

ಸೆ.22 ರ ಸಂಜೆ ಕಾಣಿಯಾದ ಬಗ್ಗೆ ಸಿದ್ಧಾಪುರದ ಪೊಲೀಸ್ ಠಾಣೆಯಲ್ಲಿ ಸ್ವತ: ತಂದೆ ರಾಮ ಅಂಬಿಗ ಸೆ 24 ರಂದು ದೂರು ನೀಡಿದ್ದ ಪ್ರಕರಣದ ಕಾಣೆಯಾದ ವ್ಯಕ್ತಿ ಸಿದ್ಧಾಪುರ ರವೀಂದ್ರ ನಗರದ ಪುಂಡಲೀಕ ರಾಮಾ ಅಂಬಿಗ ಇಂದು ಶಿರಸಿಯ ಬಾವಿ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಶಿರಸಿ ಭೂತೇಶ್ವರ ನಗರದ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾದ ಪುಂಡಲೀಕ ಅಂಬಿಗ ಸಾವಿನ ಬಗ್ಗೆ ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.24 ರ ಸಂಜೆ ಮೊಬೈಲ್ ಕರೆನ್ಸಿ ಹಾಕಿಸಿಕೊಂಡು ಬರುತ್ತೇನೆಂದು ಮನೆ ಬಿಟ್ಟವನು ಮರಳಿರಲಿಲ್ಲ. ಮನೆ ಬಿಟ್ಟು ಹೋಗಿ ನಾಲ್ಕು ದಿವಸಗಳ ನಂತರ ಈತನ ಶವ ಶಿರಸಿಯಲ್ಲಿ ಪತ್ತೆಯಾಗಿದೆ. ಅವಿವಾಹಿತ ಪುಂಡಲೀಕ ಗೆ 32 ವರ್ಷ ವಯಸ್ಸಾಗಿತ್ತು.

ಸೆ . 27ರ ‘ಭಾರತ್ ಬಂದ್’ ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ: ಬೆಂಗಳೂರಿನಲ್ಲಿ ಖಾಕಿ ಸರ್ಪಕಾವಲು
ದೇಶದ ಅನ್ನದಾತ ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ (ಸೆ.27) ನಡೆಯುತ್ತಿರುವ ‘ಭಾರತ್ ಬಂದ್’ ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. ‘ರೈತರ ಹಕ್ಕೊತ್ತಾಯದ ಶಾಂತಿಯುತ ಬಂದ್ ಕರೆಗೆ ಪಕ್ಷದ ಬೆಂಬಲವಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ದೇಶದ ಅನ್ನದಾತ ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ (ಸೆ.27) ನಡೆಯುತ್ತಿರುವ ‘ಭಾರತ್ ಬಂದ್’ ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. ‘ರೈತರ ಹಕ್ಕೊತ್ತಾಯದ ಶಾಂತಿಯುತ ಬಂದ್ ಕರೆಗೆ ಪಕ್ಷದ ಬೆಂಬಲವಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ರೈತ ವಿರೋಧಿ ಧೋರಣೆಯಿಂದಾಗಿ ದೇಶದ ಬಹುಸಂಖ್ಯಾತ ಅನ್ನದಾತ ಸಮುದಾಯ ತೀವ್ರ ವಿಷಮ ಪರಿಸ್ಥಿತಿ ಎದುರಿಸುತ್ತಿದೆ. ಕೆಲವೇ ಮಂದಿ ಉದ್ಯಮಿಗಳ ಬೆಂಬಲಕ್ಕೆ ನಿಂತಿರುವ ಬಿಜೆಪಿ ಇಡೀ ಶ್ರಮಿಕ ಜನಸಮುದಾಯವನ್ನು ವಂಚಿಸುತ್ತಿದೆ ಎಂದು ಟೀಕಿಸಿದ್ದಾರೆ.
ಪ್ರಧಾನಿ ಮೋದಿ ಸರ್ಕಾರದ ಕರಾಳ ಶಾಸನ, ನೀತಿ ಹಾಗೂ ಧೋರಣೆ ವಿರುದ್ಧ ರೈತರು ದಿಲ್ಲಿಯ ರಸ್ತೆಗಳಲ್ಲಿ ವರ್ಷಗಳಿಂದ ಹೋರಾಟ ನಡೆಸಿದ್ದಾರೆ. ರೈತರ ಹೋರಾಟವನ್ನು ಹತ್ತಿಕ್ಕುವ ನಿರಂತರ ಪ್ರಯತ್ನ ನಡೆಸಿದ ಬಿಜೆಪಿ ಸರ್ಕಾರಕ್ಕೆ, ಅವರ ನ್ಯಾಯಯುತ ಬೇಡಿಕೆಗಳನ್ನು ಕೇಳುವ ಕನಿಷ್ಟ ಸೌಜನ್ಯ ತೋರಿಲ್ಲ. ಇದು ಬಿಜೆಪಿಯ ಅಮಾನವೀಯ ಮನಃಸ್ಥಿತಿಗೆ ನಿದರ್ಶನ ಎಂದು ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ರೈತರ ಹಿತರಕ್ಷಣೆಗಾಗಿ ದಶಕದ ಹಿಂದೆಯೇ ಭೂಸ್ವಾಧೀನ ಕಾಯ್ದೆಯನ್ನು ಕಾಂಗ್ರೆಸ್ ನೇತ್ರತ್ವದ ಯುಪಿಎ ಸರ್ಕಾರ ಜಾರಿ ಮಾಡಿತ್ತು. ಆದರೆ, ಅದಕ್ಕೆ ವಿರುದ್ದವಾದ ದಿಕ್ಕಿನಲ್ಲಿ ಸಾಗಿದ ಮೋದಿ ಸರ್ಕಾರವು, ಕಳೆದ 7 ವರ್ಷಗಳಲ್ಲಿ ದೇಶದ ರೈತರ ಬದುಕನ್ನು ಅಸಹನೀಯಗೊಳಿಸಿದೆ. ಇದರ ವಿರುದ್ದ ರೈತರು ನಡೆಸುತ್ತಿರುವ ಹೋರಾಟವನ್ನು ಒಬ್ಬ ರೈತನ ಮಗನಾಗಿ ಬೆಂಬಲಿಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷದ ನೈತಿಕ ಬೆಂಬಲವೂ ಇದೆ. ಹೋರಾಟ ಶಾಂತಿಯುತವಾಗಿರಲಿ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ
ಸೆ.27 ಭಾರತ್ ಬಂದ್‌ಗೆ ಕರೆ: ಸಿಲಿಕಾನ್ ಸಿಟಿಯಲ್ಲಿ ಖಾಕಿ ಕಾವಲು
ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ, ಬೆಲೆ ಏರಿಕೆ ವಿರೋಧಿಸಿ ರೈತಪರ ಸಂಘಟನೆಗಳು ಸೋಮವಾರ ಭಾರತ್ ಬಂದ್‌ಗೆ ಕರೆ ನೀಡಿವೆ. ಹೀಗಾಗಿ ಈ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದೆಲ್ಲೆಡೆ ಬಿಗಿ ಭದ್ರತೆ ಕಲ್ಪಿಸಿಲು ಖಾಕಿ ಸಿದ್ಧತೆಗೊಂಡಿದೆ. ನಗರದಲ್ಲಿ ವಿವಿಧ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ಹೀಗಾಗಿ ಬೆಂಗಳೂರಿಗೆ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗುತ್ತಿದೆ. ಟೌನ್ಹಾಲ್ನಿಂದ ಮೈಸೂರು ಬ್ಯಾಂಕ್ವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
