

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸೇರುತ್ತಿರುವವ ಸಂಖ್ಯೆ ಹೆಚ್ಚುತ್ತಿದೆ. ಮಧುಬಂಗಾರಪ್ಪ ಕಾಂಗ್ರೆಸ್ ಸೇರುತಿದ್ದಂತೆ ಜನತಾದಳ ಎಸ್. ನ ಅನೇಕರು ಜೆ.ಡಿ.ಎಸ್. ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈಗ ಎರಡನೇ ಹಂತದಲ್ಲಿ ಬಿ.ಜೆ.ಪಿ. ಜನತಾದಳ ಜಾತ್ಯಾತೀತ ಪಕ್ಷಗಳಿಂದ ಅನೇಕರು ಕಾಂಗ್ರೆಸ್ ಸೇರ್ಪಡೆಯಾದರು.
ಜೆ.ಡಿ.ಎಸ್. ಪಕ್ಷದಲ್ಲಿದ್ದು ವಿಧಾನಸಭಾ ಅಭ್ಯರ್ಥಿ ಎಂದು ಬಿಂಬಿತವಾಗಿದ್ದ ಪ್ರದೀಪ ನಾಯಕ ದೇವರಬಾವಿ ಮತ್ತು ಈ ಹಿಂದೆ ಕಾಂಗ್ರೆಸ್ ನಿಂದ ಕುಮಟಾ ವಿಧಾನಸಭಾ ಕ್ಷೇತ್ರದ ಟಿಕೇಟ್ ಕೇಳಿ ಮುನಿಸಿಕೊಂಡು ಪಕ್ಷದಿಂದ ದೂರ ಉಳಿದಿದ್ದ ಯಶೋಧರ ನಾಯ್ಕ ರವಿವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಇವರೊಂದಿಗೆ 25 ಕ್ಕೂ ಹೆಚ್ಚುಜನ ಮುಖಂಡರು ಬಿ.ಜೆ.ಪಿ., ಜೆ.ಡಿ.ಎಸ್. ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವುದಾಗಿ ತಿಳಿದು ಬಂದಿದೆ. ಈ ಸಮಯದಲ್ಲಿ ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

