ಸದಾ ಕಾಡುವ ಅವ್ವ…

ನಮ್ಮನ್ನು ಮತ್ತೆ ಮತ್ತೆ ಕಾಡುವ ಲಂಕೇಶ್ ರ

” ಅವ್ವ”
ಕವಿತೆ —
———-🌷——–🌷———🌷——-‘

ನನ್ನವ್ವ ಫಲವತ್ತಾದ ಕಪ್ಪು ನೆಲ
ಅಲ್ಲಿ ಹಸಿರು ಪತ್ರದ ಹರವು, ಬಿಳಿಯ ಹೂ ಹಬ್ಬ;
ಸುಟ್ಟಷ್ಟು ಕಸುವು, ನೊಂದಷ್ಟೂ ಹೂ ಹಣ್ಣು
ಮಕ್ಕಳೊದ್ದರೆ ಅವಳ ಅಂಗಾಂಗ ಪುಲಕ;
ಹೊತ್ತ ಬುಟ್ಟಿಯ ಇಟ್ಟು ನರಳಿ ಎವೆ ಮುಚ್ಚಿದಳು ತೆರೆಯದಂತೆ.

ಪಲ್ಲ ಜೋಳವ ಎತ್ತಿ ಅಪ್ಪನ್ನ ಮೆಚ್ಚಿಸಿ ತೋಳ ಬಂದಿಯ ಗೆದ್ದು,
ಹೆಂಟೆಗೊಂಡು ಮೊಗೆ ನೀರು ಹಿಗ್ಗಿ;
ಮೆಣಸು, ಅವರೆ, ಜೋಳ, ತೊಗರಿಯ ಹೊಲವ ಕೈಯಲ್ಲಿ ಉತ್ತು,
ಹೂವಲ್ಲಿ ಹೂವಾಗಿ, ಕಾಯಲ್ಲಿ ಕಾಯಾಗಿ
ಹಸುರು ಗದ್ದೆಯ ನೋಡಿಕೊಂಡು,
ಯೌವನವ ಕಳೆದವಳು ಚಿಂದಿಯ ಸೀರೆ ಉಟ್ಟುಕೊಂಡು.

ಸತ್ತಳು ಈಕೆ:
ಬಾಗು ಬೆನ್ನಿನ ಮುದುಕಿಗೆಷ್ಟು ಪ್ರಾಯ?
ಎಷ್ಟುಗಾದಿಯ ಚಂದ್ರ, ಒಲೆಯೆದುರು ಹೋಳಿಗೆಯ ಸಂಭ್ರಮ?
ಎಷ್ಟು ಸಲ ಈ ಮುದುಕಿ ಅತ್ತಳು
ಕಾಸಿಗೆ, ಕೆಟ್ಟ ಪೈರಿಗೆ, ಸತ್ತ ಕರುವಿಗೆ;
ಎಷ್ಟು ಸಲ ಹುಡುಕುತ್ತ ಊರೂರು ಅಲೆದಳು
ತಪ್ಪಿಸಿಕೊಂಡ ಮುದಿಯ ಎಮ್ಮೆಗೆ?

ಸತಿಸಾವಿತ್ರಿ, ಜಾನಕಿ, ಊರ್ಮಿಳೆಯಲ್ಲ;
ಚರಿತ್ರೆ ಪುಸ್ತಕದ ಶಾಂತ, ಶ್ವೇತ, ಗಂಭೀರೆಯಲ್ಲ;
ಗಾಂಧೀಜಿ, ರಾಮಕೃಷ್ಣರ ಸತಿಯರಂತಲ್ಲ;
ದೇವರ ಪೂಜಿಸಲಿಲ್ಲ; ಹರಿಕತೆ ಕೇಳಲಿಲ್ಲ;
ಮುತ್ತೈದೆಯಾಗಿ ಕುಂಕುಮ ಕೂಡ ಇಡಲಿಲ್ಲ.

ಬನದ ಕರಡಿಯ ಹಾಗೆ
ಚಿಕ್ಕಮಕ್ಕಳ ಹೊತ್ತು
ಗಂಡನ್ನ ಸಾಕಿದಳು ಕಾಸು ಗಂಟಿಕ್ಕಿದಳು
ನೊಂದ ನಾಯಿಯ ಹಾಗೆ ಬೈದು, ಗೊಣಗಿ, ಗುದ್ದಾಡಿದಳು;

ಸಣ್ಣತನ, ಕೊಂಕು, ಕೆರೆದಾಟ ಕೋತಿಯ ಹಾಗೆ;
ಎಲ್ಲಕ್ಕೆ ಮನೆತನದ ಉದ್ಧಾರ ಸೂತ್ರ.
ಈಕೆ ಉರಿದೆದ್ದಾಳು
ಮಗ ಕೆಟ್ಟರೆ, ಗಂಡ ಬೇರೆ ಕಡೆ ಹೋದಾಗ ಮಾತ್ರ.

ಬನದ ಕರಡಿಗೆ ನಿಮ್ಮ ಭಗವದ್ಗೀತೆ ಬೇಡ;
ನನ್ನವ್ವ ಬದುಕಿದ್ದು
ಕಾಳುಕಡ್ಡಿಗೆ, ದುಡಿತಕ್ಕೆ, ಮಕ್ಕಳಿಗೆ;
ಮೇಲೊಂದು ಸೂರು, ಅನ್ನ, ರೊಟ್ಟಿ, ಹಚಡಕ್ಕೆ;
ಸರೀಕರ ಎದುರು ತಲೆಯೆತ್ತಿ ನಡೆಯಲಿಕ್ಕೆ.

ಇವಳಿಗೆ ಮೆಚ್ಚುಗೆ, ಕೃತಜ್ಞತೆಯ ಕಣ್ಣೀರು;
ಹೆತ್ತದ್ದಕ್ಕೆ, ಸಾಕಿದ್ದಕ್ಕೆ; ಮಣ್ಣಲ್ಲಿ ಬದುಕಿ,
ಮನೆಯಿಂದ ಹೊಲಕ್ಕೆ ಹೋದಂತೆ
ತಣ್ಣಗೆ ಮಾತಾಡುತ್ತಲೇ ಹೊರಟು ಹೋದುದಕ್ಕೆ. (-ಪಿ. ಲಂಕೇಶ್)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕ್ಯಾದಗಿ ಅಳ್ಳಿಮಕ್ಕಿಯಲ್ಲಿ ಚಿರತೆ ಚರ್ಮ ವಶ

ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ಕ್ಯಾದಗಿ ಅಳ್ಳಿಮಕ್ಕಿಯಲ್ಲಿ ಚಿರತೆ ಚರ್ಮ ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಮುಂದಿನ ಕ್ರಮ ಜರುಗಿಸಿದೆ.ಇಂದು ದಾಂಡೇಲಿ ಅರಣ್ಯ ಸಂಚಾರಿ ದಳದ...

ಬೈಕ್-‌ ಕಾರ್‌ ನಡುವೆ ಅಪಘಾತ ಬೈಕ್‌ ಸವಾರ ಮೃತ್ಯು

ಸಿದ್ದಾಪುರ : ಕಾರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಹಿಸಿ ಬೈಕ್ ಸವಾರ ಗಂಭೀರ ಗಾಯಗೊಂಡು ಗಾಯಾಳವನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದುಕೊಂಡು...

ನಾಡದೇವಿ ಜನಪರ ವೇದಿಕೆಯಿಂದ ಬಹುಮಾನ ವಿತರಣೆ & ಸನ್ಮಾನ

ಸಿದ್ದಾಪುರ : ನಾಡದೇವಿ ಜನಪರ ವೇದಿಕೆ ಸಿದ್ದಾಪುರ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಸಿದ್ದಾಪುರ (ಬೇಡ್ಕಣಿ ) ಗಳ ಆಶ್ರಯ ದಲ್ಲಿ ಕನ್ನಡ...

ಸಮಾನ ಅವಕಾಶಕ್ಕೆ ಮನವಿ

ಸಿದ್ದಾಪುರ : ತಾಲೂಕಿನಲ್ಲಿ ಸ್ಥಾಪಿಸಲು ಉದ್ದೇಶಿತ ಮೀನುಗಾರರ ಸೊಸೈಟಿ ರಚನೆಯಲ್ಲಿ ಮೀನು ಮಾರಾಟ ಉದ್ಯೋಗವನ್ನು ಮಾಡುತ್ತಿರುವ ಎಲ್ಲಾ ಸಮುದಾಯದವರಿಗೆ ಅವಕಾಶವನ್ನು ಕಲ್ಪಿಸಬೇಕೆಂದು ಮೀನು ಮಾರಾಟಗಾರರ...

ಕನ್ನಡ ರಾಜ್ಯೋತ್ಸವ ಆಚರಣೆ: ಶುಕ್ರವಾರ ಬಹುಮಾನ ವಿತರಣೆ

ಸಿದ್ದಾಪುರ : ನಾಡದೇವಿ ಜನಪರ ವೇದಿಕೆ ಸಿದ್ದಾಪುರ ದಿಂದ ಶುಕ್ರವಾರ ಬೆಳಿಗ್ಗೆ 12 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಬೇಡ್ಕಣಿಯಲ್ಲಿ ಕನ್ನಡ ರಾಜ್ಯೋತ್ಸವದ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *