎಂಬ ಲಲಿತ ಪ್ರಬಂಧಗಳ ಸಂಕಲನ ಅಹರ್ನಿಶಿ ಪ್ರಕಾಶನದಿಂದ ಪ್ರಕಟವಾಗುತ್ತಿದೆ.ಇಂತಹ ಸಹನಾ ಕಾಂತಬೈಲು ಅವರ ಸಾಹಿತ್ಯ ಕೃಷಿಯು ನಡೆದೇ ಇದೆ… ಇವರ ಸಾಹಿತ್ಯ ಕೃಷಿ ಇನ್ನೂ ಹೆಚ್ಚಾಗಿ ಮುಂದುವರಿಯಲಿ…ಮುಂದೆ ಇವರ ಇತ್ತೀಚಿನ ‘ಆನೆ ಸಾಕಲು ಹೊರಟವಳು’ ಪುಸ್ತಕದ ಬಗೆಗೆ ಬರೆಯುತ್ತೇನೆ.. -.# ಕೆ.ಶಿವು.ಲಕ್ಕಣ್ಣವರ

ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ

ಗಿರೀಶ ಕಾಸರವಳ್ಳಿಯವರ“ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ”ಚಿತ್ರಕ್ಕೆ ಜರ‍್ಮನಿಯ ಸ್ಟುಟ್ ಗರ‍್ಟ್ ಚಿತ್ರೋತ್ಸವದಲ್ಲಿ ಪ್ರಶಸ್ತಿ. ಖ್ಯಾತ ನಿರ್ಮಾಪಕ ಎಸ್. ವಿ. ಶಿವಕುಮಾರ್ ತಮ್ಮ ಸಂಗಮ ಫಿಲ್ಮ್ಸ್ ಲಾಂಛನದಲ್ಲಿ ಗಿರೀಶ ಕಾಸರವಳ್ಳಿ ನಿರ್ದೇಶನದಲ್ಲಿ ತಯಾರಿಸಿದ ಚಿತ್ರ “ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ” ಚಿತ್ರವು ಜರ್ಮನಿಯ ಸ್ಟುಟ್‌ಗಾರ್ಟ್ ಚಿತ್ರೋತ್ಸವದಲ್ಲಿ ಶ್ರೇಷ್ಠ ನಿರ್ದೇಶಕ ಪ್ರಶಸ್ತಿ (ಡೈರೆಕ್ಟರ್ಸ್ ವಿಷನ್ ಅವಾರ್ಡ್) ದೊರೆತಿದೆ. ‘ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಬಹುಮುಖ ಪ್ರತಿಭೆಯ ಕವಿ, ಸಾಹಿತಿ, ನಾಟಕಕಾರ, ಜನಪ್ರಿಯ ಗೀತ ರಚನಕಾರ​ಜಯಂತಕಾಯ್ಕಿಣಿಯವರ ‘ಹಾಲಿನ ಮೀಸೆ’ ಕಥೆಯನ್ನು ಆಧರಿಸಿದ್ದು.

ಆ ಕಥೆಯಲ್ಲಿ ಬರುವ ಪಾತ್ರವೊಂದನ್ನು ಬೆಳೆಸಿ ಸಮಕಾಲೀನ ಸಾಮಾಜಿಕರ ಜ್ವಲಂತ ದ್ವಂದ್ವವನ್ನು ಚಿತ್ರದಲ್ಲಿ ಅಳವಡಿಸಿಕೊಳ್ಳಲಾಗಿದೆ. ದಾಸಶ್ರೇಷ್ಠ ಪುರಂದರದಾಸರ ಹಾಡೊಂದರ ಶೀರ್ಷಿಕೆ ‘ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಈ ದ್ವಂದ್ವವನ್ನು ಅತ್ಯಂತ ಮಾರ್ಮಿಕವಾಗಿ ಸೂಚಿಸುತ್ತದೆ. ಸುಖವನ್ನು ಅರಸುತ್ತಾ ಹೋಗುವ ಈ ಕಾಲದ ನಮ್ಮ ಪಯಣ ಮನಶ್ಶಾಂತಿಗೆ ಎರವಾಗುತ್ತಿದೆಯೇ ಅನ್ನುವ ಈ ದಾಸರ ಪದದಲ್ಲಿ ವ್ಯಕ್ತವಾಗುವ ಆತಂಕವೂ ಚಿತ್ರದ ಸತ್ವವಾಗಿದೆ. ಬಾಲ್ಯದ ಹಳ್ಳಿಯ ವಾತಾವರಣ ತನ್ನ ಬೆಳವಣಿಗೆಗೆ ತೊಡಕಾಗಿದೆ ಎಂದು ಭಾವಿಸುವ ನಾಗರಾಜ ಸ್ಥಳಾಂತರವಾಗುವ ಕನಸು ಕಾಣುತ್ತಿರುತ್ತಾನೆ. ನಂತರ ದೊಡ್ಡವನಾಗಿ ನಗರ ಸೇರಿ ಗೃಹಸ್ಥನಾದ ನಾಗರಾಜ ಜೀವನದಲ್ಲಿ ಯಶಸ್ವಿಯಾಗುತ್ತಾ ಹೋದಂತೆ ಭವಜೀವನದ ಆಕರ್ಷಣೆ ಅವನನ್ನು ಬೇರೆಯೇ ವ್ಯಕ್ತಿಯನ್ನಾಗಿ ರೂಪಿಸುತ್ತದೆ. ಬಾಲ್ಯದಲ್ಲಿ ಅವನುಂಡ ಅವಮಾನ ನೋವು ಅವನ ಮನಸ್ಸನ್ನು ಹದಗೊಳಿಸಿತೇ? ಅಥವಾ ಅದು ಅವನನ್ನು ಅಸೂಕ್ಷ್ಮ ಮಾಡಿತೇ? ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ ಇದಾಗಿದೆ. ೬೦ರ ದಶಕದ ಕನಸು ಮತ್ತು ಈ ಕಾಲದ ಅಂದರೆ ಈ ಹೊಸ ಶತಮಾನದ ತಳಮಳ ಇವೆರೆಡೂ ಕಥಾನಾಯಕನ ಮನೋಗತಿಯನ್ನು ರೂಪಿಸುತ್ತಿರುವ ನೆಲೆಗಳು. ಕಾಲಘಟ್ಟ ಭಿನ್ನವಾದಂತೆ ಪರಿಸರವೂ ಬದಲಾಗುತ್ತದೆ. ಹಳ್ಳಿಯ ಪರಸರದಲ್ಲಿ ಬಾಲ್ಯ ಅನಾವರಣಗೊಂಡರೆ ಬೆಂಗಳೂರಿನ ಮೆಟ್ರೋಪಾಲಿಟನ್ ಪರಿಸರ ಬೆಳೆದ ನಾಗರಾಜ ನೆಲೆಕಂಡ ತಾಣವಾಗಿದೆ. ಸ್ಥಳ ಬದಲಾಗಿದೆ. ಕಾಲ ಬದಲಾಗಿದೆ. ಆದರೆ ಮನುಷ್ಯನ ಹುಡುಕಾಟ ಅವಿರತವಾಗಿ ಮುಂದುವರೆಯುತ್ತಲೇ ಇದೆ. ಹಾಗಿದ್ದರೆ ನಾಗರಾಜನ ಹುಡುಕಾಟ ಯಾವುದಕ್ಕಾಗಿ? ಹಳ್ಳಿ ಮತ್ತು ನಗರ, ರಮಣೀಯ ನಿಸರ್ಗದ ನಡುವಿನ ಜೀವನ ಮತ್ತು ನಗರದ ಯಾಂತ್ರೀಕೃತ ಜೀವನ ಶೈಲಿ, ಪರಕೇಂದ್ರಿತ ಬದುಕು ಮತ್ತು ಸ್ವಕೇಂದ್ರಿತ ಬದುಕು– ಈ ತರಹದ ದ್ವಂದ್ವಾತ್ಮಕ ಜೀವನವಿರುವ ನಮ್ಮ ಬದುಕು ಎತ್ತ ಸಾಗಿದೆ?ದ್ವೀಪ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಹೆಚ್.ಎಂ.ರಾಮಚಂದ್ರ ಹಾಲ್ಕೆರೆ ಛಾಯಾಗ್ರಹಣ ಇರುವ ಈ ಚಿತ್ರಕ್ಕೆ ಎಸ್.ಆರ್.ರಾಮಕೃಷ್ಣ ಸಂಗೀತವಿದೆ. ಎಸ್. ಗುಣಶೇಖರನ್ ಸಂಕಲನ ಇದ್ದು ಅಪೂರ್ವ ಕಾಸರವಳ್ಳಿ ಜಂಟಿ ನಿರ್ದೇಶನ ಇದೆ. ಅನನ್ಯ ಕಾಸರವಳ್ಳಿ ವಸ್ತ್ರ ವಿನ್ಯಾಸ, ಸಾವಂತ್, ಕಿರಣ್‌ಕುಮಾರ್ ಹಾಗೂ ಯಶವಂತ ಯಾದವ್ ಅವರ ಸಹನಿರ್ದೇಶನ ಇದೆ. ಬಾಸುಮ ಕೊಡಗು ಕಲಾನಿರ್ದೇಶನ ರಮೇಶ್ ಬಾಬು ಪ್ರಸಾಧನ ಇವೆ. ತಾಂತ್ರಿಕ ನೆರವು ಮೋಹನ್ ಕಾಮಾಕ್ಷಿಯವರದು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *