
ರಾಜ್ಯದಲ್ಲಿ ಕೊರೋನಾ ತುಸು ಹೆಚ್ಚಳ: 1,108 ಹೊಸ ಪ್ರಕರಣ ಪತ್ತೆ, 809 ಸೋಂಕಿತರು ಗುಣಮುಖ, 18 ಮಂದಿ ಸಾವು
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಇಳಿಕೆಯಾಗುತ್ತಾ ಸಾಗಿದ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಂದು ತುಸು ಹೆಚ್ಟಳ ಕಂಡುಬಂದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,108 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,96,5191ಕ್ಕೆ ಏರಿಕೆಯಾಗಿದೆ.

- 1040 ವೈದ್ಯರನ್ನು ನೇಮಕ ಮಾಡಲಾಗಿದೆ: ಡಾ. ಕೆ.ಸುಧಾಕರ್
- ಬೆಂಗಳೂರು: ಕೋವಿಡ್ ಲಸಿಕೆ ಪಡೆಯಲು ಗರ್ಭಿಣಿ, ಬಾಣಂತಿಯರು ಮುಂದು!
- ಡೀಸೆಲ್ ಆರ್ಟಿಸಿ ಬಸ್ಗಳನ್ನು ಸಿಎನ್ಜಿಗೆ ಪರಿವರ್ತಿಸಲು ಯೋಜನೆ: ಸಚಿವ ಬಿ.ಶ್ರೀರಾಮುಲು
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಇಳಿಕೆಯಾಗುತ್ತಾ ಸಾಗಿದ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಂದು ತುಸು ಹೆಚ್ಟಳ ಕಂಡುಬಂದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,108 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,96,5191ಕ್ಕೆ ಏರಿಕೆಯಾಗಿದೆ.
ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಇಂದು 809 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 2.91,1434 ಆಗಿದೆ. ರಾಜ್ಯದಲ್ಲಿ ಸದ್ಯ 16,174 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಂದು 18 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 37,555ಕ್ಕೆ ಏರಿಕೆಯಾಗಿದೆ. ಸೋಂಕಿನ ಶೇಕಡಾವಾರು ಪ್ರಮಾಣ ಶೇಕಡಾ 0.66 ರಷ್ಟಿದ್ದು, ಮರಣ ಪ್ರಮಾಣ ಶೇ. 1.62 ರಷ್ಟಿದೆ.
ಬೆಂಗಳೂರಿನಲ್ಲಿ 308 ಹೊಸ ಪ್ರಕರಣ ದೃಢಪಟ್ಟಿದ್ದು, 203 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಐದು ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 7428 ಸಕ್ರಿಯ ಪ್ರಕರಣಗಳಿವೆ. (kpc)
