ಕನ್ನಡ ಮಾಧ್ಯಮ ಶಾಲೆಯಿಂದ ನಾಸಾ’ವರೆಗೆ; ರಾಜ್ಯದ ದಿನೇಶ್ ವಸಂತ್ ಹೆಗ್ಡೆ ಸಾಧನೆ!

ನಾಸಾ ಫ್ಯೂಚರ್ ಇನ್ವೆಸ್ಟಿಗೇಟರ್ ಪ್ರಶಸ್ತಿ ಗೆ ಆಯ್ಕೆ ಯಾದ ಹಳ್ಳಿ ಹುಡುಗ ದಿನೇಶ್

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಆರ್ಥಿಕ ನೆರವು ನೀಡುವ ಭೂಮಿ, ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಪ್ಯೂಚರ್ ಇನ್ವೆಷ್ಟಿಗೇಟರ್ಸ್ ಕಠಿಣ ಸ್ಪರ್ಧೆಯಲ್ಲಿ ತಮ್ಮ ಹಳ್ಳಿಯ ಹುಡುಗ ದಿನೇಶ್ ವಸಂತ್ ಹೆಗ್ಡೆ ವಿಜೇತರಾದ ನಂತರ ಸಿದ್ಧಾಪುರ ತಾಲೂಕಿನ ಸಸಿಗುಳಿ ಗ್ರಾಮದಲ್ಲಿ ಹಬ್ಬದ ಸಡಗರ ಮನೆ ಮಾಡಿದೆ. 

Dinesh_Vasanth_Hegde1

ಕಾರವಾರ: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಆರ್ಥಿಕ ನೆರವು ನೀಡುವ ಭೂಮಿ, ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಪ್ಯೂಚರ್ ಇನ್ವೆಷ್ಟಿಗೇಟರ್ಸ್ ಕಠಿಣ ಸ್ಪರ್ಧೆಯಲ್ಲಿ ತಮ್ಮ ಹಳ್ಳಿಯ ಹುಡುಗ ದಿನೇಶ್ ವಸಂತ್ ಹೆಗ್ಡೆ ವಿಜೇತರಾದ ನಂತರ ಸಿದ್ಧಾಪುರ ತಾಲೂಕಿನ ಸಸಿಗುಳಿ ಗ್ರಾಮದಲ್ಲಿ ಹಬ್ಬದ ಸಡಗರ ಮನೆ ಮಾಡಿದೆ. 

ಸಿದ್ಧಾಪುರ ತಾಲೂಕಿನ ಸಣ್ಣ ಹಳ್ಳಿ ಸಸಿಗುಳಿ ಗ್ರಾಮದ ದಿನೇಶ್, ಹಂಟ್ಸ್‌ವಿಲ್ಲೆಯಲ್ಲಿರುವ ಅಲಬಾಮಾ ವಿಶ್ವವಿದ್ಯಾಲಯದಲ್ಲಿ ಬಾಹ್ಯಾಕಾಶ ವಿಜ್ಞಾನದ ಸಹಾಯಕ ಸಂಶೋಧಕರಾಗಿದ್ದು, ನಾಸಾದಿಂದ ತನ್ನ ಅಧ್ಯಯನವನ್ನು ಮುಂದುವರಿಸಲು 1.35 ಲಕ್ಷ ಡಾಲರ್‌ಗಳ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ.

ಈ ಸಾಧನೆಯಿಂದ ಆತನ ಹುಟ್ಟೂರಿನ ಜನರು ಸಂತಸದಲ್ಲಿದ್ದಾರೆ. ನಾವೆಲ್ಲರೂ ಆತನ ಬಗ್ಗೆ ತುಂಬಾ ಹೆಮ್ಮೆ ಪಡುತ್ತೇವೆ. ಸಣ್ಣ ಹಳ್ಳಿಯಿಂದ ಬಂದು ಅಧ್ಯಯನಕ್ಕಾಗಿ ಅಮೆರಿಕಕ್ಕೆ ಹೋದವರು ಇದೀಗ ನಾಸಾದಿಂದ ಸ್ಕಾಲರ್ ಶಿಪ್ ಪಡೆದಿದ್ದಾರೆ ಎಂದು ಅವರ ಸಂಬಂಧಿ ಗಿರೀಶ್ ಹೆಗ್ಡೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯಿಂದ ಬಂದ ದಿನೇಶ್ ಸಾಧನೆ ಊಹಿಸಲಿಕ್ಕೂ ಅಸಾಧ್ಯವಾಗಿದೆ. ಈ ಸ್ಕಾಲರ್ ಶಿಪ್ ಪಡೆದ ಮೊದಲ ಭಾರತೀಯನಾಗಿರಬಹುದು ಎಂದು ಗಿರೀಶ್ ಹೇಳಿದರು.

ಹಂಟ್ಸ್ ವಿಲ್ಲೆಯ ಅಲಬಾಮಾ ವಿವಿಯ ಬಾಹ್ಯಾಕಾಶ ಇಲಾಖೆಯಲ್ಲಿ ಸಂಶೋಧನಾ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹೆಗ್ಡೆ ಅವರಿಗೆ ದೊರೆತಿರುವ ನಾಸಾ ಅನುದಾನದಿಂದ  ಅವರು ಬಾಹ್ಯಾಕಾಶ ಹವಾಮಾನದಲ್ಲಿ ಸಂಶೋಧನೆ ಮುಂದುವರೆಯಲು ನೆರವಾಗಿದೆ. ಹೆಗ್ಡೆ ಅವರು ಬಾಹ್ಯಾಕಾಶ ಹವಾಗುಣ ವಿಜ್ಞಾನಿ ಡಾ. ನಿಕೊಲಾಯ್ ಪೊಗೊರೆಲೋವ್ ಅವರ ಮಾರ್ಗದರ್ಶನದಲ್ಲಿ ” ಪರಿಮಾಣಾತ್ಮಕ ಅನಿಶ್ಚಿತತೆಗಳೊಂದಿಗೆ ಬಾಹ್ಯಾಕಾಶ ಹವಾಮಾನವನ್ನು ರೂಪಿಸುವಿಕೆ” ಸಂಶೋಧನಾ ಶೀರ್ಷಿಕೆಯನ್ನು ಹೆಗ್ಡೆ ಪ್ರಸ್ತಾಪಿಸಿದ್ದಾರೆ.

ನಾಸಾದದಿಂದ ಸ್ಕಾಲರ್ ಶಿಪ್ ಬಗ್ಗೆ ಹೆಗ್ಡೆ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ನನ್ನ ಪ್ರಯತ್ನಕ್ಕೆ ಈ ಆಫರ್ ಲೇಟರ್ ದೊಡ್ಡ ಪ್ರೋತ್ಸಾಹ ಸಿಕ್ಕಿದಂತಾಗಿದೆ. ಅಧಿಸೂಚನೆಯ ಗಡುವು ಈಗಾಗಲೇ ಮುಗಿದಿರುವುದರಿಂದ ನನ್ನ ಪ್ರಾಜೆಕ್ಟ್ ಆಯ್ಕೆಯಾಗಿಲ್ಲ ಅಂದುಕೊಂಡಿದ್ದೆ. ಆಫರ್ ಲೇಟರ್ ಬಗ್ಗೆ ಎರಡೆರಡು ಬಾರಿ ಪರಿಶೀಲಿಸಿ ಆಯ್ಕೆಯನ್ನು ಖಚಿತಪಡಿಸಿಕೊಂಡ ನಂತರ ತನ್ನ ತಂಗಿಯೊಂದಿಗೆ ಸಂತಸವನ್ನು ಹಂಚಿಕೊಂಡಿದ್ದಾಗಿ ಹೆಗ್ಡೆ ಹೇಳಿದರು.

ನನ್ನ ಸಹೋದರನ ಬಗ್ಗೆ ತುಂಬಾ ಸಂತೋಷವಾಗುತ್ತಿದೆ. ಈಗ ಆತನ ಪಿಹೆಚ್ ಡಿ ಮಾಡುತ್ತಿದ್ದಾನೆ. ಈ ಸ್ಕಾಲರ್ ಶಿಪ್ ಇದೀಗ ದೊಡ್ಡ ಸುದ್ದಿಯಾಗಿದೆ. ಆತನ ಶಿಕ್ಷಕರು, ಶಾಲೆಯವರು ಎಲ್ಲರೂ ಕೂಡಾ ಸಂಭ್ರಮಿಸುತ್ತಿದ್ದಾರೆ ಎಂದು ಮೈಸೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಸಹಾಯಕ ಪ್ರೊಫೆಸರ್ ಆಗಿರುವ ದಿನೇಶ್ ತಂಗಿ  ದಿವ್ಯಾ ವಸಂತ್ ಹೆಗ್ಡೆ ಹೇಳಿದರು. 

ದಿನೇಶ್ ಹೆಗ್ಡೆ ಅವರು ವಿನಮ್ರ ಹಿನ್ನೆಲೆಯವರು, ಇವರ ಇಡೀ ಶಾಲಾವಧಿ ಗ್ರಾಮೀಣ ಪ್ರದೇಶದ ಕನ್ನಡ ಮಾಧ್ಯಮದಲ್ಲಿ ನಡೆದಿದೆ. ವಾಜಗದ್ದೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಹಾರ್ಷಿಕಟ್ಟಾದಲ್ಲಿನ ಅಶೋಕ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪಡೆದಿದ್ದಾರೆ. ಮೈಸೂರು ವಿವಿಯಿಂದ ಎಂಎಸ್ ಸಿ ಪದವಿ ಪೂರೈಸಿದ್ದಾರೆ. ಅವರ ತಂದೆ ವಸಂತ ಹೆಗ್ಡೆ ಮೂರು ತಿಂಗಳ ಹಿಂದಷ್ಟೇ ಕೋವಿಡ್ -19 ನಿಂದ ಮೃತಪಟ್ಟಿದ್ದು, ತಾಯಿ ಗಂಗಾ ಹೆಗ್ಡೆ ಗೃಹಿಣಿಯಾಗಿದ್ದು, ಸಸಿಗುಳಿ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.  

ಹಂಟ್ಸ್‌ವಿಲ್ ನಲ್ಲಿರುವ ಅಲಬಾಮಾ ವಿಶ್ವವಿದ್ಯಾಲಯದ (UAH) ಇಬ್ಬರು ಡಾಕ್ಟರೇಟ್ ವಿದ್ಯಾರ್ಥಿಗಳು ಸಲ್ಲಿಸಿರುವ ಸಂಶೋಧನಾ ಪ್ರಸ್ತಾವನೆಯನ್ನು​ ಬಾಹ್ಯಾಕಾಶ ವಿಜ್ಞಾನ ವಿಭಾಗವು ನಾಸಾ ಅರ್ಥ್ ಮತ್ತು ಸ್ಪೇಸ್ ಸೈನ್ಸ್ ಮತ್ತು ಟೆಕ್ನಾಲಜಿ (FINESST) ಅನುದಾನದಲ್ಲಿ  NASA ಫ್ಯೂಚರ್​ ಇನ್​ವೆಸ್ಟಿಗೇಟರ್​ ಪ್ರಶಸ್ತಿಗೆ  ಆಯ್ಕೆ ಮಾಡಿದೆ.

ಕ್ಯಾಥರೀನ್ ಡೇವಿಡ್ಸನ್ ಮತ್ತು ದಿನೇಶ (ದಿನೇಶ್) ವಸಂತ ಹೆಗಡೆಯವರಿಗೆ ತಲಾ 135000 ಅಮೇರಿಕನ್​ ಡಾಲರ್ ಅನ್ನು ​ ಸ್ಟೈಫಂಡ್ , ಟ್ಯೂಷನ್, ಸಂಶೋಧನಾ ಚಟುವಟಿಕೆಗಳು ಮತ್ತು ಪ್ರಯಾಣ ವೆಚ್ಚಗಳನ್ನು ಭರಿಸಲು, ಕಾರ್ಯಾಗಾರಗಳು ಮತ್ತು ಸಮ್ಮೇಳನಗಳಿಗೆ ಹಾಜರಾಗಲು ಮತ್ತು ಸಂಶೋಧನೆಯನ್ನು ಮುಂದುವರೆಸಲು ನೀಡಲಾಗುವುದು ಎಂದು ವಿಶ್ವವಿದ್ಯಾನಿಯಲದ ಅಧಿಕೃತ ವೆಬ್​ಸೈಟ್​ ತನ್ನ ನ್ಯೂಸ್​​ ಲೆಟರ್​ನಲ್ಲಿ ತಿಳಿಸಿದೆ.

ಎರಡನೇ ವರ್ಷದ ಡಾಕ್ಟರೇಟ್ ವಿದ್ಯಾರ್ಥಿಯಾಗಿರುವ ಹೆಗಡೆ, ಬಾಹ್ಯಾಕಾಶ ವಿಜ್ಞಾನ ವಿಭಾಗದಲ್ಲಿ ಮತ್ತು ಯುಎಎಚ್ ಸೆಂಟರ್ ಫಾರ್ ಸ್ಪೇಸ್ ಪ್ಲಾಸ್ಮಾ ಮತ್ತು ಏರೋನಾಮಿಕ್ ರಿಸರ್ಚ್‌ನಲ್ಲಿ ಪದವಿ ಸಂಶೋಧನಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ, ಬಾಹ್ಯಾಕಾಶ ಹವಾಮಾನದ ಕುರಿತು ತಮ್ಮ ಸಂಶೋಧನೆಯನ್ನು ಮುಂದುವರಿಸಲು ಈ ಅನುದಾನವನ್ನು ನೀಡಲಾಗಿದೆ. ಹೆಗಡೆಯವರ ಸಂಶೋಧನಾ ಪ್ರಸ್ತಾವನೆ, “ಬಾಹ್ಯಾಕಾಶ ಹವಾಮಾನದ ಅನಿಶ್ಚಿತತೆಗಳ ಪರಿಮಾಣಾತ್ಮಕ ಅಧ್ಯಯನ “, ಎಂದಾಗಿರುತ್ತದೆ . ಬಾಹ್ಯಾಕಾಶ ಹವಾಮಾನ ವಿಜ್ಞಾನಿ ಮತ್ತು ಬಾಹ್ಯಾಕಾಶ ವಿಜ್ಞಾನದ ವಿಶೇಷ ಪ್ರಾಧ್ಯಾಪಕರಾದ ಡಾ.ನಿಕೊಲಾಯ್ ಪೊಗೊರೆಲೋವ್ ಇವರಿಗೆ ಸಲಹೆ ಮತ್ತು ಮಾರ್ಗದರ್ಶನ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ, ಸಶಿಗುಳಿ ಗ್ರಾಮದ ದಿನೇಶ್ ವಸಂತ ಹೆಗಡೆ, ನಾಸಾ ಗುರುತಿಸಿರುವ ಅಪ್ಪಟ ಕನ್ನಡ ಮಣ್ಣಿನ ಪ್ರತಿಭೆ. ಇವರು
ಕ್ರಮವಾಗಿ ವಾಜಗದ್ದೆ ಮತ್ತು ಹಾರ್ಸಿಕಟ್ಟಾ ದಲ್ಲಿ ಕನ್ನಡ ಮಾಧ್ಯಮದಲ್ಲಿ ತಮ್ಮ ಪ್ರಾಥಮಿಕ ಹಾಗು ಪ್ರೌಢಶಾಲಾ ಅಧ್ಯಯನ ಮಾಡಿರುತ್ತಾರೆ.
ಮೈಸೂರಿನ ಯುವರಾಜ ಕಾಲೇಜಿನಲ್ಲಿ ತನ್ನ ಬಿಎಸ್ಸಿ ಪದವಿ ಮುಗಿಸಿ ನಂತರ ಮೈಸೂರು ವಿಶ್ವವಿದ್ಯಾನಿಲಯದಿಂದ ಭೌತ್ತಶಾಸ್ತ್ರ ಎಂಎಸ್ಸಿ ಪದವಿ ಗಳಿಸಿ, ಹೆಚ್ಚಿನ ಅಧ್ಯಯನಕ್ಕೆ ಅಮೇರಿಕಾಕ್ಕೆ ಹಾರಿದ ದಿನೇಶ್​ ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಪತಾಕೆ ಹಾರಿಸಿದ್ದಾರೆ.

ಕಾಲೇಜು ದಿನಗಳಲ್ಲೇ ವಿಜ್ಞಾನದ ಜೊತೆಗೆ ಸಾಂಸ್ಕೃತಿಕವಾಗಿಯೂ ಭಾಗವಹಿಸುತ್ತಿದ್ದ ದಿನೇಶ್​ ಮೈಸೂರಿನ ನಿರಂತರ ರಂಗ ತಂಡದಲ್ಲಿ ನಟನಾಗಿ ಗುರುತಿಸಿಕೊಂಡಿದ್ದರು, ಅಲ್ಲದೇ ಅನೇಕ ಕಾಲೇಜು ನಾಟಕೋತ್ಸವಗಳಲ್ಲಿ ಭಾಗವಹಿಸಿದ ಹೆಗ್ಗಳಿಕೆ ಇವರದು.

ಭೂ ವಿಜ್ಞಾನ, ಹೆಲಿಯೊಫಿಸಿಕ್ಸ್, ಗ್ರಹ ವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರ ವಿಷಯಗಳನ್ನು ಅಧ್ಯಯನ ಮಾಡುತ್ತಿರುವ, ನಾಸಾ ವಿಜ್ಞಾನದ ಮಿಷನ್ ನಿರ್ದೇಶನಾಲಯದೊಂದಿಗೆ ಈ ಕೆಳಗಿನ ಒಂದು ಅಥವಾ ಹೆಚ್ಚಿನ ಕ್ಷೇತ್ರಗಳಲ್ಲಿ ಹೊಂದಿಕೊಂಡಂತೆ ಸಂಶೋಧನೆಯನ್ನು ಮಾಡುತ್ತಿರುವ ಸಂಶೋಧನಾ ವಿದ್ಯಾರ್ಥಿಗಳಿಗೆ ನಾಸಾ ಈ ಅತ್ಯುತ್ತಮ ಪ್ರಶಸ್ತಿ ನೀಡುತ್ತದೆ.

ತಾನು ಆಯ್ಕೆ ಆಗಿಲ್ಲ ಎಂದು ಆರಂಭದಲ್ಲಿ ಭಾವಿಸಿದ್ದೆ, ನಂತರ ಬಂದ ಆಫರ್ ಲೆಟರ್ ನನ್ನ ಆತ್ಮ ವಿಶ್ವಾಸ, ಸಂತೋಷ, ಭವಿಷ್ಯದ ಗುರಿ, ಕನಸು ಎಲ್ಲವನ್ನು ಇಮ್ಮಡಿಗೊಳಿಸಿತು ಎಂದು ಹೆಗಡೆ ಹೇಳಿದ್ದಾರೆ.

“ನಾನು ಆಯ್ಕೆಯಾಗಿದ್ದೇನೆ ಎಂದು ತಿಳಿದಾಗ ನನಗೆ ತುಂಬಾ ಸಂತೋಷವಾಯಿತು ಮತ್ತು ಆಶ್ಚರ್ಯವಾಯಿತು”, “ಸಂಶೋಧನಾ ಪ್ರಸ್ತಾವನೆಯ ಫಲಿತಾಂಶ ಪ್ರಕಟಣೆಯ ಅಧಿಸೂಚನೆಯ ಗಡುವು ಈಗಾಗಲೇ ಮುಗಿದಿರುವುದರಿಂದ, ನಮ್ಮ ಈ ಯೋಜನೆಯನ್ನು ಆಯ್ಕೆ ಮಾಡಲಾಗುವುದಿಲ್ಲ ಎಂದು ನಾನು ಭಾವಿಸಿದ್ದೆ. ಆಯ್ಕೆಯನ್ನು ಖಚಿತಪಡಿಸಿಕೊಳ್ಳಲು ನಾನು ಆಫರ್ ಲೆಟರ್ ಅನ್ನು ಎರಡು ಬಾರಿ ಪರಿಶೀಲಿಸಿದೆ “, “ಸ್ವಲ್ಪ ಸಮಯದ ನಂತರ, ನನ್ನ ಮೇಲ್ವಿಚಾರಕರಿಂದ ನನಗೆ ಇಮೇಲ್ ಬಂದು ಈ ಸಂತೋಷದ ವಿಷಯ ಧೃಡಪಟ್ಟಿತು. ತಕ್ಷಣವೇ ನಾನು ಭಾರತದಲ್ಲಿರುವ ನನ್ನ ಅಕ್ಕನಿಗೆ ಈ ಶುಭ ಸುದ್ದಿಯನ್ನು ಹಂಚಿಕೊಳ್ಳಲು ಕರೆ ಮಾಡಿದೆ ಎಂದರು ದಿನೇಶ್​ ಹೆಗಡೆ.

ಸೌರ ಮಾರುತದ ಗುಣಲಕ್ಷಣಗಳನ್ನು ಅಧ್ಯಯನ ಮಾಡುತ್ತಿರುವ ದಿನೇಶ್​, ಪ್ಲಾಸ್ಮಾ ಸ್ಥಿತಿಯಲ್ಲಿ ಮುಖ್ಯವಾಗಿ ಪ್ರೋಟಾನ್‌ಗಳು ಮತ್ತು ಎಲೆಕ್ಟ್ರಾನ್‌ಗಳನ್ನು ಒಳಗೊಂಡಿರುವ ನಿರಂತರ ಹರಿವು ಸೂರ್ಯನಿಂದ ಹೊರಕ್ಕೆ ಹೇಗೆ ಹರಿಯುತ್ತದೆ ಮತ್ತು ತನ್ನ ಒಳಗೆ ಹುದುಗಿರುವ ಸೌರ ಕಾಂತೀಯ ಕ್ಷೇತ್ರವನ್ನು ಅದರೊಂದಿಗೆ ಹೇಗೆ ಒಯ್ಯುತ್ತದೆ ಎನ್ನುವ ವಿಚಾರದ ಕುರಿತು ಅಧ್ಯಯನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *