

ರಾಜ್ಯ ನೋಂದಾಯಿತ ಖಾಸಗಿ ಶಿಕ್ಷಣ ಸಂಸ್ಥೆ ಗಳ..
ಖಜಾಂಚಿ ಸಂತೋಷ ನಾಯಕ ತೊರ್ಕೆ
ಕರ್ನಾಟಕ ರಾಜ್ಯ ನೋಂದಾಯಿತ ಖಾಸಗೀ ಶಿಕ್ಷಣ ಸಂಸ್ಥೆಗಳ ಒಕ್ಕೂಟ ‘ಪಸ್ಟ್ ಕರ್ನಾಟಕ’ ಎಂಬ ಹೆಸರಿನ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು ಬೆಂಗಳೂರು ರಲ್ಲಿ ಕಛೇರಿ ಯನ್ನು ಹೊಂದಿದೆ. ಶ ಎನ್ ಎಚ್ ಮುಕ್ಕನವರ್ ಕಲಬುರ್ಗಿ ಯವರು ರಾಜ್ಯ ಅಧ್ಯಕ್ಷ ರಾಗಿದ್ದು ಸಂತೋಷ ನಾಯಕ ತೊರ್ಕೆ ರಾಜ್ಯದ ಖಜಾಂಚಿ ಯಾಗಿರುತ್ತಾರೆ.
ರಾಜ್ಯದ ಎಲ್ಲ ವಿಭಾಗಗಳಿಗೆ,ಜಿಲ್ಲಾ ವಾರು ಹಾಗೂ ತಾಲೂಕಾವಾರು ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇಮಿಸಿದ್ದು, ಸಾವಿರಾರು ಶಾಲೆಗಳು ಸದಸ್ಯತ್ವ ಹೊಂದಿವೆ.ಮುಂದಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳ ಕುಂದು ಕೊರತೆಗಳಿಗೆ ಹಾಗೂ ಸಂಸ್ಥೆ ಗಳಿಗೆ ಅನ್ಯಾಯ ವಾದ್ದಲ್ಲಿ ಸರಕಾರಿ ಮಟ್ಟದ ಲ್ಲಿ ಸ್ಪಂದಿಸುವದಾಗಿ ಸಂಘಟನೆ ತಿಳಿ ಸಿದೆ.

ಸೆಪ್ಟೆಂಬರ್ 18-19 ರಂದು ದಾವಣೆಗೆರೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ
ಸೆ.18-19 ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಣ್ಣೆನಗರಿ ದಾವಣಗೆರೆಯಲ್ಲಿ ಸಕರ ಸಿದ್ಧತೆಗಳು ಮಾಡಿಕೊಳ್ಳಲಾಗುತ್ತಿದೆ.

ದಾವಣಗೆರೆ: ಸೆ.18-19 ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಣ್ಣೆನಗರಿ ದಾವಣಗೆರೆಯಲ್ಲಿ ಸಕರ ಸಿದ್ಧತೆಗಳು ಮಾಡಿಕೊಳ್ಳಲಾಗುತ್ತಿದೆ.
ಸೆಪ್ಟಂಬರ್ 18ರ ಸಂಜೆ ದಾವಣಗೆರೆಯ ಅಪೂರ್ವ ರೆಸಾರ್ಟ್‌ನಲ್ಲಿ ಕಾರ್ಯಕಾರಿಣಿ ಸಬೆ ನಡೆಯಲಿದೆ. ಅಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಈ ಸಭೆ ನಡೆಯಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.
ಅಂದು ಬೆಳಿಗ್ಗೆ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಸಭೆಯಲ್ಲಿ ನಳಿನ್ ಕುಮಾರ್ ಕಟೀಲ್ ಪದಾಧಿಕಾರಿಗಳಿಗೆ ಮತ್ತಷ್ಟು ಪಕ್ಷ ಸಂಘಟನೆ, ಬಲಪಡಿಸುವ ಕುರಿತಂತೆ ಸಲಹೆ ನೀಡಲಿದ್ದಾರೆ.
ಸೆಪ್ಟಂಬರ್ 19ರಂದು ತ್ರಿಶೂಲ್ ಕಲಾಭವನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್, ಮಾಜಿ ಸಿಎಂ ಯಡಿಯೂರಪ್ಪ, ಸಚಿವರು, ಶಾಸಕರು, ಎಂಎಲ್‌ಸಿಗಳು, ಸಂಸದರು, ಕೇಂದ್ರದ ನಾಲ್ವರು ಸಚಿವರಾದ ಶೋಭಾ ಕರಂದ್ಲಾಜೆ, ಎನ್. ನಾರಾಯಣ ಸ್ವಾಮಿ, ರಾಜೀವ್ ಚಂದ್ರಶೇಖರ್, ಪ್ರಹ್ಲಾದ್ ಜೋಷಿ ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ. (kpc)
