

ಎಲ್ ಪಿಜಿ, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಳೆದ ಏಳು ವರ್ಷಗಳಲ್ಲಿ ಈ ವಸ್ತುಗಳ ಬೆಲೆ ಏರಿಕೆಯಿಂದ…
ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ- (ಒಂದು ಮನವಿ) ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸವಾದಿ)* ಉತ್ತರ ಕನ್ನಡ ಜಿಲ್ಲಾ ಸಮಿತಿ—————————————————– ದಿನಾಂಕ : 01.09.2021
*ಇವರಿಗೆ*
, *ಶ್ರೀ ಬಸವರಾಜ ಬೊಮ್ಮಾಯಿಯವರು,* ಮುಖ್ಯಮಂತ್ರಿಗಳು,ಕರ್ನಾಟಕ ಸರ್ಕಾರವಿಧಾನ ಸೌಧ, ಬೆಂಗಳೂರು.
*ಮಾನ್ಯರೇ* ,
*ವಿಷಯ* : ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸುತ್ತಿರುವುದನ್ನು ತಕ್ಷಣವೇ ತಡೆ ಹಿಡಿಯಲು ಸಿಪಿಐಎಂ ಒತ್ತಾಯ.—-
ಕನ್ನಡ ಭಾಷೆ ಹಾಗೂ ಕನ್ನಡಿಗರ ಅಭಿವೃದ್ಧಿಗೆ ಮಾರಕವಾದ, ಅದರಲ್ಲೂ ಎಲ್ಲ ಮಹಿಳೆಯರು, ದಲಿತರು ಹಾಗೂ ಹಿಂದುಳಿದ ವರ್ಗಗಳ ಬಡವರಿಗೆ ಅಂದರೆ ರಾಜ್ಯದ ಶೇ 95 ರಷ್ಠು ಜನರಿಗೆ ಶಿಕ್ಷಣವನ್ನು ಮರೀಚಿಕೆಯಾಗಿಸುವ ಅತ್ಯಂತ ಅಪಾಯಕಾರಿಯಾದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸುತ್ತಿರುವ ಕೆಲಸವನ್ನು ಈ ಕೂಡಲೇ ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರವನ್ನು, ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸವಾದಿ) ಉತ್ತರ ಕನ್ನಡ ಜಿಲ್ಲಾ ಸಮಿತಿ ಬಲವಾಗಿ ಒತ್ತಾಯಿಸುತ್ತದೆ.
ಈ ನೀತಿಯು ರಾಜ್ಯದ ಕನ್ನಡ ಹಾಗೂ ಕನ್ನಡಿಗರ ಇತರೇ ಮಾತೃ ಭಾಷೆಗಳಾದ ತುಳು, ಕೊಡವಾ, ತೆಲುಗು, ಉರ್ದು,ಮರಾಠಿ, ಕೊಂಕಣಿ, ಲಂಬಾಣಿ ಮುಂತಾದ ಭಾಷೆಗಳ ಮೇಲೆ ಇಂಗ್ಲೀಷ್ ಹಾಗೂ ಸಂಸ್ಕೃತ, ಹಿಂದಿ ಭಾಷೆಗಳನ್ನು ಹೇರುವ ಹುನ್ನಾರವನ್ನು ಅದು ಹೊಂದಿದೆ. ಇದರಿಂದ ಈ ಭಾಷೆಗಳು ಮತ್ತಷ್ಟು ಅಪಾಯವನ್ನು ಎದುರಿಸಲಿವೆ.
ಮಾತ್ರವಲ್ಲಾ, ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ವನ್ನು ಕಾರ್ಪೊರೇಟ್ ಕಂಪನಿಗಳ ಹಾಗೂ ಖಾಸಗೀ ಶಿಕ್ಷಣ ಸಂಸ್ಥೆಗಳ ಬೃಹತ್ ಲೂಟಿಗೆ ರಾಜ್ಯವನ್ನು ತೆರೆಯುವ ಮುಂದುವರಿದ ಸಂಚಿನ ಭಾಗವಿದಾಗಿದೆ. ಇದರಿಂದ ಲಕ್ಷಾಂತರ ಅಂಗನವಾಡಿ ಕೇಂದ್ರಗಳು, ಏಕೋಪಾಧ್ಯಾಯ ಹಾಗೂ ವಿದ್ಯಾರ್ಥಿಗಳ ಕೊರತೆ ಎದುರಿಸುವ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳು ಮುಚ್ಚಿ ಹೋಗಲಿವೆ.ಬಾಣಂತಿಯರು, ಗರ್ಭಿಣಿ ಮಹಿಳೆಯರು,ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ನೀಡಲಾಗುತ್ತಿರುವ ಪೌಷ್ಟಿಕ ಆಹಾರದ ಯೋಜನೆಯು ಕಣ್ಮರೆಯಾಗಲಿದೆ.
ಅಗ್ಗದರದ ಆಧುನಿಕ ನೈಪುಣ್ಯತೆ ಪಡೆದ ಗುಲಾಮರನ್ನು ಕಾರ್ಪೊರೇಟ್ ಕಂಪನಿಗಳಿಗೆ ಒದಗಿಸುವ ಮತ್ತು ಮತೀಯ ಭಾವನೆಗಳನ್ನು ಹರಡುವ, ರಾಜ್ಯದ ಸಮಗ್ರತೆ, ಏಕತೆಗೆ ಭಂಗ ಉಂಟುಮಾಡುವ ದುರುದ್ದೇಶವನ್ನು ಅದು ಹೊಂದಿದೆ.
ಇದು ಸ್ವಾತಂತ್ರ್ಯ ನಂತರ ದೇಶದಲ್ಲಿ ಶೈಕ್ಷಣಿಕ ಹಾಗೂ ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿನ ಸಾಧನೆಗಳ ಮುನ್ನಡೆಗೆ ಮತ್ತು ರಾಜ್ಯದಲ್ಲಿ ಬೆಳೆಯುತ್ತಿರುವ ಜನತೆಯ ವೈಜ್ಞಾನಿಕ ಮನೋಭಾವದ ಮೇಲೆ ಬಲವಾದ ತಡೆಯಾಗಲಿದೆ.
ಇದು ರಾಜ್ಯದಲ್ಲಿ ಶೈಕ್ಷಣಿಕ ಮತ್ತು ಆ ಸಂಬಂಧಿ ಇತರೆ ವಲಯಗಳ ಉದ್ಯೋಗಿಗಳನ್ನು ವ್ಯಾಪಕವಾದ ನಿರುದ್ಯೋಗಕ್ಕೆ ಮತ್ತು ಸಾರ್ವಜನಿಕ ಕ್ಷೇತ್ರದ ಉದ್ಯೋಗಗಳನ್ನು ಕಡಿತಗೊಳಿಸುವಿಕೆಗೆ ಕಾರಣವಾಗಲಿದೆ. ಅದೇ ರೀತಿ, ದುರ್ಬಲರ ಸಾಮಾಜಿಕ ನ್ಯಾಯದ ಮೀಸಲಾತಿಯ ಹಕ್ಕನ್ನು ಹೊಸಕಿ ಹಾಕಲಿದೆ.
ಇಷ್ಠೊಂದು ಗಂಭೀರ ಅಪಾಯಗಳನ್ನು ರಾಜ್ಯದ ಜನತೆಯ ಮೇಲೆ ಹೇರಲಿರುವ ಇದು ಮತ್ತಷ್ಟು ವ್ಯಾಪಕ ಚರ್ಚೆಗೊಳಪಡಿಸದೇ ಜಾರಿಗೊಳಿಸಬಾರದು.
ಕಳೆದ ಎರಡು ವರ್ಷಗಳ ಕಾಲ ರಾಜ್ಯದ ಜನತೆ ಕೋವಿಡ್ ಸಂಕಷ್ಠದಲ್ಲಿದ್ದುದ ರಿಂದ ಜನತೆಗೆ ವ್ಯಾಪಕವಾಗಿ ಭಾಗಿಯಾಗಿ, ಈ ವಿಚಾರದಲ್ಲಿ ಅಭಿಪ್ರಾಯ ನೀಡಲು ಸಾಧ್ಯವಾಗಿಲ್ಲ ವೆಂಬುದನ್ನು ತಾವು ಗಮನಿಸಬೇಕು.
ಆದ್ದರಿಂದ, ರಾಜ್ಯದ ವಿಧಾನ ಸಭೆ ಹಾಗೂ ಪರಿಷತ್ತಿನಲ್ಲಿ , ಎಲ್ಲ ರಾಜಕೀಯ ಪಕ್ಷಗಳ ಜೊತೆ ಮತ್ತು ಶೈಕ್ಷಣಿಕ ವಲಯದ ತಜ್ಞರು, ಭಾಷಾ ತಜ್ಞರು, ಅಕಾಡೆಮಿಕ್ ವಲಯ ಗಳು, ಶಿಕ್ಷಕರ, ಅಧ್ಯಾಪಕ, ಪ್ರಾಧ್ಯಾಪಕರು, ವಿದ್ಯಾರ್ಥಿ ಸಂಘಟನೆಗಳು ಹಾಗೂ ವಿಶ್ವ ವಿದ್ಯಾನಿಲಯಗಳು ಮುಂತಾದ ಗಣ್ಯ ಸಂಸ್ಥೆಗಳು ಹಾಗೂ ನಾಗರೀಕರ ಜೊತೆ ವ್ಯಾಪಕವಾಗಿ ಚರ್ಚಿಸಲು ಅಗತ್ಯ ಕ್ರಮಗಳನ್ನು ವಹಿಸಬೇಕು ಮತ್ತು ಅದುವರೆಗೆ ಅದನ್ನು ಯಾವುದೇ ಕಾರಣಕ್ಕೆ ಜಾರಿಗೊಳಿಸಬಾರದೆಂದು ಸಿಪಿಐ(ಎಂ)ಜಿಲ್ಲಾ ಸಮಿತಿ ಬಲವಾಗಿ ಒತ್ತಾಯಿಸುತ್ತದೆ.
ತಕ್ಷಣವೇ ಅದರ ಜಾರಿಯನ್ನು ತಡೆಯಲು ತಾವು ಮಧ್ಯ ಪ್ರವೇಶಿಸ ಬೇಕೆಂದು ವಿನಂತಿಸುತ್ತೆವೆ.
(ಶಾಂತಾರಾಮ ನಾಯಕ)ಕಾರ್ಯದರ್ಶಿ, ಜಿಲ್ಲಾ ಸಮಿತಿಸಿಪಿಐ(ಎಂ)9448723035

ನವದೆಹಲಿ: ಎಲ್ ಪಿಜಿ, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಳೆದ ಏಳು ವರ್ಷಗಳಲ್ಲಿ ಈ ವಸ್ತುಗಳ ಬೆಲೆ ಏರಿಕೆಯಿಂದ 23 ಲಕ್ಷ ಕೋಟಿ ರೂಪಾಯಿ ಗಳಿಸಲಾಗಿದೆ ಎಂದು ಬುಧವಾರ ಹೇಳಿದ್ದಾರೆ.
ರೈತರು, ಸಂಬಳದ ವರ್ಗ ಮತ್ತು ಕಾರ್ಮಿಕರು ಡಿಮಾನಿಟೈಸ್ ಆಗುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿಯ ಕೆಲವು ಕೈಗಾರಿಕೋದ್ಯಮಿ ಸ್ನೇಹಿತರು ಹಣಗಳಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಅವರು ಆರೋಪಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಜಿಡಿಪಿಯ ಹೊಸ ಪರಿಕಲ್ಪನೆಯನ್ನು ತಿಳಿಸಿದ್ದಾರೆ. ಜಿಡಿಪಿ ಹೆಚ್ಚಳ ಎಂದರೆ ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಎಂದರ್ಥ.
ಕಳೆದ ಏಳು ವರ್ಷಗಳಲ್ಲಿ ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯಿಂದ ಸರ್ಕಾರ 23 ಲಕ್ಷ ಕೋಟಿ ರೂಪಾಯಿ ಗಳಿಸಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ಆರೋಪಿಸಿದ್ದಾರೆ.
ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆಯಿಂದ ಬಂದ ಈ ಹಣ ಎಲ್ಲಿಗೆ ಹೋಗುತ್ತಿದೆ ಎಂದು ದೇಶದ ಜನರು ಸರ್ಕಾರವನ್ನು ಕೇಳಬೇಕು. “ಒಂದೆಡೆ ನೋಟು ರದ್ದತಿ ಮತ್ತೊಂದೆಡೆ ಹಣಗಳಿಕೆ. ಯಾರ ನೋಟು ರದ್ದತಿ ನಡೆಯುತ್ತಿದೆ -ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಮತ್ತು ಅನೌಪಚಾರಿಕ ವಲಯ, ಎಂಎಸ್‌ಎಂಇಗಳು, ಗುತ್ತಿಗೆ ಕಾರ್ಮಿಕರು, ಸಂಬಳದ ವರ್ಗ ಮತ್ತು ಪ್ರಾಮಾಣಿಕ ಕೈಗಾರಿಕೋದ್ಯಮಿಗಳ ನೋಟು ರದ್ದಾಗುತ್ತಿದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನಾಲ್ಕೈದು ಸ್ನೇಹಿತರು ಮಾತ್ರ ಹಣ ಗಳಿಸುತ್ತಿದ್ದಾರೆ. ಬಡವರು ಮತ್ತು ದುರ್ಬಲರಿಂದ ಪ್ರಧಾನಿಯ ಸ್ನೇಹಿತರಿಗೆ ಸಂಪತ್ತಿನ ವರ್ಗಾವಣೆ ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ವಾಗ್ದಾಳಿ ನಡೆಸಿದ್ದಾರೆ. (kpc)
