id-75-3- ಭೂಮಿಹಕ್ಕು ವಂಚಿತರಿಗೆಲ್ಲಿ 47 ರ ಸ್ವಾತಂತ್ರ್ಯ..? ಶಿರಸಿಯಲ್ಲಿ 75 ನೇ ಸ್ವಾತಂತ್ರ್ಯೋತ್ಸವ ವಿಶೇಶ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಭೂಮಿ ಸಾಗುವಳಿದಾರರು ಲಕ್ಷಾಂತರ ಜನ, ಸಾವಿರಾರು ಕುಟುಂಬಗಳು ಊಟ,ವಸತಿಗೆ ಇಲ್ಲಿಯ ಅರಣ್ಯ ಭೂಮಿಯನ್ನೇ ಅವಲಂಬಿಸಿವೆ. ಜಿಲ್ಲೆಯ ಪ್ರತಿಶತ70 ಕ್ಕಿಂತ ಹೆಚ್ಚು ಅರಣ್ಯಭೂಮಿಯಲ್ಲಿ ಅನಿವಾರ್ಯವಾಗಿ ಅತಿಕ್ರಮಣ ಮಾಡಿಕೊಂಡು ವಾಸಿಸುತ್ತಿರುವವರ ಪರವಾಗಿ ಇಲ್ಲಿ 50 ವರ್ಷಗಳಿಗೂ ಹಿಂದಿನಿಂದ ಹೋರಾಟ ನಡೆದುಕೊಂಡು ಬಂದಿದೆ.


ರಾಮಕೃಷ್ಣ ಹೆಗಡೆಯವರ ರಾಜಕೀಯದ ದಿನಗಳಲ್ಲಿ ಸಂಸದ ದಿ. ದಿನಕರ ದೇಸಾಯಿ ಈ ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆಯನ್ನು ಕೇಂದ್ರದ ವರೆಗೆ ಪರಿಚಯಿಸಿ, ಪರಿಹಾರ ಕೇಳಿದ್ದರು. ಅವರ ನಂತರ ಈ ಅರಣ್ಯ ಅತಿಕ್ರಮಣದಾರರ ಪರವಾಗಿ ನೂರಾರು ಜನರ ನೇತೃತ್ವದಲ್ಲಿ ಸಾವಿರಾರು ಬಾರಿ ಚಳವಳಿ, ಹೋರಾಟಗಳಾಗಿವೆ. ಕಳೆದ ಮೂವತ್ತು ವರ್ಷಗಳಿಂದ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಅತಿಕ್ರಮಣದಾರರ ಪರವಾಗಿ ಹೋರಾಟ ಮಾಡುತ್ತಿರುವ ಜಿಲ್ಲಾ ಅರಣ್ಯ ಹಕ್ಕು ಹೋರಾಟ ಸಮೀತಿ ಇಂದು ಶಿರಸಿಯಲ್ಲಿ ವಿಭಿನ್ನವಾಗಿ 75 ನೇ ಸ್ವಾತಂ ತ್ರ್ಯೋತ್ಸವ ಆಚರಿಸಿತು.


ಜಿಲ್ಲಾ ಅರಣ್ಯ ಹಕ್ಕು ಹೋರಾಟ ವೇದಿಕೆ ಅಧ್ಯಕ್ಷ ರವೀಂದ್ರನಾಯ್ಕ ನೇತೃತ್ವದಲ್ಲಿ ನಡೆದ 75ನೇ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನಡೆಸಿ,ಮೆರವಣಿಗೆ ಮಾಡಲಾಯಿತು. ಈ ಸಮಾರಂಭ,  ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಅರಣ್ಯ ಅತಿಕ್ರಮಣದಾರರು ಅವರ ಮುಖಂಡರು ಭೂಮಿಹಕ್ಕು ವಂಚಿತರಿಗೆಲ್ಲಿ ಸ್ವಾತಂತ್ರ್ಯ  ಎಂದು ಸಂವಿಧಾನಾತ್ಮಕವಾಗಿ ಪ್ರಶ್ನಿಸಿದರು.


ಶಿರಸಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಅರಣ್ಯ ಭೂಮಿ ಹಕ್ಕು ಹೋರಾಟಗಾರರು ತಮಗೆ ಅರಣ್ಯ ಇಲಾಖೆ, ಸರ್ಕಾರಿ ವ್ಯವಸ್ಥೆಯಿಂದ ಆಗುತ್ತಿರುವ ತೊಂದರೆ ಅನಾವರಣ ಮಾಡಿದರು. ಸರ್ಕಾರ, ನ್ಯಾಯಾಲಯದ ಆದೇಶಗಳಿಂದ ತಮ್ಮನ್ನ ಒಕ್ಕಲೆಬ್ಬಸಿದರೆ ತಮ್ಮ ಮುಂದಿನ ಪೀಳಿಗೆಯ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದರು. ಸ್ವಾತಂತ್ರ್ಯ ಹೋರಾಟದ ತವರು ಉತ್ತರ ಕನ್ನಡ ಜಿಲ್ಲೆಯಲ್ಲಿ ನೂರಾರು ಜನರು ಭೂಮಿಹಕ್ಕು ವಂಚಿತರಿಗೆಲ್ಲಿ ಸ್ವಾತಂತ್ರ್ಯ ಎಂದು ಪ್ರಶ್ನಿಸಿದ್ದು, ಇದೇ ಸಂದರ್ಭದಲ್ಲಿ ಯೋಧರನ್ನು ಸನ್ಮಾನಿಸಿ ಗೌರವಿಸಿದ್ದು ಈ ದಿನದ 75 ನೇ ಸ್ವಾತಂತ್ರ್ಯೋತ್ಸವದ ವಿಶೇಶವಾಗಿತ್ತು.

ಪ್ರಧಾನಿ ಹೇಳುವುದೊಂದು, ಮಾಡುವುದೊಂದು; 7 ವರ್ಷದಿಂದ ಹೇಳಿದ್ದನ್ನೇ ಹೇಳುತ್ತಿದ್ದಾರೆ: ಕಾಂಗ್ರೆಸ್ ಆಕ್ರೋಶ

ಕಳೆದ 7 ವರ್ಷಗಳಿಂದಲೂ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದನ್ನೇ ಮತ್ತೆ, ಮತ್ತೆ ಪುನರಾವರ್ತನೆ ಮಾಡುತ್ತಿದ್ದಾರೆ ವಿನಃ ಯಾವುದನ್ನು ಸಮರ್ಪಕವಾಗಿ ಜಾರಿ ಮಾಡಿಲ್ಲ ಎಂದು ಕಾಂಗ್ರೆಸ್ ಗುರುತರ ಆರೋಪ ಮಾಡಿದೆ.

Mallikarjun Kharge

ನವದೆಹಲಿ: ಕಳೆದ 7 ವರ್ಷಗಳಿಂದಲೂ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದನ್ನೇ ಮತ್ತೆ, ಮತ್ತೆ ಪುನರಾವರ್ತನೆ ಮಾಡುತ್ತಿದ್ದಾರೆ ವಿನಃ ಯಾವುದನ್ನು ಸಮರ್ಪಕವಾಗಿ ಜಾರಿ ಮಾಡಿಲ್ಲ ಎಂದು ಕಾಂಗ್ರೆಸ್ ಗುರುತರ ಆರೋಪ ಮಾಡಿದೆ.

ಸ್ವಾಂತಂತ್ರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣ ಕುರಿತು ಪ್ರತಿಕ್ರಿಯೆ ನೀಡಿದ  ಹಿರಿಯ ಕಾಂಗ್ರೆಸ್ ಮುಖಂಡ, ಹಾಗೂ ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಹೇಳುವುದು ಒಂದು ಮಾಡುವುದು ಮತ್ತೊಂದು ಎಂಬ ಹಾದಿಯಲ್ಲಿ ಸಾಗಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದರು.

ರೈತರ ಭವಿಷ್ಯಕ್ಕೆ ಹಾನಿಯಾಗುವ  ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್  ಪಡೆಯಬೇಕೆಂದು ಒತ್ತಾಯ ಮಾಡಿ ದೇಶದ ರೈತರು ಒಂದು ವರ್ಷಗಳಿಂದ ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದರೂ  ಸರ್ಕಾರ ಸ್ಪಂದಿಸುತ್ತಿಲ್ಲ, ರೈತ ನಾಯಕರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಬರಿ ಘೋಷಣೆಯಿಂದ ಜನರನ್ನು ಮರಳು  ಮಾಡುವುದೇ ಸರ್ಕಾರದ ಪ್ರಮುಖ ನೀತಿ, ಗುರಿಯಾಗಿದೆ  ಎಂದು  ಟೀಕಿಸಿದರು.

ಕಳೆದ 7 ವರ್ಷಗಳಿಂದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹಿಂದೆ ಹೇಳಿದ ವಿಷಯಗಳನ್ನು ಮತ್ತೆ, ಮತ್ತೆ ಪ್ರಸ್ತಾಪ ಮಾಡುತ್ತಿದ್ದಾರೆ. ದುರ್ಬಲ ವರ್ಗಗಳಿಗೆ ಮತ್ತು ಸಣ್ಣ ರೈತ ಕುಟುಂಬಗಳಿಗೆ ಅನುಕೂಲವಾಗುವಂತಹ ಯಾವುದೇ ಹೊಸ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *