ಉತ್ತರ ಕನ್ನಡದಲ್ಲಿ ಅಪೌಷ್ಠಿಕತೆ ಶೂನ್ಯಕ್ಕಿಳಿಸಲು ಪ್ರಯತ್ನ -ಪ್ರಶಾಂತ್ ದೇಶಪಾಂಡೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪೂರ್ಣ ಸುರಕ್ಷತಾ ಯೋಜನೆಯಲ್ಲಿ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಸಮೀಪದ ನಮೃತಾ ಜಯಂತ ನಾಯ್ಕ ತೆಂಗಿನಮನೆ ಚಿಕಿತ್ಸೆಗಾಗಿ 60ಸಾವಿರ ರೂಗಳ ಚೆಕ್‍ನ್ನು ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಪ್ರಕಾಶ ಜಯಂತ ನಾಯ್ಕ ಅವರಿಗೆ ಬುಧವಾರ ಹಾರ್ಸಿಕಟ್ಟಾದಲ್ಲಿ ವಿತರಿಸಿದರು. ಪತ್ರಕರ್ತ ರಮೇಶ ಹೆಗಡೆ ಹಾರ್ಸಿಮನೆ, ಒಕ್ಕೂಟದ ಅಧ್ಯಕ್ಷೆ ಶಶಿಕಲಾ ಎಂ.ಆಚಾರ್ಯ, ಮೇಲ್ವಿಚಾರಕಿ ಪದ್ಮಾವತಿ ಗೌಡ, ಅಭಿಷೇಕ ಗುಡಿಗಾರ ಹಾಗೂ ಸೇವಾಪ್ರತಿನಿಧಿಗಳಿದ್ದರು.

5 ಸಾವಿರ ಸಂಖ್ಯೆಯಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಅಪೌಷ್ಠಿಕ ಮಕ್ಕಳ ಪ್ರಮಾಣವನ್ನು ತಗ್ಗಿಸುವ ಹಿನ್ನೆಲೆಯಲ್ಲಿ ವಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್ ಕಾರ್ಯನಿರ್ವಹಿಸುತಿದ್ದು ಜಿಲ್ಲೆಯಲ್ಲಿ ಅಪೌಷ್ಠಿಕ ಮಕ್ಕಳ ಪ್ರಮಾಣ ಶೂನ್ಯಕ್ಕಿಳಿಸುವ ಗುರಿಯೊಂದಿಗೆ ನಮ್ಮ ಕೆಲಸ ನಡೆಯುತ್ತಿದೆ ಎಂದು ವಿ.ಆರ್. ದೇಶಪಾಂಡೆ ಟ್ರಸ್ಟ್ ಅಧ್ಯಕ್ಷ ಪ್ರಶಾಂತ್ ದೇಶಪಾಂಡೆ ಹೇಳಿದರು. ಸಿದ್ಧಾಪುರ ಶಂಕರಮಠದಲ್ಲಿ ಟ್ರಸ್ಟ್ ಸಹಯೋಗದೊಂದಿಗೆ ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಶಂಕರಮಠದೊಂದಿಗೆ ಸಂಘಟಿಸಿದ್ದ ಅಪೌಷ್ಠಿಕ ಮಕ್ಕಳಿಗೆ ಕಿಟ್ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಪೌಷ್ಠಿಕ ಮಕ್ಕಳಿಂದ ಸಾಧನೆ, ಸಾಹಸ ಅಸಾಧ್ಯ ಎಲ್ಲರ ಭವಿಷ್ಯ ಉತ್ತಮವಾಗಬೇಕಾದರೆ ಅಪೌಷ್ಠಿಕತೆ ಶೂನ್ಯಕ್ಕಿಳಿಯಬೇಕು. ಪ್ರತಿ ಪಾಲಕರು ತಮ್ಮ ಹೆಂಡತಿಯೊಂದಿಗೆ ಪುರುಷರೂ ಮಕ್ಕಳ ಬಗ್ಗೆ ಕಾಳಜಿ ವಹಿಸಿದರೆ ಯಾರೂ ಅಪೌಷ್ಠಿಕತೆಯಿಂದ ಬಳಲುವುದಿಲ್ಲ. ಮಕ್ಕಳ ಪಾಲನೆ-ಪೋಷಣೆ ಕೇವಲ ಮಹಿಳೆ ಅಥವಾ ತಾಯಿಯ ಜವಾಬ್ಧಾರಿಯಲ್ಲ ಪುರುಷ ಕೂಡಾ ಸ್ತ್ರೀಯರಷ್ಟೇ ಆಸಕ್ತಿಯಿಂದ ಮಕ್ಕಳ ಪೋಷಣೆ ಮಾಡಬೇಕು ಎಂದರು. ತಮ್ಮ ಟ್ರಸ್ಟ್ನಿಂದ ಹಳಿಯಾಳ, ಯಲ್ಲಾಪುರ, ಶಿರಸಿ ಕ್ಷೇತ್ರಗಳಲ್ಲಿ ಅಪೌಷ್ಠಿಕತೆ ವಿರುದ್ಧದ ಕಾರ್ಯಕ್ರಮ ನಡೆಯುತಿದೆ. ಮುಂದೆ ಕರಾವಳಿಯ 3 ವಿಧಾನಸಭಾ ಕ್ಷೇತ್ರಗಳಲ್ಲೂ ಈ ಕಾರ್ಯ ನಡೆಯಲಿದೆ ಎಂದರು.

ಇದೇ ಸಂರ್ಭದಲ್ಲಿ ಸಿದ್ಧಾಪುರ ತಾಲೂಕಿನಲ್ಲಿ ಕಳೆದ ಎಸ್.ಎಸ್.ಎಲ್. ಸಿ. ಪರೀಕ್ಷೆಯಲ್ಲಿ 625 ಅಂಕಗಳಿಗೆ 625 ಪಡೆದ ವಿದ್ಯಾರ್ಥಿ,ವಿದ್ಯಾರ್ಥಿನಿಯರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *