ಶಿವನ ಆತ್ಮಲಿಂಗದ ಪೂಜೆಗೆ ಅರ್ಚಕರ ಕಚ್ಚಾಟ: ಭಕ್ತರಿಗಿಲ್ಲ ಮಹಾಬಲೇಶ್ವರನ ದರ್ಶನ!

gokarna mahabaleshwara temple

ಮಹಾಬಲೇಶ್ವರ ದೇವಾಲಯದ ಉಪಾಧಿವಂತರು ಹಾಗೂ ದೇವಸ್ಥಾನ ಸಮಿತಿ ನಡುವೆ ಪೂಜಾ ಹಕ್ಕಿನ ಕುರಿತು ವಾಗ್ವಾದ ಏರ್ಪಟ್ಟಿದ್ದು, ದೇವಸ್ಥಾನಲ್ಲಿ ಗಲಾಟೆಗೆ ಕಾರಣವಾಯ್ತು. ಈ ಹಿನ್ನೆಲೆ ಸದ್ಯ ದೇವಸ್ಥಾನದಲ್ಲಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಲು ಯಾರಿಗೂ ಅವಕಾಶ ನೀಡದಂತೆ ಸಮಿತಿ ಅಧ್ಯಕ್ಷತೆ ವಹಿಸಿರುವ ಉಪವಿಭಾಗಾಧಿಕಾರಿ ರಾಹುಲ್ ಪಾಂಡೆ ಆದೇಶಿಸಿದ್ದಾರೆ.

ಕಾರವಾರ: ರಾಜ್ಯದಲ್ಲಿಯೇ ಶಿವನ ಆತ್ಮಲಿಂಗವಿರುವ ಏಕೈಕ ದೇವಾಲಯ ಇರುವುದು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ. ದಕ್ಷಿಣಕಾಶಿ ಎಂದೇ ಪ್ರಸಿದ್ಧಿಯಾಗಿರುವ ಮಹಾಬಲೇಶ್ವರ ದೇವಾಲಯಕ್ಕೆ ರಾಜ್ಯ ಸೇರಿದಂತೆ ದೇಶದ ವಿವಿಧೆಡೆಗಳಿಂದ ಭಕ್ತರು ಆಗಮಿಸುತ್ತಾರೆ. ಸದ್ಯ ಕೊರೊನಾ ನಿಯಮ ಸಡಿಲಿಕೆಗೊಳಿಸಿ ದೇವರ ದರ್ಶನಕ್ಕೆ ಅವಕಾಶ ಒದಗಿಸಿದ್ದು, ಭಕ್ತರು ಆಗಮಿಸುತ್ತಿದ್ದಾರೆ.

ಭಕ್ತರಿಗಿಲ್ಲ ಮಹಾಬಲೇಶ್ವರನ ದರ್ಶನ – ಪ್ರತಿಕ್ರಿಯೆ

ಆದರೆ, ಸದ್ಯ ಸುಪ್ರೀಂ ಸುಪರ್ದಿಯಲ್ಲಿರುವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ವಿಚಾರವಾಗಿ ಸ್ಥಳೀಯ ಉಪಾಧಿವಂತರ ನಡುವಿನ ಗಲಾಟೆಯ ಪರಿಣಾಮ ಭಕ್ತರಿಗೆ ಆತ್ಮಲಿಂಗದ ದರ್ಶನ ಇಲ್ಲದಂತಾಗಿದೆ.

ಕೊರೊನಾ ಮಾರ್ಗಸೂಚಿಗಳೊಂದಿಗೆ ಮಹಾಬಲೇಶ್ವರನ ದರ್ಶನ:

ರಾಜ್ಯದಲ್ಲಿ ಕೊರೊನಾ ಕಠಿಣ ನಿಯಮಗಳ ಸಡಿಲಿಕೆಯೊಂದಿಗೆ ದೇವಸ್ಥಾನಗಳನ್ನು ತೆರೆಯಲು ಸರ್ಕಾರ ಅವಕಾಶ ನೀಡಿದೆ. ಈ ಹಿನ್ನೆಲೆ ದಕ್ಷಿಣಕಾಶಿ ಖ್ಯಾತಿಯ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಹ ಭಕ್ತರಿಗೆ ತೆರೆದುಕೊಂಡಿದ್ದು, ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

ದೇವಸ್ಥಾನದಲ್ಲಿ ಯಾವುದೇ ಸೇವೆಗಳಿಗೆ ಅವಕಾಶ ಇಲ್ಲವಾಗಿದ್ದು, ಸರ್ಕಾರದ ಆದೇಶದಂತೆ ಕೊರೊನಾ ಮಾರ್ಗಸೂಚಿಗಳ ಪಾಲನೆಯೊಂದಿಗೆ ಭಕ್ತರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು.

ಉಪಾಧಿವಂತರ ನಡುವಿನ ಪೂಜಾ ಹಕ್ಕಿನ ಗಲಾಟೆ:

ಆದರೆ ಇದೀಗ ದೇವಸ್ಥಾನದಲ್ಲಿ ಅನಾದಿ ಕಾಲದಿಂದ ಪೂಜೆ ಸಲ್ಲಿಸಿಕೊಂಡು ಬರುತ್ತಿದ್ದ ಉಪಾಧಿವಂತರ ನಡುವಿನ ಪೂಜಾ ಹಕ್ಕಿನ ಗಲಾಟೆಯಿಂದ ದೇವಸ್ಥಾನ ಮತ್ತೆ ವಿವಾದದ ಕೇಂದ್ರ ಬಿಂದುವಾಗುವಂತಾಗಿದೆ.

ಪೂಜಾ ಹಕ್ಕಿನ ಕುರಿತು ವಾಗ್ವಾದ:

ಲಾಕ್​ಡೌನ್​ ಅವಧಿಯಲ್ಲಿ ಸುಪ್ರೀಂಕೋರ್ಟ್ ನೇತೃತ್ವದ ಸಮಿತಿಯ ಆಡಳಿತದಲ್ಲಿರುವ ದೇವಸ್ಥಾನದಲ್ಲಿ ಶಿವರಾತ್ರಿ, ಶ್ರಾವಣ ಮಾಸದಂತಹ ವಿಶೇಷ ಸಂದರ್ಭಗಳಲ್ಲಿ ಉಪಾಧಿವಂತರಿಗೆ ದೇವಸ್ಥಾನಕ್ಕೆ ಆಗಮಿಸಿ ನಿಗಧಿತ ಸಮಯದಲ್ಲಿ ವೈಯಕ್ತಿಕ ಪೂಜೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಆದರೆ, ಇದೇ ವಿಚಾರವಾಗಿ ಇದೀಗ ಉಪಾಧಿವಂತರು ಹಾಗೂ ದೇವಸ್ಥಾನ ಸಮಿತಿ ನಡುವೆ ಪೂಜಾ ಹಕ್ಕಿನ ಕುರಿತು ವಾಗ್ವಾದ ಏರ್ಪಟ್ಟಿದ್ದು, ದೇವಸ್ಥಾನಲ್ಲಿ ಗಲಾಟೆಗೆ ಕಾರಣವಾಯ್ತು.

ಉಪವಿಭಾಗಾಧಿಕಾರಿ ಆದೇಶ?

ಈ ಹಿನ್ನೆಲೆ ಸದ್ಯ ದೇವಸ್ಥಾನದಲ್ಲಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಲು ಯಾರಿಗೂ ಅವಕಾಶ ನೀಡದಂತೆ ಸಮಿತಿ ಅಧ್ಯಕ್ಷತೆ ವಹಿಸಿರುವ ಉಪವಿಭಾಗಾಧಿಕಾರಿ ರಾಹುಲ್ ಪಾಂಡೆ ಆದೇಶಿಸಿದ್ದಾರೆ. ಇದರಿಂದಾಗಿ ಭಕ್ತರಿಗೂ ಸಹ ಆತ್ಮಲಿಂಗದ ದರ್ಶನ ಇಲ್ಲದಂತಾಗಿದೆ.

ಸುಪ್ರೀಂ ಸುಪರ್ದಿಯಲ್ಲಿ ದೇವಸ್ಥಾನ:

ಈ ಹಿಂದೆ ಸರ್ಕಾರದ ಸುಪರ್ದಿಯಲ್ಲಿದ್ದ ಮಹಾಬಲೇಶ್ವರ ದೇವಸ್ಥಾನವನ್ನ 2007ರಲ್ಲಿ ಶ್ರೀ ರಾಮಚಂದ್ರಾಪುರ ಮಠದ ಆಡಳಿತಕ್ಕೆ ನೀಡಲಾಗಿತ್ತು. ಇದಾದ ಬಳಿಕ ಹಿಂದಿನಿಂದ ದೇವರಿಗೆ ಪೂಜೆ ಸಲ್ಲಿಸಿಕೊಂಡು ಬಂದಿದ್ದ ಅನುವಂಶೀಯ ಉಪಾಧಿವಂತರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡದ ಹಿನ್ನೆಲೆ ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣವನ್ನ ಸಲ್ಲಿಸಲಾಗಿತ್ತು.

ಈ ಕುರಿತು ಆದೇಶ ನೀಡಿರುವ ಸುಪ್ರೀಂಕೋರ್ಟ್ 2021ರ ಮೇ ತಿಂಗಳಿನಲ್ಲಿ ದೇವಸ್ಥಾನವನ್ನ ಮಠದ ಆಡಳಿತದಿಂದ ತನ್ನ ಸುಪರ್ದಿಗೆ ತೆಗೆದುಕೊಂಡಿದ್ದು, ಮಠದ ಆಡಳಿತದ ಪೂರ್ವದಲ್ಲಿದ್ದ ಪೂಜಾ ವಿಧಾನಗಳನ್ನು ಮುಂದುವರೆಸುವಂತೆ ಆದೇಶಿಸಿ ಆಡಳಿತ ಸಮಿತಿಯೊಂದನ್ನು ರಚನೆ ಮಾಡಿತ್ತು.

ಆದರೆ, ಸಮಿತಿಯಲ್ಲಿನ ಕೆಲ ಮಠದ ಸದಸ್ಯರು ಅನುವಂಶೀಯ ಉಪಾಧಿವಂತರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡುವುದಕ್ಕೆ ನಿರಾಕರಣ ಮಾಡಿದ್ದರಿಂದಾಗಿ ಗೊಂದಲ ಉಂಟಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿಗಳು ಈಗಾಗಲೇ ಯಾವುದೇ ರೀತಿಯ ಗೊಂದಲ ಮಾಡದಂತೆ ಸಮಿತಿಗೆ ಸೂಚನೆ ನೀಡಲಾಗಿದ್ದು, ಈ ಸಂಬಂಧ ಸಭೆ ಕರೆದು ಸೂಕ್ತ ಕ್ರಮ ಕೈಗೊಳ್ಳೋದಾಗಿ ತಿಳಿಸಿದ್ದಾರೆ.

ಅಪ್ಪ – ಅಮ್ಮನ ಜಗಳದಲ್ಲಿ ಕೂಸು ಬಡವಾಯಿತು ಎನ್ನುವಂತೆ ಉಪಾಧಿವಂತರು ಹಾಗೂ ಸಮಿತಿ ನಡುವಿನ ಗೊಂದಲದಿಂದಾಗಿ ಮಹಾಬಲೇಶ್ವರ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಪರದಾಡುವಂತಾಗಿರೋದು ಮಾತ್ರ ಸುಳ್ಳಲ್ಲ. ಈ ಬಗ್ಗೆ ಅಧಿಕಾರಿಗಳು ಗಮನಹರಿಸಿ ಭಕ್ತರ ದರ್ಶನಕ್ಕೆ ಅಡ್ಡಿಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. (ETVB)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *