ಕಾಂಗ್ರೆಸ್ ನ ತೀವ್ರ ವಿರೋಧದ ನಡುವೆ ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯ್ತಿ ತಿದ್ದುಪಡಿ ಮಸೂದೆಗೆ ಅಂಗೀಕಾರ ಸಿಕ್ಕಿದೆ.
ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯ್ತಿ ತಿದ್ದುಪಡಿ ಮಸೂದೆಗೆ ಅಂಗೀಕಾರ
ಬೆಂಗಳೂರು: ಕಾಂಗ್ರೆಸ್ ನ ತೀವ್ರ ವಿರೋಧದ ನಡುವೆ ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯ್ತಿ ತಿದ್ದುಪಡಿ ಮಸೂದೆಗೆ ಅಂಗೀಕಾರ ಸಿಕ್ಕಿದೆ.
ವಿಧೇಯಕ ಮಂಡನೆ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ವಿಧೇಯಕ ಮೂಲಕ ತಾಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳ ಪುನರ್ವಿಂಗಡನೆ ಮಾಡಲಾಗುತ್ತದೆ.
ಈ ತಿದ್ದುಪಡಿ ಮಸೂದೆ ಜಾರಿಗೆ ಬಂದ ತಕ್ಷಣ ತಾಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳ ಎಲ್ಲಾ ಕ್ಷೇತ್ರ ಪುನರ್ವಿಂಗಡನೆ ಅಧಿಸೂಚನೆ ರದ್ದಾಗಲಿದೆ. ಕ್ಷೇತ್ರ ಪುನರ್ವಿಂಗಡನೆ ಆಧಾರದಲ್ಲಿ ಜಾರಿಯಲ್ಲಿರುವ ತಾಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳ ಮೀಸಲಿರಿಸುವ ಎಲ್ಲಾ ಅಧಿಸೂಚನೆಗಳು ರದ್ದಾಗಲಿದೆ.
ಅಧಿಕಾರಕ್ಕಾಗಿ ಯಾರ ಹಿಂದೆಯೂ ಬೀಳಲಿಲ್ಲ, ಬೂಟು ನೆಕ್ಕುವ ಕೆಲಸ ಮಾಡಲಿಲ್ಲ: ಬೊಮ್ಮಾಯಿಗೆ ಸ್ವಾಮಿ ಟಾಂಗ್!
ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒಬ್ಬ ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಎಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸುಬ್ರಮಣಿಯನ್ ಸ್ವಾಮಿ ಠಕ್ಕರ್ ಕೊಟ್ಟಿದ್ದಾರೆ.
ನವದೆಹಲಿ: ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒಬ್ಬ ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಎಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸುಬ್ರಮಣಿಯನ್ ಸ್ವಾಮಿ ಠಕ್ಕರ್ ಕೊಟ್ಟಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ನಾನು ಸುಮ್ಮನೆ ಆರು ಸಾರಿ ಸಂಸದನಾಗಿ ಆಯ್ಕೆಯಾಗಲಿಲ್ಲ. ಅದರಲ್ಲಿಯೂ ಮೂರು ಸಾರಿ ಲೋಕಸಭೆಯಿಂದ ಆರಿಸಿ ಬಂದಿದ್ದೇನೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿದ ನಾನು ಅಧಿಕಾರಕ್ಕಾಗಿ ಯಾರ ಹಿಂದೆಯೂ ಬೀಳಲಿಲ್ಲ, ಯಾರ ಬೂಟು ನೆಕ್ಕುವ ಕೆಲಸ ಮಾಡಲಿಲ್ಲ ಎಂದಿದ್ದಾರೆ.
ಈಗ ಇದೇ ವಿಚಾರಕ್ಕೆ ಟಾಂಗ್ ನೀಡಿರುವ ಸ್ವಾಮಿ, ನಾನು ಯಾವ ಕಾಲದಲ್ಲಿಯೂ ಜನತಾದಳದ ಸದಸ್ಯನಾಗಿರಲಿಲ್ಲ. ಜನತಾ ಪಾರ್ಟಿ ಅಧ್ಯಕ್ಷನಾಗಿದ್ದ ಸಂದರ್ಭ(1989-2013) ಅದನ್ನು ಬಿಜೆಪಿಯೊಂದಿಗೆ ವಿಲೀನ ಮಾಡಿದೆ ಎಂದಿರುವುದು ಸಂಚಲನಕ್ಕೆ ಕಾರಣವಾಗಿದೆ.
ಬೆಲೆ ಏರಿಕೆ ಚರ್ಚೆ ವೇಳೆ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸುಬ್ರಮಣಿಯನ್ ಸ್ವಾಮಿ ಅವರ ಟ್ವೀಟ್ ಗಳನ್ನು ಉಲ್ಲೇಖ ಮಾಡಿದ್ದರು. ನಿಮ್ಮ ಪಕ್ಷದವರೇ ಹೀಗೆ ಹೇಳುತ್ತಿದ್ದಾರಲ್ಲ ಎಂದು ಬಿಜೆಪಿಯನ್ನು ಲೇವಡಿ ಮಾಡಿದ್ದರು, ಇದಕ್ಕೆ ಸಿಎಂ ಬೊಮ್ಮಾಯಿ ಉತ್ತರಿಸುವ ವೇಳೆ, ಸ್ವಾಮಿ ಒಬ್ಬರು ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಆದರೆ ಆರ್ಥಿಕ ತಜ್ಞರಾಗಿ ಜೀನಿಯಸ್ ಎಂದಿದ್ದರು.
(kpc)