ಅರಣ್ಯ ಸಾಗುವಳಿ ಹಕ್ಕು ಕೇಳುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು: ಕಾಗೋಡು ತಿಮ್ಮಪ್ಪ ಸಿಡಿಮಿಡಿ

ಅರಣ್ಯ ಸಾಗುವಳಿ ಹಕ್ಕು ಕೇಳುತ್ತಿರುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು ಸತ್ತಂತಿದ್ದಾರೆ, ಹುಚ್ಚು ಅಧಿಕಾರಿಗಳು ಆಡಳಿತದ ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ.

ಅರಣ್ಯ ಅತಿಕ್ರಮಣ ಮಾಡಿ ಬದುಕುತ್ತಿರುವ ರೈತರಿಗೆ ಸಾಗುವಳಿ ಹಕ್ಕು ಕೊಡಿಸುವ ಸಮಸ್ಯೆ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳದು ಒಂದೇ ನೀತಿ. ಅದು ನಿರ್ಲಕ್ಷ ನೀತಿ. ಅತಿಕ್ರಮಣದಾರರಿಗೆ ಸ್ಪಂದಿಸಲಾಗದ ಜನಪ್ರತಿನಿಧಿಗಳು ಸತ್ತಂತಿದ್ದಾರೆ. ಅತಿಕ್ರಮಣದಾರರ ಸ್ಥಿತಿ ಕಣ್ಣೀರು ತರಿಸುತ್ತಿದೆ ಎಂದು ಹಿರಿಯ ರಾಜಕಾರಣಿ, ಕಾಗೋಡು ಚಳುವಳಿಯ ನೇತಾರ ಕಾಗೋಡು ತಿಮ್ಮಪ್ಪ ಆಕ್ರೋಶ- ನೋವಿನಿಂದ ಹೇಳಿದ್ದಾರೆ.

ಶಿರಸಿಯಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು, ಅರಣ್ಯ ಸಾಗುವಳಿದಾರರು ಕಾಡು ನಾಶಮಾಡಿ ಕೃಷಿ ಮಾಡುತ್ತಿಲ್ಲ. ಈಗ ನಗರಗಳು ನಿರ್ಮಾಣವಾಗಿರುವ ಪ್ರದೇಶದಲ್ಲಿ ಹಿಂದೆ ಅರಣ್ಯವಿತ್ತು. ಬಡವರಿಗೊಂದು- ಶ್ರೀಮಂತರಿಗೊಂದು ನಿಯಮ ಸರ್ಕಾರಗಳು ಮಾಡುತ್ತಿವೆ. ಈ ತಾರತಮ್ಯ ಪರಿಹಾರಕ್ಕೆ ಹೋರಾಟ ಒಂದೇ ದಾರಿ ಎಂದರು.

1972ರಲ್ಲಿ ಗೇಣಿ ಹೋರಾಟ ಆರಂಭಿಸಿ ಲಕ್ಷಾಂತರ ಬಡವರಿಗೆ ಗೇಣಿ ಭೂಮಿ ಕೊಡಿಸಿದ್ದೆವು. ಇಂದು ಅರಣ್ಯ ಅತಿಕ್ರಮಣದಾರರ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತಿದ್ದೇನೆ. ಸರ್ಕಾರ ಇಷ್ಟರಲ್ಲೆ ಸಾಗುವಳಿದಾರರಿಗೆ ನ್ಯಾಯ ಒದಗಿಸಬೇಕಿತ್ತು. ಶಿರಸಿಯ ರವಿ ನಾಯ್ಕ್ರ ಮುಂದಾಳತ್ವದಲ್ಲಿ ಈಗ ನಡೆಯುತ್ತಿರುವ ಹೋರಾಟ ಸಮಸ್ಯೆಗೆ ತಾರ್ಕಿಕ ಅಂತ್ಯ ಕಂಡುಕೊಳ್ಳಲಿದೆಯೆಂಬ ವಿಶ್ವಾಸವಿದೆ. ನಾನಂತೂ ಕೊನೆಯ ಉಸಿರಿರುವ ತನಕ ಅತಿಕ್ರಮಣದಾರರ ಪರವಿರುತ್ತೇನೆ ಎಂದು ಕಾಗೋಡು ಹೇಳಿದರು.

ಅಧಿಕಾರಿಗಳು ಅನಗತ್ಯ ಗೊಂದಲ, ದೌರ್ಜನ್ಯ ಮಾಡುತ್ತಿದ್ದಾರೆ. ಅರಣ್ಯದ ನಡುವೆ ಬದುಕಿರುವ ಮಂದಿಯ ಕಷ್ಟ ಇವರಿಗೆ ಅರ್ಥಮಾಡಿಕೊಳ್ಳುವ ವ್ಯವದಾನವಿಲ್ಲ. ಕಂದಾಯ ಮಂತ್ರಿಯಾಗಿದ್ದಾಗ ಬಗರ್ ಹುಕುಮ್‌ದಾರರಿಗೆ ಹಕ್ಕು ಪತ್ರ ಕೊಡಿಸಲು ಸಾಕಷ್ಟು ಪ್ರಯತ್ನ ಮಾಡಿ ಯಶಸ್ವಿಯಾದೆ. ಅರಣ್ಯ ಅತಿಕ್ರಮಣದಾರರ ಸಂಕಷ್ಟದ ಅರಿವು ಶಿರಸಿ ಶಾಸಕ (ಸ್ಪೀಕರ್ ಕಾಗೇರಿ) ಸೇರಿದಂತೆ ಹಲವು ಎಮ್ಮೆಲ್ಲೆ, ಮಂತ್ರಿಗಳಿಗೆ ಗೊತ್ತಿದೆ. ಆದರೆ ಸಮಸ್ಯೆ ಪರಿಹರಿಸುವ ಇಚ್ಚಾ ಶಕ್ತಿ ಇಲ್ಲದಾಗಿದೆ ಎಂದವರು ವಿಷಾದ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 2,95,018 ಅತಿಕ್ರಮಣದಾರರು ಸಾಗುವಳಿ ಹಕ್ಕಿಗಾಗಿ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಕೇವಲ 15,798 ಮಂದಿಗೆ ಮಾತ್ರ ಹಕ್ಕು ಪತ್ರ ನೀಡಲಾಗಿದೆ. 1,84,358 ಅರ್ಜಿಗಳು ತಿರಸ್ಕೃತವಾಗಿವೆ. ಅಂದರೆ ಮಂಜೂರಿ ಪ್ರಮಾಣ ಶೇ.5.35ರಷ್ಟು ಅಷ್ಟೆ. ಹಾಗಾಗಿ ಹೋರಾಟವಿಲ್ಲದೆ ಮಂಜೂರಿ ಸಾಧ್ಯವೇ ಇಲ್ಲ. ಅಗತ್ಯ ಇದ್ದರೆ ನಾನೂ ಹೋರಾಟಕ್ಕೆ ಇಳಿಯುತ್ತೇನೆ. ಸಧ್ಯಕ್ಕೆ ಸರ್ಚೋಚ್ಛ ನ್ಯಾಯಾಲಯ ಕೂಡ ಅತಿಕ್ರಮಣದಾರರ ತೆರವಿನ ತನ್ನ ಆದೇಶ ತಡೆಹಿಡಿದಿದೆ. ತಿರಸ್ಕೃತ ಅರ್ಜಿ ಮರುಪರಿಶೀಲನೆಗೆ ಸೂಚಿಸಿದೆ ಎಂದು ಕಾಗೋಡು ಹೇಳಿದರು. (gouri.com)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *