ಬೆಂಗಳೂರಿನ ತಾಯಿ-ಮಗ ಭಟ್ಕಳದಲ್ಲಿ ಆತ್ಮಹತ್ಯೆ…!?

ಭಟ್ಕಳ: ಸಮುದ್ರ ಕಿನಾರೆಯಲ್ಲಿ ತಾಯಿ, ಮಗನ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ

ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಯಿಲಮಡಿ ಸಮುದ್ರ ಕಿನಾರೆಯ ಪಕ್ಕದ ಬಂಡೆಗಳ ನಡುವೆ ತಾಯಿ ಹಾಗೂ ಮಗನ ಮೃತದೇಹಗಳು ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಿಂದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

File photo

ಕಾರವಾರ: ಭಟ್ಕಳ ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಯಿಲಮಡಿ ಸಮುದ್ರ ಕಿನಾರೆಯ ಪಕ್ಕದ ಬಂಡೆಗಳ ನಡುವೆ ತಾಯಿ ಹಾಗೂ ಮಗನ ಮೃತದೇಹಗಳು ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಿಂದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 

ಘಟನಾ ಸ್ಥಳದಲ್ಲಿ ದೊರೆತ ದಾಖಲೆಯ ಪ್ರಕಾರ ಮೃತರನ್ನು ಬೆಂಗಳೂರಿನ ಜೆ.ಪಿ. ನಗರದ ನಿವಾಸಿಗಳಾದ ಆದಿತ್ಯ ಬಿ.ಎಸ್. (25) ಹಾಗೂ ಲಕ್ಷ್ಮೀ (48) ಎಂದು ಗುರ್ತಿಸಲಾಗಿದೆ.

https://imasdk.googleapis.com/js/core/bridge3.480.1_en.html#goog_738741864

ಇವರು ಬೆಂಗಳೂರಿನಿಂದ ಪ್ರವಾಸಕ್ಕೆಂದು ಬಂದಿರಬಹುದು ಎಂದು ಅಂದಾಜಿಸಲಾಗಿದ್ದು, ಹುಯಿಲುಮಡಿಗೆ ಹೋಗಿ 2-3 ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಘಟನೆಯ ಕುರಿತಂತೆ ಮಾಹಿತಿ ಪಡೆದ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಘಟನೆ ಕುರಿತು ಸ್ಥಳೀಯರು ಮಾಹಿತಿ ನೀಡಿದ್ದರು. ಮೃತದೇಹಗಳ ಜೊತೆಗೆ ಚಾಲನಾ ಪರವಾನಗಿ ಹಾಗೂ ಆಧಾರ್ ಕಾರ್ಡ್ ಗಳಿದ್ದವು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *