75-independent- ಎಲ್ಲಾ ಶಾಲೆಗಳಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಡ್ಡಾಯ: ಸಾರ್ವಜನಿಕ ಶಿಕ್ಷಣ ಇಲಾಖೆ

ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಆದೇಶ ಹೊರಡಿಸಲಾಗಿದೆ.

Representational image

ಬೆಂಗಳೂರು: ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಆದೇಶ ಹೊರಡಿಸಲಾಗಿದೆ.

ಕೋವಿಡ್ ನ ಎಲ್ಲಾ ನಿಯಮಾವಳಿಗಳನ್ನು ಅನುಸರಿಸುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ವಿಡಿಯೋವನ್ನು ಶಾಲೆಗಳು  ಆನ್ ಲೈನ್ ನಲ್ಲಿ ಮಕ್ಕಳಿಗೆ ಶೇರ್ ಮಾಡಬೇಕು. ದೈಹಿಕ ತರಗತಿಗಳಿಗೆ ಹಾಜರಾಗಲು ಅನುಮತಿಸದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮ್ಮತಿಯಿಲ್ಲ. ಮತ್ತೊಂದೆಡೆ, ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಮುಖ್ಯಸ್ಥರು, ಸದಸ್ಯರು ಮತ್ತು ಮುಖ್ಯ ಶಿಕ್ಷಕರು, ಇತರ ನಾಗರಿಕರೊಂದಿಗೆ ಆಚರಣೆಯಲ್ಲಿ ಭಾಗವಹಿಸಬಹುದಾಗಿದೆ.

ಆದಾಗ್ಯೂ, ಸ್ವಾತಂತ್ರ್ಯ ದಿನದ ನಂತರ, ವಿದ್ಯಾರ್ಥಿಗಳು ದಿನದ ಮಹತ್ವ, ರಸಪ್ರಶ್ನೆ ಮತ್ತು ರಾಷ್ಟ್ರೀಯತೆಯ ಬಗ್ಗೆ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಆನ್ ಲೈನ್  ಚರ್ಚೆಯಲ್ಲಿ ಭಾಗವಹಿಸಬೇಕು, ಸ್ವಾತಂತ್ರ್ಯ ಹೋರಾಟಗಾರರ ಪ್ರಾಮುಖ್ಯತೆ ಮತ್ತು ಸ್ವಾತಂತ್ರ್ಯಹೋರಾಟದ ಮಹತ್ವದ ಬಗ್ಗೆ ಅರಿಯಬೇಕಾಗಿದೆ ಎಂದು ಸುತ್ತೋಲೆ ಹೊರಡಿಸಿದೆ.

ದೊಡ್ಡ ದೊಡ್ಡ ಸಭೆ ನಡೆಸುವಂತಿಲ್ಲ, ಸಾರ್ವಜನಿಕರಿಗೆ ಅವಕಾಶವಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮದ್ಯದ ಬಾಟಲಿಗಳನ್ನು ಒಳಗೆ ಒಯ್ಯಬಾರದು ಎಂಬ ನಿಯಮ ರೂಪಿಸಿ ಆದೇಶ ಹೊರಡಿಸಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *