6 ರಿಂದ 8ನೇ ತರಗತಿ ಶಾಲೆ ಆರಂಭಕ್ಕೆ ಅನುಮತಿ; ಸಾರ್ವಜನಿಕ ಗಣೇಶೋತ್ಸವ ಕುರಿತು ಸದ್ಯ ಯಾವುದೇ ನಿರ್ಧಾರ ಇಲ್ಲ!

ಮೂರನೇ ಅಲೆ ಆತಂಕದ ನಡುವೆ ಸೆಪ್ಟೆಂಬರ್ 6ರಿಂದ 6ನೇ ತರಗತಿಯಿಂದ 8ನೇ ತರಗತಿ ಶಾಲೆಗಳನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

Basavaraj Bommai

ಬೆಂಗಳೂರು: ಮೂರನೇ ಅಲೆ ಆತಂಕದ ನಡುವೆ ಸೆಪ್ಟೆಂಬರ್ 6ರಿಂದ 6ನೇ ತರಗತಿಯಿಂದ 8ನೇ ತರಗತಿ ಶಾಲೆಗಳನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 

ಶಾಲೆಗಳ ಓಪನ್ ಮತ್ತು ಗಣೇಶ್ ಹಬ್ಬದ ಆಚರಣೆ ಸಂಬಂಧ ಇಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ 6ರಿಂದ 8ನೇ ತರಗತಿಗಳನ್ನು ಓಪನ್ ಮಾಡಲು ಅನುಮತಿ ನೀಡಲಾಗಿದ್ದು ಅದರಂತೆ ವಾರದಲ್ಲಿ 5 ದಿನ ಮಾತ್ರ ಶಾಲೆಗಳು ನಡೆಯುತ್ತದೆ. ಇನ್ನುಳಿದ ಎರಡು ದಿನಗಳು ಶಾಲೆಗಳನ್ನು ಸ್ವಚ್ಛಗೊಳಿಸುವ ಪ್ರಕ್ರಿಯೆ ನಡೆಯುತ್ತದೆ ಎಂದರು. 

ಪಾಸಿಟಿವಿಟಿ ರೇಟ್ 2ಕ್ಕಿಂತ ಕಡಿಮೆ ಇರುವ ತಾಲೂಕಿಗಳಲ್ಲಿ ಶಾಲೆಗಳನ್ನು ಆರಂಭಿಸಲಾಗುತ್ತದೆ. ಮಕ್ಕಳನ್ನು ಎರಡು ಬ್ಯಾಚ್ ಮಾಡಲಾಗುತ್ತದೆ. ಅದರಂತೆ ದಿನ ಬಿಟ್ಟು ದಿನ ಮಕ್ಕಳು ಶಾಲೆಗೆ ಹಾಜರಾಗಬೇಕಾಗುತ್ತದೆ. 

ಕೇರಳದಿಂದ ರಾಜ್ಯಕ್ಕೆ ಬರುವವರಿಗೆ 1 ವಾರ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. 8ನೇ ದಿನ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ದಕ್ಣಿಣ ಕನ್ನಡ, ಹಾಸನ, ಕೊಡಗು ಜಿಲ್ಲೆ ಬಿಟ್ಟು ಉಳಿದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಸಡಿಲಗೊಳಿಸಲಾಗಿದೆ ಎಂದು ಇದೇ ಸಭೆಯಲ್ಲಿ ನಿರ್ಧರಿಸಲಾಗಿದೆ ಸಚಿವ ಅಶೋಕ್ ತಿಳಿಸಿದರು.

ಗಣೇಶ ಹಬ್ಬ ಆಚರಣೆ ಸದ್ಯ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಅನುಮತಿ ನೀಡಲಾಗುವುದು. ಸಾರ್ವಜನಿಕವಾಗಿ ಗಣೇಶ ಮೂರ್ತಿಯನ್ನು ಕೂರಿಸುವ ಸಂಬಂಧ ಸ್ಥಳೀಯ ಪೊಲೀಸರಿಂದ ಮಾಹಿತಿ ಸಂಗ್ರಹಿಸಿ ಆಯೋಜಕರೊಂದಿಗ ಮಾತುಕತೆ ನಡೆಸಿದ ನಂತರ ಅನುಮತಿ ನೀಡಲಾಗುವುದು ಎಂದರು. ಸದ್ಯ ಗಣೇಶ ಹಬ್ಬ ಆಚರಣೆ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸೆ.5ರಂದು ಮತ್ತೊಂದು ಸಭೆ ನಡೆಸಲಾಗುವುದು ಈ ವೇಳೆ ಗಣೇಶೋತ್ಸವ ಸಂಬಂಧ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡುವುದಾಗಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *