

ರಾಮಕೃಷ್ಣ ಹೆಗಡೆ ಜನ್ಮ ದಿನಾಚರಣೆ
ಸಿದ್ದಾಪುರ
ಪಟ್ಟಣದ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಸಾಮಾಜಿಕ ಕಾರ್ಯಕರ್ತ ಶ್ರೀಧರ ಕೊಂಡ್ಲಿ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ ೯೬ ಜನ್ಮ ದಿನವನ್ನು ಆಚರಿಸಲಾಯಿತು.
ಅಲಂಕೃತಗೊಂಡ ರಾಮಕೃಷ್ಣ ಹೆಗಡೆಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ,ಸಿಹಿ ಹಂಚಿ ಅವರನ್ನು ನೆನಪಿಸಿಕೊಳ್ಳಲಾಯಿತು. ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷ ಡಾ|ಶಶಿಭೂಷಣ ಹೆಗಡೆ, ಶ್ರೀಧರ ಕೊಂಡ್ಲಿ, ವಿನಾಯಕ ಜಿ.ಕೊಂಡ್ಲಿ, ಲೋಕೇಶ ಕೆ.ನಾಯ್ಕ ಬಾಲಿಕೊಪ್ಪ, ವಾಸುದೇವ ಕೊಂಡ್ಲಿ, ಬರ‍್ಯಾ ಕೊಪ್ಪ, ತೇಜು ಎಸ್.ನಾಯ್ಕ, ಯಶೋಧರ ಎಚ್.ನಾಯ್ಕ, ಶ್ರೇಯಸ್ ಕೊಂಡ್ಲಿ ಮುಂತಾದವರು ಪಾಲ್ಗೊಂಡಿದ್ದರು.

ರಾಮಕೃಷ್ಣ ಹೆಗಡೆ ಅವರ ಜೀವನ, ಕೊಡುಗೆ ನಮಗೆ ಸದಾ ಆದರ್ಶಪ್ರಾಯ: ಸಿಎಂ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ದಿವಂಗತ ರಾಮಕೃಷ್ಣ ಹೆಗಡೆ ಅವರ 95ನೇ ಜನ್ಮದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವಪೂರ್ಣ ನಮನಗಳನ್ನು ಸಲ್ಲಿಸಿದ್ದಾರೆ.


ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ದಿವಂಗತ ರಾಮಕೃಷ್ಣ ಹೆಗಡೆ ಅವರ 95ನೇ ಜನ್ಮದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವಪೂರ್ಣ ನಮನಗಳನ್ನು ಸಲ್ಲಿಸಿದ್ದಾರೆ.

“ಕರ್ನಾಟಕದಲ್ಲಿ ದೀರ್ಘಕಾಲದ ಕಾಂಗ್ರೆಸ್ ಆಡಳಿತವನ್ನು ಕೊನೆಗೊಳಿಸಿ ಪ್ರಥಮ ಕಾಂಗ್ರೆಸ್ಸೇತರ ಮುಖ್ಯಮಂತ್ರಿಗಳಾದ ದಿವಂಗತ ರಾಮಕೃಷ್ಣ ಹೆಗಡೆಯವರು ರಾಜ್ಯದಲ್ಲಷ್ಟೇ ಅಲ್ಲ ರಾಷ್ಟ್ರಮಟ್ಟದಲ್ಲಿ ಪ್ರಭಾವಿ ನಾಯಕರಾಗಿದ್ದರು. ಕೇಂದ್ರದಲ್ಲಿ ವಿಪಿ ಸಿಂಗ್ ನೇತ್ರತ್ವದ ಸರ್ಕಾರ ರಚನೆಯಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು” ಎಂದು ಬೊಮ್ಮಾಯಿ ಹೆಗಡೆಯವರ ನಾಯಕತ್ವವನ್ನು ಬಣ್ಣಿಸಿದ್ದಾರೆ
“ಹೆಗಡೆಯವರ ಜೊತೆ ನನ್ನ ತಂದೆ ಎಸ್. ಆರ್. ಬೊಮ್ಮಾಯಿ ಅವರ ಸ್ನೇಹ ಸಂಬಂಧ ಅವರ ಜೀವನದ ಅಂತ್ಯದ ವರೆಗೂ ಇತ್ತು. ಹೆಗಡೆಯವರ ಸಂಪುಟದಲ್ಲಿ ಸಚಿವರಾಗಿ ಜನತಾದಳವನ್ನು ಸಂಘಟಿಸಿ ಅಧಿಕಾರಕ್ಕೆ ತರುವಲ್ಲಿ ಹೆಗಡೆಯವರು ಮತ್ತು ಬೊಮ್ಮಾಯಿಯವರು ಅವಿಶ್ರಾಂತವಾಗಿ ಶ್ರಮಿಸಿದ್ದರು.”
“ಹೆಗಡೆಯವರು ರಾಜ್ಯ ಕಂಡ ಮುತ್ಸದ್ದಿ ನಾಯಕರು. ಮೌಲ್ಯಾಧಾರಿತ ರಾಜಕೀಯದ ಪ್ರವರ್ತಕರು. ದಕ್ಷ ಆಡಳಿತಕ್ಕೆ, ಪ್ರಾಮಾಣಿಕತೆಗೆ ಅವರು ಮಾದರಿ. ಹೆಗಡೆಯವರ ಕೊಡುಗೆ ರಾಜ್ಯಕ್ಕೆ ಅಪಾರ. ಮುಖ್ಯವಾಗಿ ಆಡಳಿತ ವಿಕೇಂದ್ರೀಕರಣಕ್ಕೆ ಅವರು ಮಾಡಿದ ಪಂಚಾಯತ್ ರಾಜ್ ವ್ಯವಸ್ಥೆ ದೇಶದಲ್ಲಿ ಅನುಕರಣೀಯ ವೆಂದು ಪ್ರಶಂಸೆಗೆ ಪಾತ್ರವಾಗಿದೆ. ನನ್ನ ತಂದೆಯವರೊಂದಿಗೆ ಹೆಗಡೆಯವರ ಸಂಬಂಧ ಅವಿಸ್ಮರಣೀಯ. ಅತ್ಯಂತ ಧನ್ಯತೆಯಿಂದ ಸ್ಮರಿಸಿ ಕೊಳ್ಳುತ್ತೇನೆ.” ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. (kpc)
.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
