local news-ಮಳೆ ಆತಂಕ & ಅಲ್ಲಲ್ಲಿ ಸ್ವಾತಂತ್ರ್ಯೋತ್ಸವ, ಮೇಗಾ ಲೋಕಅದಾಲತ್ ದಾಖಲೆ

ನ್ಯಾಯಾಲಯದಲ್ಲಿ ಸ್ವಾತಂತ್ರ‍್ಯೋತ್ಸವ
ಸಿದ್ದಾಪುರ : ೭೫ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಭಾನುವಾರ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಸಿದ್ದರಾಮ ಎಸ್.,ಧ್ವಜಾರೋಹಣ ನೆರವೇರಿಸಿದರು.
ಈ ಸಂದರ‍್ಭದಲ್ಲಿ ಮಾತನಾಡಿದ ಅವರು, ‘ಮಹಾತ್ಮ ಗಾಂಧೀಜಿ, ಸುಭಾಷ್ಚಂದ್ರ ಬೋಸ್, ಭಗತ್ ಸಿಂಗ್ ಮೊದಲಾದ ಹಲವು ನಾಯಕರು ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಸ್ವಾತಂತ್ರ‍್ಯ ದೊರಕಿದ ನಂತರ ದೇಶ ನಡೆಸಲು ಕಾನೂನು ಬೇಕಾಯಿತು, ಇದರಿಂದ ಸಂವಿಧಾನ ರಚನೆಯಾಯಿತು. ನಮ್ಮ ನಡುವೆ ಯಾವುದೇ ಸಮಸ್ಯೆ ಉದ್ಭವಿಸಿದರೂ ಸಂವಿಧಾನದಡಿಯಲ್ಲಿ ಬಗೆಹರಿಸಲು ಸಾಧ್ಯವಿದೆ. ಸಂವಿಧಾನದ ಪೀಠಿಕೆ ಮತ್ತು ಮೂಲಭೂತ ಹಕ್ಕುಗಳ ಅಡಿಯಲ್ಲಿ ಎಲ್ಲವೂ ಬರುತ್ತದೆ. ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ ನಮ್ಮದು. ನಮ್ಮ ಸಂವಿಧಾನದ ಆಶಯದಂತೆ ಜನರ ನಡುವೆ ಸಹೋದರತ್ವ ಬೆಳೆಯಬೇಕುʼ ಎಂದರು.
ವಕೀಲರ ಸಂಘದ ಅಧ್ಯಕ್ಷ ದಿನೇಶಕುಮಾರ್, ಕಾರ್ಯದರ್ಶಿ ಎಂ.ಎನ್.ಹೆಗಡೆ ಹಾಗೂ ಇತರ ವಕೀಲರು, ಸಹಾಯಕ ಸರ್ಕಾರಿ ಅಭಿಯೋಜಕ ಚಂದ್ರಶೇಖರ್ ಎಚ್.ಎಸ್., ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮೇಗಾ ಲೋಕ ಅದಾಲತ್ ನಲ್ಲಿ ದಾಖಲೆ-ಆ.14 ರಂದು ನಡೆದ ಮೇಗಾ ಲೋಕ ಅದಾಲತ್ ನಲ್ಲಿ ಸಿದ್ಧಾಪುರ ನ್ಯಾಯಾಲಯ ದಾಖಲೆ ಮಾಡಿದೆ. 1152 ಪ್ರಕರಣ ಗಳನ್ನು ನ್ನು ಇತ್ಯರ್ಥಪಡಿಸಿರುವ ನ್ಯಾಯಾಲಯ 60 ಲಕ್ಷ, 27 ಸಾವಿರದ ಎಂಟುನೂರು15ರೂಪಾಯಿಗಳನ್ನು ಸಂಗ್ರಹಿಸಿದೆ. ಈ ಕೆಲಸಕ್ಕೆ ಸಹಕರಿಸಿದ ಪೊಲೀಸರು, ತಾಲೂಕು ಕಾನೂನುಸಮಿತಿ ಮತ್ತು ಇತರರಿಗೆ ನ್ಯಾಯಾಧೀಶ ಎಸ್. ಸಿದ್ಧರಾಮ ಕೃತಜ್ಞತೆಗಳನ್ನು ತಿಳಿಸಿದ್ದಾರೆ.

ಹಾರ್ಸಿಕಟ್ಟಾ ಸುದ್ದಿ- ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಅಘನಾಶಿನಿ ಸಾಂಬಾರು ಬೆಳೆಗಳ ಕಂಪನಿಯಲ್ಲಿ ನೂತನವಾಗಿ ಆರಂಭವಾದ ಹಿಟ್ಟಿನ ಗಿರಣಿಯನ್ನು ಸುಧಾ ಎಂ.ಹೆಗಡೆ ಕರ್ಕಿಸವಲ್ ಉದ್ಘಾಟಿಸಿದರು. ಕಂಪನಿ ಎಂಡಿ ಎಸ್.ಆರ್.ಹೆಗಡೆ ಕುಂಬಾರಕುಳಿ ಹಾಗೂ ಎಲ್ಲ ನಿರ್ದೇಶಕರು, ಹಾರ್ಸಿಕಟ್ಟಾ ಗ್ರಾಪಂ ಉಪಾಧ್ಯಕ್ಷ ಶಾಂತಕುಮಾರ ಪಾಟೀಲ್, ಸಂಧ್ಯಾ ಭಟ್ಟ ಗಾಳಿಮನೆ, ಕಂಪನಿ ಸಿಇಒ ದರ್ಶನ ಹೆಗಡೆ, ಪ್ರಮೋದ ಕೊಡಿಯಾ ಇತರರಿದ್ದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಸಿದ್ದಾಪುರ(ಉ.ಕ)
ದಿನಾಂಕ : ೧೭-೦೮-೨೦೨೧ ರ ಸಿದ್ದಾಪುರ ಪೇಟೆ ಧಾರಣೆ
ಅ.ನಂ. ಹುಟ್ಟುವಳಿಯ
ಹೆಸರು ಧಾರಣೆಗಳು (ಪ್ರತಿ ಕ್ವಿಂಟಲ್ಲಿಗೆ)
ಕನಿಷ್ಠ ಗರಿಷ್ಠ ಮಾದರಿ
೧ ರಾಶಿ ೩೯೯೦೯ ೪೨೫೦೯ ೪೧೯೬೯
೨ ತಟ್ಟಿಬೆಟ್ಟೆ ೩೨೪೧೯ ೪೦೧೦೯ ೩೪೪೬೯
೩ ಕೆAಪಗೋಟು ೨೭೮೯೦ ೩೨೩೬೯ ೩೦೪೦೯
೪ ಬಿಳಿಗೋಟು ೨೭೭೯೯ ೩೫೭೫೯ ೩೪೯೬೯
೫ ಚಾಲಿ ೩೮೬೮೯ ೪೧೧೯೯ ೪೦೮೯೯
೬ ಕೋಕಾ ೨೩೮೯೯ ೩೪೦೯೯ ೩೨೩೧೨
೭ ಕಾಳುಮೆಣಸು ೩೫೪೬೯ ೩೮೬೦೯ ೩೭೩೦೨

ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಆಗಸ್ಟ್ 20 ರವರೆಗೂ ಮಳೆ ಅಬ್ಬರ

ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಕಾರಣ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಬಹುತೇಕ ಭಾಗಗಳಲ್ಲಿ ಇಂದಿನಿಂದ ಇದೇ ಆಗಸ್ಟ್ 20ರವರೆಗೂ ಮಳೆ ಹೆಚ್ಚಾಗಲಿದೆ…

Rain_Casual_Images1

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಕಾರಣ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಬಹುತೇಕ ಭಾಗಗಳಲ್ಲಿ ಇಂದಿನಿಂದ ಇದೇ ಆಗಸ್ಟ್ 20ರವರೆಗೂ ಮಳೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ. 

ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಮತ್ತೆ ಮಳೆರಾಯನ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದೂ ವರದಿ ಹೇಳಿದೆ.

ರಾಜ್ಯ ಮಾತ್ರವಲ್ಲದೆ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಧ್ಯಪ್ರದೇಶ ರಾಜ್ಯಗಳಲ್ಲೂ ಇನ್ನೆರಡು ದಿನ ವ್ಯಾಪಕ ಮಳೆಯಾಗಲಿದೆ. ಮಣಿಪುರ, ತ್ರಿಪುರ, ಮಿಜೋರಾಂ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ. (

(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *