

ಕಾಂಗ್ರೆಸ್ ಸೇರ್ಪಡೆ ವದಂತಿ: ಶಾಸಕ ಅರವಿಂದ ಬೆಲ್ಲದ ಸ್ಪಷ್ಟನೆ
ನಾನು ಪಕ್ಷ ತೊರೆಯುತ್ತೇನೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ. ನನ್ನ ವಿಚಾರದಲ್ಲಿ ಸುಳ್ಳು ಸಂದೇಶ ಹಬ್ಬಿಸುವ ಪ್ರಯತ್ನ ನಡೆದಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ.
ಕಾಂಗ್ರೆಸ್ ಗೆ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಗುಡ್ ಬೈ?
ಜೆಡಿಎಸ್ ನ ಹಲವು ಶಾಸಕರು ಪಕ್ಷ ತೊರೆದು ಬಿಜೆಪಿ ಇಲ್ಲವೇ ಕಾಂಗ್ರೆಸ್ ಗೆ ವಲಸೆ ಹೋಗಲು ಮಾನಸಿಕವಾಗಿ ಸಿದ್ದವಾಗಿರುವಾಗ ಇದಕ್ಕೆ ವಿರೋಧಾಭಾಸವಾಗಿ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ…

ಬೆಂಗಳೂರು: ಜೆಡಿಎಸ್ ನ ಹಲವು ಶಾಸಕರು ಪಕ್ಷ ತೊರೆದು ಬಿಜೆಪಿ ಇಲ್ಲವೇ ಕಾಂಗ್ರೆಸ್ ಗೆ ವಲಸೆ ಹೋಗಲು ಮಾನಸಿಕವಾಗಿ ಸಿದ್ದವಾಗಿರುವಾಗ ಇದಕ್ಕೆ ವಿರುದ್ಧ ವಾಗಿ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗ, ಕೇಂದ್ರದ ಮಾಜಿ ಸಚಿವ ಸಿ. ಎಂ. ಇಬ್ರಾಹಿಂ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ತೀರ್ಮಾನಿಸಿದ್ದಾರೆ.
ಮೈಸೂರು ಭಾಗದಲ್ಲಿ ಆಪರೇಷನ್ ಜೆಡಿಎಸ್ ಗೆ ಸಿದ್ಧತೆ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಹಲವು ಕಾಂಗ್ರೆಸ್ ನಾಯಕರನ್ನು ಸಂಪರ್ಕಿಸಿದ್ದಾರೆ ಎಂದೂ ಹೇಳಲಾಗುತ್ತಿದೆ.
ಕುಮಾರಸ್ವಾಮಿ ಭೇಟಿ ಬಳಿಕ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ಸೇರ್ಪಡೆ ಕುರಿತು ಬಹಳ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ನವೆಂಬರ್ ಬಳಿಕ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ನಂತರ ಕಾಂಗ್ರೆಸ್ ಸದಸ್ಯತ್ವಕ್ಕೂ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ.
ಈ ಹಿಂದೆ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ಸೇರಲಿದ್ದಾರೆ ಎಂಬ ಬಗ್ಗೆ ಮಾಹಿತಿ ಅರಿತಾಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಬ್ರಾಹಿಂ ಅವರನ್ನು ಭೇಟಿ ಮಾಡಿ ಅವರೊಂದಿಗೆ ಮಾತುಕತೆ ನಡೆಸಿ ಮನವೊಲಿಸಿದ್ದರು. ಆದರೆ, ಇಬ್ರಾಹಿಂ ಅವರು ನಿನ್ನೆ ಬಿಡದಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಸೇರ್ಪಡೆ ಕುರಿತು ಮಾತುಕತೆ ಪೂರ್ಣಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. (kpc)
ಧಾರವಾಡ: ನಾಯಕತ್ವ ಬದಲಾವಣೆ ಹಾಗೂ ಮುಖ್ಯಮಂತ್ರಿ ರೇಸ್ನಲ್ಲಿದ್ದ ಶಾಸಕ ಅರವಿಂದ ಬೆಲ್ಲದ್ ಬಿಜೆಪಿ ತೊರೆಯುತ್ತಾರೆಂಬ ವದಂತಿ ಹರಿದಾಡುತ್ತಿದೆ. ಈ ವದಂತಿ ಹಬ್ಬಿದ ಹಿನ್ನೆಲೆ ಶಾಸಕ ಬೆಲ್ಲದ್ ಸ್ಪಷ್ಟನೆ ನೀಡಿದ್ದಾರೆ.https://3ed2797b98def2c453953177b7352a49.safeframe.googlesyndication.com/safeframe/1-0-38/html/container.html

ಶಾಸಕ ಅರವಿಂದ ಬೆಲ್ಲದ ಸ್ಪಷ್ಟನೆ
ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿದ್ದು, ಈ ಬಗ್ಗೆ ಶಾಸಕ ಬೆಲ್ಲದ ಲಿಖಿತವಾಗಿ ಸ್ಪಷ್ಟನೆ ನೀಡಿದ್ದಾರೆ. ನಾನು ಪಕ್ಷ ತೊರೆಯುತ್ತೇನೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ. ನನ್ನ ವಿಚಾರದಲ್ಲಿ ಕಪೋಲಕಲ್ಪಿತ ಸುದ್ದಿ ವರದಿಯಾಗುತ್ತಿದೆ ಎಂದು ಹೇಳಿದ್ದಾರೆ.

ಶಾಸಕ ಅರವಿಂದ ಬೆಲ್ಲದ ಸ್ಪಷ್ಟನೆ
ಸುಳ್ಳುಗಳನ್ನೇ ನಿಜವೆಂದು ಪ್ರತಿಷ್ಠಾಪಿಸುವ ಕಾಲಘಟ್ಟದಲ್ಲಿ ನಾವಿದ್ದೇವೆ. ಹೀಗಾಗಿ ಈ ಬಗ್ಗೆ ನಾನೇ ಸ್ಪಷ್ಟನೆ ನೀಡುತ್ತಿದ್ದೇನೆ. ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ಆರ್.ಎಸ್.ಎಸ್. ಸೇರಿದ ನಂತರ ಸಂಘ ಪರಿವಾರದ ಬಗೆಗಿನ ನನ್ನ ನಿಷ್ಠೆ ಅಚಲವಾಗಿದೆ. ಬಿಜೆಪಿ ತೊರೆಯುವ ವಿಚಾರ ಕಾಯಾ, ವಾಚಾ ಮನಸಾ ಕಲ್ಪಿಸಿಕೊಳ್ಳಲು ಸಹ ಸಾಧ್ಯವಿಲ್ಲ. ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಬೆಲ್ಲದ ಎಚ್ಚರಿಕೆ ನೀಡಿದ್ದಾರೆ. (etbk)
