
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ. ಸಿ.ಎಸ್. ದ್ವಾರಕನಾಥ್ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಬೆಂಗಳೂರು: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ. ಸಿ.ಎಸ್. ದ್ವಾರಕನಾಥ್ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಧ್ವಜವನ್ನು ನೀಡಿ ದ್ವಾರಕನಾಥ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಅವರು ಮಾಜಿ ಸಿಎಂ ದೇವರಾಜ ಅರಸು ಅವರ ಬಗ್ಗೆ ಬರೆದಿರುವ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಡಾ. ಸಿ ಎಸ್ ದ್ವಾರಕನಾಥ್ ಅವರು ವಕೀಲರಾಗಿ, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ದಲಿತ, ಹಿಂದುಳಿದ ವರ್ಗ ಹಾಗೂ ಜನಪರ ಹೋರಾಟದಲ್ಲಿ ಅವರು ಸಕ್ರಿಯರಾಗಿದ್ದರು.
